ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಧಾನ ಸಭಾ ಅಧಿವೇಶನ ಕರೆಯದಿದ್ದರೆ ಧರಣಿ-ಎಚ್ಚರಿಕೆ ನೀಡಿದ ಎಚ್ಡಿ.ರೇವಣ್ಣ.

Twitter
Facebook
LinkedIn
WhatsApp
ವಿಧಾನ ಸಭಾ ಅಧಿವೇಶನ ಕರೆಯದಿದ್ದರೆ ಧರಣಿ-ಎಚ್ಚರಿಕೆ ನೀಡಿದ ಎಚ್ಡಿ.ರೇವಣ್ಣ.

ಹಾಸನ: ವಿಧಾನ ಸಭೆ ಸ್ಪೀಕರ್ ಕೂಡಲೇ ಸಭೆ ಕರೆಯದಿದ್ದರೆ ಜುಲೈ ಮೊದಲ ವಾರ ವಿಧಾನಸೌಧ ಆವರಣದ ಗಾಂಧೀಜಿ ಪ್ರತಿಮೆ ಎದುರು ಜೆಡಿಎಸ್ ಶಾಸಕರ ಜತೆಗೂಡಿ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಎಚ್.ಡಿ. ರೇವಣ್ಣ ಎಚ್ಚರಿಕೆ ನೀಡಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೊರೊನಾ ಎರಡನೇ ಅಲೆ ನಿಯಂತ್ರದಲ್ಲಿ ಸಂಪೂರ್ಣ ವಿಫಲವಾಗಿದೆ. ಮತ್ತೆ ಮೂರನೇ ಆಲೆ ಬರಲಿದೆ ಎಂದು ತಜ್ಞರು ಅಭಿಪ್ರಾಯ ತಿಳಿಸಿದ್ದಾರೆ. ಹಾಗಾಗಿ ಈ ಬಾರಿ ಸರ್ಕಾರ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿದೆ. ಆದ್ದರಿಂದ ಕೂಡಲೇ ವಿಧಾನ ಸಭೆ ಕರೆಯಬೇಕು ಎಂದು ಒತ್ತಾಯಿಸಿದರು.

ವಿಧಾನ ಸಭಾ ಅಧಿವೇಶನ ಕರೆಯದಿದ್ದರೆ ಧರಣಿ-ಎಚ್ಚರಿಕೆ ನೀಡಿದ ಎಚ್ಡಿ.ರೇವಣ್ಣ.

ಸಿಎಂ ಪರ ಮತನಾಡಿದ ಶಾಸಕನ ಕ್ಷೇತ್ರಕ್ಕೆ 250 ಕೋಟಿ ರೂ. ಅನುದಾನ ನೀಡಲಾಗಿದೆ. ನಾನು ದ್ವೇಶದ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದ ಮುಖ್ಯ ಮಂತ್ರ ಏನೇನು ಮಾಡಿದ್ದಾರೆ. ಸಮ್ಮಿಶ್ರ ಸರ್ಕಾರದ ಅವಧಿಯ ಕಾಮಗಾರಿಗಳು ಯಾಕೆ ನನೆಗುದಿಗೆ ಬಿದ್ದಿವೆ ಎಂಬುದರ ಬಗ್ಗೆ ಸಮಯ ಬಂದಾಗ ದಾಖಲೆ ಸಮೇತ ಹೇಳುವೆ ಎಂದರು.
ರಾಜ್ಯ ಸರ್ಕಾರ ದಿವಾಳಿಯಾಗಿದೆಯೋ ಏನು ಎಂಬುದರ ಬಗ್ಗೆ ಕೂಡಲೇ ಶ್ವೇತ ಪತ್ರ ಹೊರಡಿಸಬೇಕು. ಬಜೆಟ್ ಬಳಿಕ ಕ್ಯಾಬಿನೆಟ್ ಅನುಮೋದನೆ ಪಡೆದುಕೊಂಡು ಸಾರ್ವಜನಿಕರ ತೆರಿಗೆ ಹಣವನ್ನು ಬೇಕಾಬಿಟ್ಟಿ ಖರ್ಚು ಮಾಡಲು ಆಗವುದಿಲ್ಲ. ಈ ಬಗ್ಗೆ ಚರ್ಚಿಸಬೇಕಿದ್ದು, ಕೂಡಲೇ ಸಭೆ ಕರೆಯಬೇಕು ಎಂದು ಹೇಳಿದರು.

5 ಲಕ್ಷ ರೂ. ಆಮಿಷ;
ಅರಸೀಕೆರೆ ನಗರಸಭೆಯ ಜೆಡಿಎಸ್ ನ 7 ಮಂದಿ ಸದಸ್ಯರಿಗೆ 25 ಲಕ್ಷ ರೂ. ಆಮಿಷ ಒಡ್ಡಲಾಗಿದೆ ಎಂದು ಅಭಾಗದ ಜನ ಮಾತನಾಡುತ್ತಿದ್ದಾರೆ. 7 ಜನ ಸದಸ್ಯರಲ್ಲಿ ಯಾರೂ ಈವರೆಗೂ ಜೆಡಿಎಸ್‌ಗೆ ರಾಜೀನಾಮೆ ನೀಡಿಲ್ಲ. ಪಕ್ಷದ ವತಿಯಿಂದ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದರು.
ಆಪರೇಷನ್ ಕಮಲ ಮಾಡಲು ಒಂದು ರಾಷ್ಟಿಯ ಪಕ್ಷಕ್ಕೆ ನಾಚಿಕೆ ಆಗಬೇಕು. ಕುಮಾರಸ್ವಾಮಿ ಸರ್ಕಾರವನ್ನು ಬೀಳಿಸಲು ಪ್ರಮುಖ ಪಾತ್ರ ವಹಿಸಿದ್ದ ಮುಖ್ಯಮಂತ್ರಿಯ ಕಾರ್ಯದರ್ಶಿಯನ್ನು ಬಿಟ್ಟು ಈ ರೀತಿ ಕೆಲಸ ಮಾಡಿಸಲಾಗುತ್ತಿದೆ. ಮುಂದೆ ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ದೇವರು ಇವರಿಗೆ ಶಿಕ್ಷೆ ಕೊಡದೆ ಬಿಡುವುದಿಲ್ಲ. ಇದಕ್ಕೆಲ್ಲ ಹೆದರಿ ನಾವು ಓಡಿ ಹೋಗುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಶಾಸಕರಾದ ಕೆ.ಎಂ.ಶಿವಲಿ೦ಗೇಗೌಡ, ಕೆ.ಎಸ್.ಲಿಂಗೇಶ್, ಎಚ್.ಕೆ. ಕುಮಾರಸ್ವಾಮಿ ಇದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು