ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ – ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Twitter
Facebook
LinkedIn
WhatsApp
DB 04012023 leopard 3

ಮಡಿಕೇರಿ: ಇಬ್ಬರು ಶಾಲಾ ವಿದ್ಯಾರ್ಥಿನಿಯರ (Student) ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಹಿನ್ನೆಲೆಯಲ್ಲಿ ಶಾಲಾ ಮುಖ್ಯ ಶಿಕ್ಷಕನ (Head Teacher) ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಕೊಡಗು (Kodagu) ಜಿಲ್ಲೆಯ ಮಡಿಕೇರಿ (Madikeri) ತಾಲೂಕು ವ್ಯಾಪ್ತಿಯ ಪ್ರೌಢಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಅಲ್ಲಿನ ಮುಖ್ಯ ಶಿಕ್ಷಕ ಮನೋಹರ್‌ ನಾಯಕ್ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಆರೋಪ ಕೇಳಿಬಂದಿದೆ. ಈ ಬಗ್ಗೆ ಆ ಇಬ್ಬರು ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿಯ ಪೋಷಕರು ಪೊಲೀಸ್ ದೂರು ನೀಡಿದ್ದಾರೆ.

ದೂರು ಬಂದ ಹಿನ್ನೆಲೆಯಲ್ಲಿ ಮನೋಹರ ನಾಯಕ್‌ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ಮನೋಹರ್ ನಾಯಕನನ್ನು ಅಮಾನತುಗೊಳಿಸಿದೆ. ಮನೋಹರ್‌ ನಾಯಕ್‌ ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕೊಡಗು ಮಹಿಳಾ ಠಾಣಾ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ