ಸೋಮವಾರ, ಅಕ್ಟೋಬರ್ 2, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಶ್ವ ದಾಖಲೆಗಾಗಿ ದಟ್ಟ ಮಂಜಿನಲ್ಲಿ ಕುಳಿತು ಯೋಗಾಭ್ಯಾಸ

Twitter
Facebook
LinkedIn
WhatsApp
haveri student yoga

ಹಾವೇರಿ/ಬೀದರ್‌ : ವಿಶ್ವದಾಖಲೆಗಾಗಿ ಏಕಕಾಲಕ್ಕೇ 12 ಸಾವಿರ ವಿದ್ಯಾರ್ಥಿಗಳು ಹಾವೇರಿಯ ಕ್ರೀಡಾಂಗಣದಲ್ಲಿ ಭಾನುವಾರ ಮುಂಜಾನೆಯೇ ದಟ್ಟವಾದ ಮಂಜಿನಲ್ಲಿ ಯೋಗಾಭ್ಯಾಸ ನಡೆಸಿದರು.

ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ವಿಶ್ವದಾಖಲೆಗಾಗಿ ಯೋಗಾಥಾನ್  ಕಾರ್ಯಕ್ರಮ ನಡೆಯಿತು. ದಟ್ಟವಾದ ಮಂಜಿನಲ್ಲೇ ಕುಳಿತು ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳಿಂದ ಆಗಮಿಸಿದ್ದ 12 ಸಾವಿರ ವಿದ್ಯಾರ್ಥಿಗಳು ಯೋಗಾಥಾನ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಈ ವೇಳೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿಪಂ ಸಿಇಓ ಮೊಹಮ್ಮದ ರೋಷನ್, ಎಸ್ಪಿ ಹನುಮಂತರಾಯ, ಶಾಸಕ ನೆಹರು ಓಲೇಕಾರ, ನಗರಸಭೆ ಅಧ್ಯಕ್ಷ ಸಂಜೀವ ನೀರಲಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಯೋಗಾಥಾನ್‌ನಲ್ಲಿ ಭಾಗವಹಿಸಿದ್ದರು

ಬೀದರ್‌ನಲ್ಲಿ 3 ಸಾವಿರ ಜನ ಭಾಗಿ: ರಾಜ್ಯಾದ್ಯಂತ ಗಿನ್ನಿಸ್ ದಾಖಲೆಗಾಗಿ‌ ನಡೆಯುತ್ತಿರುವ ಯೋಗಾಥಾನ್ ಕಾರ್ಯಕ್ರಮದಲ್ಲಿ ಗಡಿ ಜಿಲ್ಲೆ ಬೀದರ್‌ನಲ್ಲಿ (Bidar) 3 ಸಾವಿರಕ್ಕೂ ಅಧಿಕ ಜನ ಏಕಕಾಲಕ್ಕೆ ಯೋಗದಲ್ಲಿ ಭಾಗಿಯಾದರು. ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಬೀದರ್ ನಗರದ ನೇಹರು ಸ್ಟೇಡಿಯಂನಲ್ಲಿ ಯೋಗಾಥಾನ್ ಕಾರ್ಯಕ್ರಮ ನಡೆಯಿತು.

ಯೋಗಾಥಾನ್ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಗೋವಿಂದ್ ರೆಡ್ಡಿ ಚಾಲನೆ ನೀಡಿದ್ದು, ಎಸ್ಪಿ ಕಿಶೋರ್ ಬಾಬು, ಶಾಸಕ ರಹೀಂಖಾನ್, ಯೋಗಪಟುಗಳು, ಶಾಲಾ–ಕಾಲೇಜಿನ ವಿದ್ಯಾರ್ಥಿಗಳು, ಅಧಿಕಾರಿಗಳು, ಸಾರ್ವಜನಿಕರು ಯೋಗಾಥಾನ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ