ವೃಷಬಾದ್ರಿ ಪ್ರೊಡಕ್ಷನ್ ನಿರ್ಮಾಣದ ಐತಿಹಾಸಿಕ ಸತ್ಯ ಘಟನೆಗಳ ಆಧಾರಿತ 'ಉರೀಗೌಡ ನಂಜೇಗೌಡ' ಚಿತ್ರದ ಮುಹೂರ್ತ ಮೇ 18ರಂದು ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ. ಡಾ.ಸಿ.ಎನ್.ಅಶ್ವಥ್ ನಾರಾಯಣ್ ಚಿತ್ರಕಥೆ ಇರುವ ಈ ಚಿತ್ರವನ್ನು ಆರ್.ಎಸ್.ಗೌಡ ನಿರ್ದೇಶನ ಮಾಡುತ್ತಿದ್ದಾರೆ.#UriGowda #NanjeGowda #Munirathna #VrushabhadriProductions pic.twitter.com/wS2SuW9vdI
— Munirathna (@MunirathnaMLA) March 18, 2023
- ಸಿನೆಮಾ
- 10:50 ಅಪರಾಹ್ನ
- ಮಾರ್ಚ್ 18, 2023
ವಿವಾದದ ನಡುವೆಯೂ `ಉರಿಗೌಡ – ನಂಜೇಗೌಡ’ ಚಿತ್ರೀಕರಣಕ್ಕೆ ಮುಹೂರ್ತ ಫಿಕ್ಸ್!

ಬೆಂಗಳೂರು: ಮಂಡ್ಯದ ಒಕ್ಕಲಿಗ ಕಲಿಗಳು ಎಂದು ಬಿಂಬಿಸಲಾಗುತ್ತಿರುವ `ಉರಿಗೌಡ, ನಂಜೇಗೌಡ’ (Urigowda, Nanjegowda) ಹೆಸರಿನಲ್ಲಿ ಸಿನಿಮಾವೊಂದು (Cinema) ಮೂಡಿ ಬರುತ್ತಿದ್ದು, ಮೇ 18ರಂದು ಚಿತ್ರೀಕರಣಕ್ಕೆ ಮುಹೂರ್ತ ನಿಗದಿ ಮಾಡಲಾಗಿದೆ.
ಚಿತ್ರಕ್ಕೆ `ಉರಿಗೌಡ-ನಂಜೇಗೌಡ’ (1750-1799 ಐತಿಹಾಸಿಕ ಘಟನೆಗಳನ್ನು ಆಧರಿಸಿದ ಸತ್ಯಕಥೆ) ಎಂಬ ಶೀರ್ಷಿಕೆಯನ್ನಿಡಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ಮುನಿರತ್ನ (Munirathna) ಚಿತ್ರದ ಪೋಸ್ಟರ್ ಸಹ ಹಂಚಿಕೊಂಡಿದ್ದಾರೆ.
ವೃಷಬಾದ್ರಿ ಪ್ರೊಡಕ್ಷನ್ ನಿರ್ಮಾಣದ ಐತಿಹಾಸಿಕ ಸತ್ಯ ಘಟನೆಗಳ ಆಧಾರಿತ ‘ಉರೀಗೌಡ ನಂಜೇಗೌಡ’ ಚಿತ್ರದ ಮುಹೂರ್ತ ಮೇ 18ರಂದು ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ. ಡಾ.ಸಿ.ಎನ್ ಅಶ್ವಥ್ ನಾರಾಯಣ್ (CN Ashwath Narayan) ಅವರ ಚಿತ್ರಕಥೆ ಇರುವ ಈ ಚಿತ್ರವನ್ನು ಆರ್.ಎಸ್.ಗೌಡ (RS Gowda) ನಿರ್ದೇಶನ ಮಾಡುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.
ಕುರುಕ್ಷೇತ್ರ ಸೇರಿದಂತೆ ಹಲವು ಭಾರೀ ಬಜೆಟ್ ಸಿನಿಮಾಗಳನ್ನ ನಿರ್ಮಾಣ ಮಾಡಿರುವ ಮುನಿರತ್ನ, ಈ ಬಾರಿ ವಿವಾದಿತ ವ್ಯಕ್ತಿಗಳ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಸದ್ಯ ಯಾವ ರೀತಿ ಈ ಚಿತ್ರ ಮೂಡಿಬರಲಿದೆ ಎಂಬುದು ಕುತೂಹಲವಾಗಿದೆ.