- ಕರಾವಳಿ
- 10:40 ಫೂರ್ವಾಹ್ನ
- ಜನವರಿ 25, 2023
ವಿಧಾನಸಭಾ ಚುನಾವಣೆಗೆ ಕಾರ್ಕಳದಿಂದ ಸ್ಪರ್ಧೆ ಖಚಿತ – ಹುಟ್ಟುಹಬ್ಬದಂದೇ ಮುತಾಲಿಕ್ ಅಧಿಕೃತ ಘೋಷಣೆ

ಉಡುಪಿ: ಮುಂದಿನ ವಿಧಾನಸಭಾ ಚುನಾವಣೆಗೆ (Karnataka Assembly Election) ಕಾರ್ಕಳದಿಂದಲೇ (Karkala) ಸ್ಪರ್ಧಿಸುತ್ತೇನೆ ಎಂದು ಶ್ರೀರಾಮ ಸೇನೆಯ (Sri Ram Sene) ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ಘೋಷಣೆ ಮಾಡಿದ್ದಾರೆ.
ಕಾರ್ಕಳದಲ್ಲಿ 68ನೇ ಹುಟ್ಟುಹಬ್ಬದ ಆಚರಿಸಿಕೊಂಡ ಮುತಾಲಿಕ್, 2023ರ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುವುದಾಗಿ ಘೋಷಿಸಿದರು. ನಾನು ಕಾರ್ಕಳದಿಂದಲೇ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ. ಸಾವಿರಾರು ಕಾರ್ಯಕರ್ತರ ಒತ್ತಡದಿಂದ ನೋವಿನ ಧನಿಯಾಗಿ ಈ ಘೋಷಣೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ.
ಏಳೆಂಟು ಬಾರಿ ಕ್ಷೇತ್ರವನ್ನು ಸುತ್ತಾಡಿದ್ದೇನೆ ಜನ ಬೆಂಬಲಿಸಿದ್ದಾರೆ. ಕ್ಷೇತ್ರದಲ್ಲಿ ಹಿಂದೂಗಳಿಗೆ ನೋವಾಗಿದೆ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಹಿಂದುತ್ವ-ಭ್ರಷ್ಟಾಚಾರ ವಿರುದ್ಧ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಮುತಾಲಿಕ್ ಶಪಥಗೈದಿದ್ದಾರೆ.
ನಾನು ಬಿಜೆಪಿ (BJP) ಸಿದ್ಧಾಂತದ ವಿರೋಧಿ ಅಲ್ಲ. ಬಿಜೆಪಿಯೊಳಗಿನ ಕೆಲ ವ್ಯಕ್ತಿಗಳು, ಅವರ ತತ್ವ ಸಿದ್ಧಾಂತ ವಿರುದ್ಧ ನನ್ನ ಹೋರಾಟ. ಬಿಜೆಪಿ ಅಂದು ಮಾಡಿದ ಅವಮಾನ ಎಂದಿಗೂ ಮರೆಯೋದಿಲ್ಲ. ಹಿಂದುತ್ವ ಪ್ರಾಮಾಣಿಕತೆ ಇದ್ದರೆ ನನಗೆ ಬಿಜೆಪಿ ಕಾರ್ಕಳದಲ್ಲಿ ಬೆಂಬಲ ಕೊಡಬೇಕು ಮನವಿ ಮಾಡಿಕೊಂಡಿದ್ದಾರೆ. ಕಾರ್ಕಳ ಇಂಧನ ಸಚಿವ ಸುನಿಲ್ ಕುಮಾರ್ ಅವರು ಸ್ಪರ್ಧಿಸಿ ಗೆಲುವು ಕಂಡ ವಿಧಾನಸಭಾ ಕ್ಷೇತ್ರ. ಇದೀಗ ಪ್ರಮೋದ್ ಮುತಾಲಿಕ್ ಕಾರ್ಕಳದಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿ ಕುತೂಹಲ ಮೂಡಿಸಿದ್ದಾರೆ