ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಾಂತಿ ಮಾಡಲು ಹೋಗಿ ಬಸ್‌ನಿಂದ ಬಿದ್ದು ಮಹಿಳೆ ಸಾವು

Twitter
Facebook
LinkedIn
WhatsApp
ವಾಂತಿ ಮಾಡಲು ಹೋಗಿ ಬಸ್‌ನಿಂದ ಬಿದ್ದು ಮಹಿಳೆ ಸಾವು

ಹನೂರು: ಕೆಎಸ್‌ಆರ್‌ಟಿಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬಳು ವಾಂತಿ ಮಾಡಲು ಬಾಗಿಲು ಬಳಿ ತೆರಳಿದ್ದ ವೇಳೆ ಆಯತಪ್ಪಿ ನೆಲಕ್ಕೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಲೆ ಮಹದೇಶ್ವರ ಬೆಟ್ಟ-ತಾಳುಬೆಟ್ಟ ಮಾರ್ಗಮಧ್ಯೆಯ ಶನೈಶ್ವರಸ್ವಾಮಿ ದೇವಸ್ಥಾನದ ಬಳಿಯ ತಿರುವಿನಲ್ಲಿ ನಡೆದಿದೆ.
ಮಲೆ ಮಹದೇಶ್ವರ ಬೆಟ್ಟ ಸಮೀಪದ ಹಳೆಯೂರು ಗ್ರಾಮದ ನಿವಾಸಿ ಕುಳ್ಳಮಾದಿ(50) ಮೃತಪಟ್ಟ ದುರ್ದೈವಿ. ಈಕೆ ಗುರುವಾರ ಮ.ಬೆಟ್ಟದ ಸಂಬಂಧಿಕರ ಮನೆಗೆ ಆಗಮಿಸಿದ್ದು, ಸಂಜೆ 4.30ರಲ್ಲಿ ಮೈಸೂರಿನ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‍ನಲ್ಲಿ ವಡಕೆಹಳ್ಳ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಮ.ಬೆಟ್ಟ-ತಾಳುಬೆಟ್ಟ ಮಾರ್ಗಮಧ್ಯೆಯ ಶನೈಶ್ವರಸ್ವಾಮಿ ದೇವಸ್ಥಾನದ ಬಳಿಯ ತಿರುವಿನಲ್ಲಿ ವಾಂತಿ ಮಾಡಲು ಬಾಗಿಲು ಬಳಿ ತೆರಳಿದ್ದಾಗ ಆಯತಪ್ಪಿ ನೆಲಕ್ಕೆ ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು, ಸ್ಥಳದಲ್ಲಿಯೇ ಮೃತಪಟ್ಟರು.
ಬಳಿಕ ಮೃತ ದೇಹವನ್ನು ಚಾಲಕ ಹರೀಶ್, ನಿರ್ವಾಹಕ ಸೋಮನಾಥ್ ಬಿರಾದಾರ್ ಹಾಗೂ ಪ್ರಯಾಣಿಕರು ಸೇರಿಕೊಂಡು ಅದೇ ಬಸ್ಸಿನಲ್ಲಿ ಮ.ಬೆಟ್ಟದ ಸರ್ಕಾರಿ ಆಸ್ಪತ್ರೆಗೆ ಕೊಂಡೋಯ್ಯಲಾಯಿತು. ಈ ಸಂಬಂಧ ಮೃತರ ಸಂಬಂಧಿ ಕೆಂಪಮಾದಮ್ಮ ಅವರು ಚಾಲಕ ಹಾಗೂ ನಿರ್ವಾಹಕರ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಮ.ಬೆಟ್ಟ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಯಿತು. ಬಳಿಕ ಮೃತ ದೇಹವನ್ನು ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಸ್ ಅನ್ನು ವಶಕ್ಕೆ ಪಡೆದು ಮುಂದಿನ ಕ್ರಮಕೈಗೊಂಡಿದ್ದಾರೆ.

ಶವವನ್ನು ಬಟ್ಟೆಯ ಜೋಲಿಯಲ್ಲಿ ಹೊತ್ತು ಸಾಗಿದ ಕುಟುಂಬಸ್ಥರು, ಗ್ರಾಮಸ್ಥರು: ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ರಾತ್ರಿ ತಡವಾಗಿ ಕುಟುಂಬಸ್ಥರಿಗೆ ನೀಡಲಾಯಿತು. ಆದರೆ ಮ.ಬೆಟ್ಟದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 108 ವಾಹನದ ಸೌಲಭ್ಯ ಇದ್ದರೂ ಚಾಲಕನಿಲ್ಲದ ಪರಿಣಾಮ ಶವವನ್ನು ಗ್ರಾಮಕ್ಕೆ ಸಾಗಿಸಲು ಪರದಾಡುವಂತಾಯಿತು. ಇದರಿಂದ ತೀವ್ರ ತೊಂದರೆ ಅನುಭವಿಸಿದ ಮೃತರ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಈ ಬಗ್ಗೆ ಬೇಸತ್ತು ಬಟ್ಟೆಯ ನೆನೆಯಲ್ಲಿ ಜೋಲಿ ಮಾಡಿಕೊಂಡು 8 ಕಿ.ಮೀ ಕಾಡಿನ ಹಾದಿಯಲ್ಲಿ ಶವವನ್ನು ಹೆಗಲ ಮೇಲೆ ಹೊತ್ತುಕೊಂಡು ಗ್ರಾಮಕ್ಕೆ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದರು. ಇದರಿಂದ ಶವ ಸಾಗಿಸಲು ವಾಹನ ವ್ಯವಸ್ಥೆ ಇಲ್ಲದ ಪರಿಣಾಮ ಗ್ರಾಮಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು