ಭಾನುವಾರ, ಮೇ 26, 2024
ಎಸ್ಆರ್ ಹೆಚ್ ತಂಡದ ಮಾಲಕಿ ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ಹಿನ್ನೆಲೆ ಏನು..!-ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!-miyazaki mango: ಜಗತ್ತಿನಲ್ಲಿ ದುಬಾರಿ ಮಾವಿನ ಹಣ್ಣಿನ ಪಟ್ಟಿಯಲ್ಲಿ ಮಿಯಾಜಕಿ ಹಣ್ಣಿನ ವಿಶೇಷತೆ ಏನು..?-ಮಧ್ಯಪ್ರಿಯರಿಗೆ ಜೂನ್ ಮೊದಲ ವಾರದಲ್ಲಿ ಎಣ್ಣೆ ಸಿಗೋದು ಡೌಟ್..!-ಹಾರ್ದಿಕ್ ಪಾಂಡ್ಯಾ ಮತ್ತು ನತಾಶಾ ದಾಂಪತ್ಯ ಜೀವನದಲ್ಲಿ ಬಿರುಕು? ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾದ ಸುದ್ದಿ..!-ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ..!-ಅಚ್ಚರಿ ಘಟನೆ; ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ ಕಂದಮ್ಮ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವರುಣನ ಆರ್ಭಟಕ್ಕೆ ಬೆಣ್ಣೆನಗರಿ ಜನಜೀವನ ತತ್ತರ!

Twitter
Facebook
LinkedIn
WhatsApp
ವರುಣನ ಆರ್ಭಟಕ್ಕೆ ಬೆಣ್ಣೆನಗರಿ ಜನಜೀವನ ತತ್ತರ!

ದಾವಣಗೆರೆ: ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಬೆಣ್ಣೆನಗರಿ ತತ್ತರಿಸಿದೆ. ನಗರದ ಕೆಇಬಿ ಕಾಲೋನಿ ಸೇರಿದಂತೆ ಹಲವೆಡೆ ನೀರು ನುಗ್ಗಿದ್ದು, ಜನರು ಪರದಾಡಿದ ಘಟನೆ ನಡೆದಿದೆ.‌ ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಗೆ ಕೆರೆ ಕಟ್ಟೆಗಳು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ‌.

ದಾವಣಗೆರೆ, ಹೊನ್ನಾಳಿ, ಚನ್ನಗಿರಿ, ಮಾಯಕೊಂಡ ಹಾಗೂ ಜಗಳೂರು ಸೇರಿದಂತೆ ಜಿಲ್ಲೆಯ ಎಲ್ಲೆಡೆ ರಾತ್ರಿಪೂರ್ತಿ ಮಳೆ ಸುರಿದಿದ್ದು, ಜನರಿಗೆ ಸಮಸ್ಯೆಯಾಗಿದೆ. ಕೆಲವೆಡೆ ಜಮೀನುಗಳಿಗೆ ನೀರು ನುಗ್ಗಿದ್ದು, ನೂರಾರು ಎಕರೆ ಜಲಾವೃತಗೊಂಡಿದೆ.
ಕೆಲವೆಡೆ ಪ್ರವಾಹ ಭೀತಿ ತಲೆದೋರಿದೆ. ತುಂಗಾ ನದಿಯ ಹೊರಹರಿವಿನಲ್ಲಿಯೂ ಹೆಚ್ಚಳವಾಗಿದ್ದು, ಗಾಜನೂರು ಡ್ಯಾಂನಿಂದ ನೀರು ಹೊರಬಿಡಲಾಗುತ್ತಿದೆ. ತುಂಗಾಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಹೊನ್ನಾಳಿ, ಹರಿಹರ ಮೂಲಕ ಹಾದು ಹೋಗುವ ಈ ನದಿಯಲ್ಲೀಗ ನೀರೋ‌ ನೀರು.
ದಾವಣಗೆರೆ ತಾಲೂಕಿನ ಮಾಗನಹಳ್ಳಿ ಗ್ರಾಮದಲ್ಲಿ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಅಪಾಯವಾದರೂ ಈ ರಸ್ತೆಯಲ್ಲಿ ಜನರು ಸಂಚಾರ ಮಾಡುತ್ತಿರುವುದು ಕಂಡು ಬರುತ್ತಿದೆ. ಬೈಕ್ ಸವಾರರು ಕಷ್ಟಪಟ್ಟುಕೊಂಡೇ ಹೋಗುತ್ತಿರುವುದು ಕಂಡು ಬರುತ್ತಿದೆ.

ಇನ್ನು ಕೊಂಡಜ್ಜಿ‌, ತುಪ್ಪದಹಳ್ಳಿ, ಹಿರೇಮೇಗಳಗೇರೆ ಕೆರೆ ಸೇರಿದಂತೆ ಹಲವು ಕೆರೆಗಳು ತುಂಬಿವೆ. ಇನ್ನು ಒಂದೆಡೆ ಮಳೆ ಬಂದು ನೀರು ಹೆಚ್ಚಾಗಿ ಬರುತ್ತಿದ್ದರೂ ಕೆಲವೆಡೆ ಬೆಳೆದಿದ್ದ ಬೆಳೆ ನೀರು ಪಾಲಾಗಿರುವುದು ರೈತರ ಆತಂಕಕ್ಕೆ‌ ಕಾರಣವಾಗಿದೆ. ಕೆರೆಗಳಿಗೆ ಒಂದೇ ದಿನ ಹತ್ತು ಅಡಿಗೂ ಹೆಚ್ಚು ನೀರು ಹರಿದು ಬಂದಿದೆ. ಇದುವರೆಗೆ ಜಿಲ್ಲೆಯಲ್ಲಿ ಒಟ್ಟು ಕೋಟಿ ರೂಪಾಯಿಗೂ ಅಧಿಕ ನಷ್ಟ ಮಳೆಯಿಂದ ಆಗಿದೆ ಎಂದು ಅಂದಾಜಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

Weather update: ಕರಾವಳಿಯಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ; ಸಮುದ್ರ ದಡಕ್ಕೆ ಇಳಿಯದಂತೆ ಎಚ್ಚರಿಕೆ.!

Weather update: ಕರಾವಳಿಯಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ; ಸಮುದ್ರ ದಡಕ್ಕೆ ಇಳಿಯದಂತೆ ಎಚ್ಚರಿಕೆ.!

Weather update: ಕರಾವಳಿಯಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ; ಸಮುದ್ರ ದಡಕ್ಕೆ ಇಳಿಯದಂತೆ ಎಚ್ಚರಿಕೆ.! Twitter Facebook LinkedIn WhatsApp ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟ ಮುಂದುವರಿದಿದ್ದು, ಗುಡುಗು, ಮಿಂಚು ಸಹಿತ (Rain News) ಬಿರುಗಾಳಿಯೊಂದಿಗೆ ಮಳೆಯಾಗಲಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು