ಶನಿವಾರ, ಜನವರಿ 11, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಲೈವ್ ಬಂದು ಮೇ 31 ರಂದು ಭಾರತಕ್ಕೆ ಬರುತ್ತೇನೆ ಎಂದ ಪ್ರಜ್ವಲ್ ರೇವಣ್ಣ.!

Twitter
Facebook
LinkedIn
WhatsApp
ಲೈವ್ ಬಂದು ಮೇ 31 ರಂದು ಭಾರತಕ್ಕೆ ಬರುತ್ತೇನೆ ಎಂದ ಪ್ರಜ್ವಲ್ ರೇವಣ್ಣ.!

ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ (Prajwal Revanna Case) ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ಅನ್ನು ರದ್ದುಗೊಳಿಸಬೇಕು ಎಂದು ಸಿದ್ದರಾಮಯ್ಯ ಅವರು ಎರಡು ಬಾರಿ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ ರದ್ದುಗೊಳಿಸುವ ಪ್ರಕ್ರಿಯೆ ಆರಂಭಿಸಿದೆ. ಇನ್ನು, ಇದರ ಭಾಗವಾಗಿಯೇ ಕೇಂದ್ರ ಸರ್ಕಾರವು ಪ್ರತಿಕ್ರಿಯೆ ಕೋರಿ ಪ್ರಜ್ವಲ್‌ ರೇವಣ್ಣಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ. ಶೋಕಾಸ್‌ ನೋಟಿಸ್‌ಗೂ ಉತ್ತರ ನೀಡದಿದ್ದರೆ, ಕೇಂದ್ರ ಸರ್ಕಾರವು ಪಾಸ್‌ಪೋರ್ಟ್‌ ರದ್ದುಗೊಳಿಸಲಿದೆ ಎಂದು ಹೇಳಲಾಗುತ್ತಿತ್ತು.

ಇದರ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅವರು ಪ್ರತ್ಯಕ್ಷರಾಗಿದ್ದಾರೆ. ಬರೋಬ್ಬರಿ ಒಂದು ತಿಂಗಳು ಬಳಿಕ ವಿಡಿಯೋ ಮೂಲಕ ಬಂದು ಎಸ್​ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ. ಅಲ್ಲದೇ ವಿದೇಶಕ್ಕೆ ಹೋಗಿರುವ ಬಗ್ಗೆಯೂ ಸ್ಪಷ್ಟನೆ ನಿಡಿದ್ದಾರೆ

ವಿಡಿಯೊದಲ್ಲಿ ಏನಿದೆ?

“ನಾನು ಎಲ್ಲಿದ್ದೇನೆ ಎಂಬ ಮಾಹಿತಿ ನೀಡಲು ಬಂದಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ” ಎಂಬುದಾಗಿ ಪ್ರಜ್ವಲ್‌ ರೇವಣ್ಣ ವಿಡಿಯೊದಲ್ಲಿ ತಿಳಿಸಿದ್ದಾರೆ.

“ನಾನು ಇದೇ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ. ನಾನು ಈ ಪ್ರಕರಣದಿಂದ ಆರೋಪಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ” ಎಂಬುದಾಗಿ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist