ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಕ್ಫ್ ಆಸ್ತಿ ಕಬಳಿಕೆಯ ವರದಿ ಸದನದಲ್ಲಿ ಮಂಡನೆ: ಸಿಎಂ ಬೊಮ್ಮಾಯಿ

Twitter
Facebook
LinkedIn
WhatsApp
ವಕ್ಫ್ ಆಸ್ತಿ ಕಬಳಿಕೆಯ ವರದಿ ಸದನದಲ್ಲಿ ಮಂಡನೆ: ಸಿಎಂ ಬೊಮ್ಮಾಯಿ

ವಿಧಾನಸಭೆ: ರಾಜ್ಯ ವಕ್ಫ್ ಬೋರ್ಡ್‌ನ 2.5 ಲಕ್ಷ ಕೋಟಿ ರು. ಮೌಲ್ಯದ ಆಸ್ತಿ ಕಬಳಿಕೆ ಅವ್ಯವಹಾರ ಕುರಿತ ಅನ್ವರ್‌ ಮಾಣಿಪ್ಪಾಡಿ ಆಯೋಗದ ಪೂರ್ಣ ವರದಿಯನ್ನು ಸದನದಲ್ಲಿ ಮಂಡಿಸಿ ಚರ್ಚೆಗೆ ಅವಕಾಶ ಮಾಡಿಕೊಡಲಾಗುವುದು. ಜತೆಗೆ, ಈ ಕುರಿತು ಉಪ ಲೋಕಾಯುಕ್ತರು ನೀಡಿರುವ ವರದಿ ಆಧಾರದ ಮೇಲೆ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆ ಮಂಡಿಸಿ ಮಾತನಾಡಿದ ಬಿಜೆಪಿ ಸದಸ್ಯರಾದ ಕೆ.ರಘುಪತಿ ಭಟ್‌, ಬಸನಗೌಡ ಪಾಟಿಲ್‌ ಯತ್ನಾಳ್‌ ಹಾಗೂ ಸಂಜೀವ ಮಠಂದೂರು ಅವರು, ‘2.5 ಲಕ್ಷ ಕೋಟಿ ರು. ಮೌಲ್ಯದ 29 ಸಾವಿರ ಎಕರೆ ಜಮೀನನ್ನು ದೊಡ್ಡ ದೊಡ್ಡ ಕಳ್ಳರು ಕಬಳಿಸಿದ್ದಾರೆ. ಕೂಡಲೇ ವರದಿಯನ್ನು ಸದನದಲ್ಲಿ ಮಂಡಿಸಿ ಚರ್ಚೆಗೆ ಅವಕಾಶ ನೀಡಬೇಕು. ಜತೆಗೆ ಸಿಬಿಐ ತನಿಖೆಗೆ ವಹಿಸಿ ತಪ್ಪಿತಸ್ಥರನ್ನು ಬಂಧಿಸಬೇಕು’ ಎಂದು ಒತ್ತಾಯ ಮಾಡಿದರು.

ಇದನ್ನು ಸ್ವಾಗತಿಸುತ್ತಲೇ ಕುಟುಕಿದ ಕಾಂಗ್ರೆಸ್‌ನ ಯು.ಟಿ.ಖಾದರ್‌, ‘ಅಲ್ಪಸಂಖ್ಯಾತರ ಮೇಲೆ ನಿಮಗಿರುವ ಕಾಳಜಿಗೆ ಅಭಿನಂದನೆ. ರಘುಪತಿ ಭಟ್‌ ಸೇರಿದಂತೆ ಇವರಾರ‍ಯರೂ ಹಿಂದೂಗಳ ಸಮಸ್ಯೆಗಳ ಬಗ್ಗೆಯಾಗಲಿ, ಮೀನುಗಾರರ ಸಮಸ್ಯೆ, ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಸ್ಮಾರ್ಚ್‌ ಸಿಟಿ ಬಗ್ಗೆ ಚರ್ಚೆ ಮಾಡಿಲ್ಲ. ಎರಡು ವರ್ಷದಿಂದ ಈ ವಿಚಾರ ಪ್ರಸ್ತಾಪಿಸದೆ ಈಗ 40 ಪರ್ಸೆಂಟ್‌ ವಿಚಾರದಿಂದ ತಪ್ಪಿಸಿಕೊಳ್ಳಲು ಈ ವಿಚಾರ ತಂದಿದ್ದೀರಿ’ ಎಂದು ಟೀಕಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು, ‘ನಿಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರ ಆಸ್ತಿ ರಕ್ಷಣೆಗೆ ಯತ್ನಿಸದೆ ವರದಿ ತಿರಸ್ಕರಿಸಿದಾಗ ನೀವು ಯಾಕೆ ಮಾತನಾಡಲಿಲ್ಲ?’ ಎಂದು ಖಾದರ್‌ ಅವರನ್ನು ಪ್ರಶ್ನಿಸಿದರು. ಈ ವೇಳೆ ಕಾಂಗ್ರೆಸ್‌ ಹಾಗೂ ಬಿಜೆಪಿ ಸದಸ್ಯರ ನಡುವೆ ತೀವ್ರ ವಾಗ್ವಾದವೂ ನಡೆಯಿತು.

ಬಳಿಕ ಮಾತನಾಡಿದ ಬಸವರಾಜ ಬೊಮ್ಮಾಯಿ, ‘40 ಪರ್ಸೆಂಟ್‌ ವಿಚಾರದ ಬಗ್ಗೆಯೂ ಮಾತನಾಡುತ್ತೇವೆ. ಅದರಲ್ಲಿ ಯಾರಾರ‍ಯರ ಹೆಸರು ಬರುತ್ತದೆ ಎಂಬುದು ನಿಮಗೂ ಗೊತ್ತಾಗಲಿದೆ. ಅದಕ್ಕೂ ನೀವೇ ಉತ್ತರ ಕೊಡಬೇಕಾಗುತ್ತದೆ. ಅದು ಭ್ರಷ್ಟಾಚಾರ ಆದರೆ ಪವಿತ್ರವಾದ ಸರ್ಕಾರಿ ವಕ್ಫ್ ಆಸ್ತಿ ಕಬಳಿಕೆಯೂ ಭ್ರಷ್ಟಾಚಾರ ಎಂಬುದು ತಿಳಿದಿರಲಿ. 2.5 ಲಕ್ಷ ಕೋಟಿ ರು. ಆಸ್ತಿ ದೊಡ್ಡ ದೊಡ್ಡ ಭ್ರಷ್ಟರ ಪಾಲಾಗಿದೆ. ಈ ಬಗ್ಗೆ ವರದಿಯನ್ನು ಸದನದಲ್ಲಿ ಮಂಡಿಸಿ ಪ್ರತಿಯೊಬ್ಬ ಸದಸ್ಯರಿಗೂ ಪ್ರತಿ ನೀಡುತ್ತೇವೆ. ಜತೆಗೆ ಈ ಕುರಿತ ಉಪ ಲೋಕಾಯುಕ್ತ ವರದಿ ಆಧರಿಸಿ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ’ ಎಂದು ಭರವಸೆ ನೀಡಿದರು.

ಪರಿಷತ್‌ನಲ್ಲೂ ಮಾಣಿಪ್ಪಾಡಿ ವರದಿ ಪ್ರಸ್ತಾಪ: ವಕ್ಫ್ ಆಸ್ತಿ ಕಬಳಿಕೆ ಕುರಿತ ಅನ್ವರ್‌ ಮಾಣಿಪ್ಪಾಡಿ ವರದಿ ಕುರಿತು ವಿಧಾನಪರಿಷತ್‌ನಲ್ಲೂ ಪ್ರಸ್ತಾಪವಾಗಿದೆ. ಆದರೆ ನಿಯಮ ಪ್ರಕಾರ ನೋಟಿಸ್‌ ನೀಡದ ಕಾರಣ, ವರದಿಯನ್ನು ಸದನದಲ್ಲಿ ಸರ್ಕಾರ ಮಂಡಿಸಬೇಕೆಂದು ಕೋರಿದ ಬಿಜೆಪಿ ಸದಸ್ಯರ ಮನವಿಯನ್ನು ಸಭಾಪತಿ ರಘುನಾಥ್‌ರಾವ್‌ ಮಲ್ಕಾಪುರೆ ತಳ್ಳಿ ಹಾಕಿದರು. ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ವಕ್ಫ್ ಸಚಿವರು ವರದಿಯನ್ನು ಸದನದಲ್ಲಿ ಮಂಡಿಸಬೇಕು ಎಂದು ಆಗ್ರಹಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌ ಆಕ್ಷೇಪ ವ್ಯಕ್ತಪಡಿಸಿದರೂ ಬಿಜೆಪಿ ಸದಸ್ಯರು ಪಟ್ಟು ಮುಂದುವರೆಸಿದರು. ಇದಕ್ಕೆ ಅಸಮಾಧಾನಗೊಂಡ ಸಭಾಪತಿ ಮಲ್ಕಾಪುರೆ, ಪ್ರತಿಪಕ್ಷಗಳ ರೀತಿ ಆಡಳಿತ ಪಕ್ಷದವರು ಮಾತನಾಡಿದರೆ ಹೇಗೆ? ಈ ಬಗ್ಗೆ ಮೊದಲೇ ನೋಟಿಸ್‌ ನೀಡದ ಕಾರಣ ಯಾರಿಗೂ ಮಾತನಾಡಲು ಅವಕಾಶ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist