ವೇಣೂರು : ನಯನಾಡಿನ ಬಾಡಾರಿನಲ್ಲಿ ಕೊರಗಜ್ಜಕಟ್ಟೆಗೆ ಬೆಂಕಿ ಹಚ್ಚಿ ಹೀನಕೃತ್ಯ..!
ವೇಣೂರು : ಭೂಮಿ ವಿಚಾರಕ್ಕೆ ಗಲಾಟೆ ನಡೆದು ಕಾರ್ಣಿಕ ದೈವ ಕೊರಗಜ್ಜನ (Koragajja) ಗುಡಿಗೇ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದ ಬಾಡಾರಿನಲ್ಲಿ ನಡೆದಿದೆ. ಬಾಡಾರಿನ ಕೊರಗಕಲ್ಲು ಬಳಿ ಕೊರಗಜ್ಜನ ಕಟ್ಟೆ ಇದೆ. ಸಾರ್ವಜನಿಕರು ಸಮಿತಿ ರಚಿಸಿ ವರ್ಷಂಪ್ರತಿ ಕೊರಗಜ್ಜನ ಆರಾಧನೆ ಮಾಡುತ್ತಿದ್ದರು.
ಆದರೆ ಕೊರಗಜ್ಜನ ಗುಡಿ ಇರುವ ಜಾಗದ ಬಗ್ಗೆ ಸ್ಥಳೀಯ ವ್ಯಕ್ತಿ ಆಕ್ಷೇಪ ವ್ಯಕ್ತಪಡಿಸಿದ್ದರು. ಗುಡಿ ಇರುವ ಜಾಗ ಖಾಸಗಿ ಕುಟುಂಬಸ್ಥರದ್ದು, ಸಾರ್ವಜನಿಕ ಹಸ್ತಕ್ಷೇಪ ಮಾಡಬಾರದೆಂದು ತಗಾದೆ ಎತ್ತಿದ್ದರು. ಈ ತಗಾದೆ ಕೆಲವು ವರ್ಷಗಳಿಂದ ಏರ್ಪಟ್ಟಿತ್ತು. ಆದರೀಗ ಆ ವ್ಯಕ್ತಿ ಗುಡಿಗೆ ಬೆಂಕಿ ಹಚ್ಚಿದ್ದು, ಇದನ್ನು ಖಂಡಿಸಿದ ಸ್ವಾಮಿ ಕೊರಗಜ್ಜ ಸಮಿತಿಯು ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ
ಕುಂದಾಪುರ: ಹಾಡುಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಲೂಟಿ
ಕುಂದಾಪುರ: ಹಾಡಹಗಲೇ ಮನೆಗೆ ನುಗ್ಗಿ ಮೂರು ಲಕ್ಷಕ್ಕೂ ಅಧಿಕ ಚಿನ್ನಾಭರಣ ಕದ್ದೋಯ್ದ ಘಟನೆ ಶಿರೂರಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಶಿರೂರು ಮಾರ್ಕೆಟ್ ಬಳಿ ರಾಕೇಶ್ ಪಟಗಾರ್ ದಂಪತಿಗಳು ವೃತ್ತಿಯಲ್ಲಿ ಶಿಕ್ಷಕರಾಗಿದ್ದು ಮಧ್ಯಾಹ್ನ ಊಟ ಮುಗಿಸಿ ಕಾಲೇಜಿಗೆ ಮರಳಿದ ಸಮಯ ನೋಡಿ ಹಿಂಬಾಗಿಲಿನಿಂದ ನುಗ್ಗಿದ ಕಳ್ಳರು 32 ಗ್ರಾಂ ಮಾಂಗಲ್ಯ ಸರ ಸೇರಿದಂತೆ, 10 ಗ್ರಾಂ ಕಿವಿಯೋಲೆ, 100 ಗ್ರಾಂ ಬೆಳ್ಳಿ ಹಾಗೂ 1000 ರೂಪಾಯಿ ನಗದು ಕದ್ದೊಯ್ದಿದ್ದಾರೆ.
ಇನ್ನು ಪಕ್ಕದ ಮನೆಗೆ ತೆರಳಿ ಅಲ್ಲೂ ಕೂಡ ಬಾಗಿಲು ಒಡೆಯುತ್ತಿರುವುದನ್ನು ನೋಡಿ ಮನೆಯವರು ಕೂಗಿದ ಬಳಿಕ ಕಳ್ಳರು ಪರಾರಿಯಾಗಿದ್ದಾರೆ. ಕೆಲವೇ ದಿನಗಳ ಹಿಂದೆ ಇದೇ ಭಾಗದಲ್ಲಿ ಸಂಜೆ ವೇಳೆ ಸುಮಾರು 35 ಲಕ್ಷಕ್ಕೂ ಅಧಿಕ ಚಿನ್ನಾಭರಣ ಕದ್ದೋಯದ್ದ ಬೆನ್ನಲೇ ಈ ಗಗನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.
ಶಿರೂರಿನಲ್ಲಿ ಹೆಚ್ಚುತ್ತಿರುವ ಗಾಂಜಾ ಚಟುವಟಿಕೆಗಳು ಇಂತಹ ಪ್ರಕರಣಕ್ಕೆ ಇನ್ನಷ್ಟು ದಾರಿ ಮಾಡಿಕೊಡುತ್ತಿದೆ. ಪೊಲೀಸರು ಇಂತಹಾ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವುದರ ಜೊತೆಗೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.