
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಬೆಂಗಳೂರು: ಕೊರೊನಾ ವೈರಾಣುವಿನ ರೂಪಾಂತರ ತಳಿ ಓಮಿಕ್ರಾನ್ ಪತ್ತೆಯಾಗಿರುವ ದೇಶಗಳಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ದಕ್ಷಿಣ ಆಫ್ರಿಕಾ, ಬೋಟ್ಸ್‌ವಾನ, ಜಿಂಬಾಬ್ವೆ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ಹೊಸ ತಳಿಯ ಕೊರೊನಾ ವೈರಾಣು ಪತ್ತೆಯಾಗಿದೆ. ಹೊಸ ತಳಿಯ ವೈರಸ್ ಪತ್ತೆಯಾಗಿರುವ ದೇಶಗಳಿಂದ ವಿಮಾನಗಳ ಮೂಲಕ ಬರುವ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ನಡೆಸಲಾಗುವುದು. ನೆಗೆಟಿವ್ ವರದಿ ಬಂದರಷ್ಟೇ ನಗರ ಪ್ರವೇಶಕ್ಕೆ ಅನುಮತಿ ನೀಡಲಾಗುವುದು. ಕೋವಿಡ್ ಸೋಂಕು ದೃಢಪಟ್ಟವರನ್ನು ಪ್ರತ್ಯೇಕ ವಾಸದಲ್ಲಿ ಇರಿಸಿ, ಚಿಕಿತ್ಸೆ ನೀಡಲಾಗುವುದು ಎಂದರು.
ರಾಜ್ಯದ ಯಾವುದೇ ಭಾಗದಲ್ಲೂ ಹೊಸ ತಳಿಯ ಕೊರೊನಾ ವೈರಾಣು ಪತ್ತೆಯಾಗಿಲ್ಲ. ಆದರೂ, ಮುನ್ನೆಚ್ಚರಿಕೆ ಕ್ರಮವಾಗಿ ವಿದೇಶಗಳಿಂದ ಬರುವವರನ್ನು ಪರೀಕ್ಷೆಗೆ ಒಳಪಡಿಸಿ, ನಿಗಾ ಇಡಲಾಗುತ್ತಿದೆ ಎಂದು ತಿಳಿಸಿದರು.
ಕೇರಳದಿಂದ ರಾಜ್ಯಕ್ಕೆ ಬಂದಿರುವ ಅರೆ ವೈದ್ಯಕೀಯ ಸಿಬ್ಬಂದಿಯಲ್ಲಿ ಕೋವಿಡ್ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಂಡಿದೆ. ಈ ಕಾರಣದಿಂದ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಗಡಿ ಭಾಗಗಳಲ್ಲಿ ಕಟ್ಟೆಚ್ಚರಕ್ಕೆ ಆದೇಶಿಸಲಾಗಿದೆ. ಕೇರಳದಿಂದ ಬರುವವರಲ್ಲಿ ಎರಡು ಡೋಸ್ ಲಸಿಕೆ ಪಡೆದಿದ್ದು, ಆರ್‌ಟಿ– ಪಿಸಿಆರ್ ವಿಧಾನದಲ್ಲಿ ಪಡೆದ ಕೋವಿಡ್ ನೆಗೆಟಿವ್ ಇದ್ದವರಿಗೆ ಮಾತ್ರ ರಾಜ್ಯಕ್ಕೆ ಪ್ರವೇಶ ನೀಡಲಾಗುವುದು ಎಂದು ಹೇಳಿದರು.
ಧಾರವಾಡ, ಬೆಂಗಳೂರು ಮತ್ತು ಮೈಸೂರು ನಗರಗಳಲ್ಲಿ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ದೃಢಪಟ್ಟಿದೆ. ಅಂತಹ ಸ್ಥಳಗಳನ್ನೂ ನಿರ್ಬಂಧಿತ ವಲಯ ಎಂದು ಘೋಷಿಸಲಾಗುತ್ತಿದೆ. ಧಾರವಾಡದ ಎಸ್.ಡಿ.ಎಂ. ಕಾಲೇಜಿನ ವೈದ್ಯರು, ನರ್ಸ್‌ಗಳಿಗೆ ಕೋವಿಡ್ ಪತ್ತೆ ಪರೀಕ್ಷೆ ಮಾಡಿಸಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಈವರೆಗೆ 91 ಲಕ್ಷ ಜನರಿಗೆ ಮೊದಲನೇ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಡಿಸೆಂಬರ್ ಅಂತ್ಯದೊಳಗೆ ಶೇಕಡ 70ರಷ್ಟು ಮಂದಿಗೆ ಎರಡನೇ ಡೋಸ್ ಲಸಿಕೆ ನೀಡುವ ಗುರಿ ಇದೆ. ಈಗ ರಾಜ್ಯದಲ್ಲಿ 80 ಲಕ್ಷ ಡೋಸ್ ಲಸಿಕೆ ದಾಸ್ತಾನಿದೆ ಎಂದರು.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್