ಶನಿವಾರ, ಡಿಸೆಂಬರ್ 14, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶಶಿಕಲಾ ಜೊಲ್ಲೆ ಮನೆ ಮೇಲೆ ಮೊಟ್ಟೆ ಎಸೆದು ಪ್ರತಿಭಟನೆ!

Twitter
Facebook
LinkedIn
WhatsApp
ಶಶಿಕಲಾ ಜೊಲ್ಲೆ ಮನೆ ಮೇಲೆ ಮೊಟ್ಟೆ ಎಸೆದು ಪ್ರತಿಭಟನೆ!

ಗರ್ಭಿಣಿಯರು ಮತ್ತು ಮಕ್ಕಳಲ್ಲಿ ಪೌಷ್ಠಿಕತೆಯನ್ನು ಹೆಚ್ಚಿಸುವ ಉದ್ದೇಶದಿಂದ ರಾಜ್ಯದಲ್ಲಿ ಮಾತೃಪೂರ್ಣ ಯೋಜನೆ ಜಾರಿಯಲ್ಲಿದೆ. ಈ ಯೋಜನೆಯ ಮೂಲಕ ಗರ್ಭಿಣಿ ಮತ್ತು ಮಕ್ಕಳಿಗೆ ಶಿಶುವಿಹಾರಗಳ ಮೂಲಕ ಮೊಟ್ಟೆಯನ್ನು ವಿತರಿಸಲಾಗುತ್ತಿದೆ. ಅದಕ್ಕಾಗಿ ಮೊಟ್ಟೆ ಖರೀದಿ ಮಾಡಲು ಟೆಂಡರ್‌ ಕರೆದಿದ್ದು, ಟೆಂಡರ್‌ ನೀಡಲು ಸಚಿವೆ ಶಶಿಕಲಾ ಜೊಲ್ಲೆ ಮತ್ತು ಗಂಗಾವತಿಯ ಶಾಸಕ ಪರಣ್ಣ ಮುನವಳ್ಳಿ ಲಂಚ ಪಡೆದಿದ್ದಾರೆ ಎಂದು ಖಾಸಗಿ ವಾಹಿನಿ ನ್ಯೂಸ್‌ ಫಸ್ಟ್ ರಹಸ್ಯ ಕಾರ್ಯಚರಣೆ ನಡೆಸಿದ್ದು, ವಿಡಿಯೋ ಬಿಡುಗಡೆ ಮಾಡಿದೆ.
ನ್ಯೂಸ್‌ ಫಸ್ಟ್ ಮಾಡಿದ ವರದಿಯಲ್ಲಿ ಈ ಮುಂಚೆ ನೇರವಾಗಿ ಅಂಗನವಾಡಿ ಕೇಂದ್ರಗಳು ಮೊಟ್ಟೆ ಖರೀದಿ ಮಾಡುತ್ತಿದ್ದವು. ಆದರೆ ಈಗ ಕೇಂದ್ರೀಕೃತವಾಗಿ ಮೊಟ್ಟೆ ಪೂರೈಕೆಗೆ ಟೆಂಡರ್ ಕರೆದಿದ್ದೇವೆ. ನಿಮಗೆ ಟೆಂಡರ್ ಸಿಗುವಂತೆ ಮಾಡುತ್ತೇವೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಅದೇ ರೀತಿಯಲ್ಲಿ ಸಚಿವೆಯ ಸಂಪರ್ಕ ಕೊಟ್ಟ ಶಾಸಕ ಪರಣ್ಣ ಮುನವಳ್ಳಿ “ಟೆಂಡರ್ ನಿಮಗೆ ಆಗಬೇಕಾದರೆ ಪ್ರತಿ ತಿಂಗಳು ಸಚಿವರಿಗೆ ಒಂದು ಕೋಟಿ ಮತ್ತು ತನಗೆ 30 ಲಕ್ಷ ಹಣ ನೀಡಬೇಕು” ಎಂದು ಬೇಡಿಕೆಯಿಟ್ಟಿರುವುದು ಸಹ ರಹಸ್ಯ ಕಾರ್ಯಾಚರಣೆಯಲ್ಲಿ ದಾಖಲಾಗಿದೆ.
ಟೆಂಡರ್‌ಗಾಗಿ ಸಚಿವೆಯ ಸೂಚನೆಯಂತೆ ಚಿಕ್ಕೋಡಿಯ ಸಂಜಯ್ ಅರಗಿ ಎಂಬುವವರು 25 ಲಕ್ಷ ಅಡ್ವಾನ್ಸ್ ಹಣ ಪಡೆದಿದ್ದಾರೆ ಎಂದು ನ್ಯೂಸ್‌ಫಸ್ಟ್ ತಂಡ ತಿಳಿಸಿದೆ. ಪಾರದರ್ಶಕವಾಗಿ ಮತ್ತು ಪಕ್ಷಪಾತರಹಿತವಾಗಿ ಟೆಂಡರ್ ನಡೆಸಬೇಕಾದ ಸಚಿವರು, ಲಂಚ ಪಡೆದು ಅಕ್ರಮವಾಗಿ ಟೆಂಟರ್ ಕೊಡಲು ಮುಂದಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇದು ಮಕ್ಕಳಿಗೆ, ಗರ್ಭಿಣಿಯರಿಗೆ ತಲುಪಬೇಕಾದ ಹಣದ ವ್ಯವಸ್ಥಿತ ಲೂಟಿಯಾಗಿದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಚಿವರ ಭ್ರಷ್ಟಾಚಾರವನ್ನ ಖಂಡಿಸಿ, ಬೆಂಗಳೂರಿನ ಜೆ.ಸಿ ನಗರ ರಸ್ತೆಯಲ್ಲಿರುವ ಶಶಿಕಲಾ ಜೊಲ್ಲೆಯವರ ಅಧಿಕೃತ ಮುಂದೆ ಜಮಾಯಿಸಿದ NSUI ಕಾರ್ಯಕರ್ತರು, ನಿವಾಸಕ್ಕೆ ಮೊಟ್ಟೆಗಳನ್ನು ಎಸೆದು ಪ್ರತಿಭಟನೆ ನಡೆಸಿದ್ದಾರೆ.
ಭ್ರಷ್ಟಾಚಾರ ನಡೆಸಿರುವ ಸಚಿವರು ಈ ಕೂಡಲೇ ರಾಜೀನಾಮೆ ನೀಡಬೇಕು ಮತ್ತು ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಒಂದೆಡೆ ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಹಣ ನೀಡದೆ ಸ್ಥಗಿತಗೊಳಿಸುವ ಹುನ್ನಾರ ನಡೆಸುತ್ತಿರುವ ಬಿಜೆಪಿ ಸರ್ಕಾರ, ಇನ್ನೊಂದೆಡೆ ಅದೇ ಕಾರ್ಯಕ್ರಮಗಳನ್ನು ತಮ್ಮ ಜೇಬು ತುಂಬಿಕೊಳ್ಳಲು ದುರ್ಬಳಕೆ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಮಾತೃಪೂರ್ಣ’ ಯೋಜನೆಯಡಿ ಗರ್ಭಿಣಿಯರು ಮತ್ತು ಮಕ್ಕಳಿಗೆ ನೀಡುವ ಮೊಟ್ಟೆಗಳ ಖರೀದಿಯಲ್ಲಿ ಲಂಚ ಪಡೆದಿರುವ ಹಗರಣದಲ್ಲಿ ಭಾಗಿಯಾಗಿರುವ ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ
ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಈ ಬಗ್ಗೆ ಲೋಕಾಯುಕ್ತರು ತನಿಖೆ ನಡೆಸಬೇಕು. ಲಂಚದ ಹಣಕ್ಕೆ ಬಿಜೆಪಿ ನಾಯಕರು ಜೊಲ್ಲು ಸುರಿಸುತ್ತಿರುವವರು ಎಂದು ಲೋಕಕ್ಕೆ ಗೊತ್ತಿದೆ. ಆದರೆ ಇವರು ಸಣ್ಣಮಕ್ಕಳು ಮತ್ತು ಗರ್ಭಿಣಿಯರ ತಟ್ಟೆಗೂ ಕೈಹಾಕುವ ಮಟ್ಟಕ್ಕೆ ಇಳಿದಿರುವುದು ನ್ಯೂಸ್‌ಫಸ್ಟ್ ನನಡೆಸಿರುವ ಕುಟುಕು ಕಾರ್ಯಾಚರಣೆಯಿಂದ ಬಯಲಾಗಿದೆ” ಎಂದಿದ್ದಾರೆ.
ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ: ಶಶಿಕಲಾ ಜೊಲ್ಲೆ ಪ್ರತಿಕ್ರಿಯೆ
ಖಾಸಗಿ ವಾಹಿನಿಯ ಮೂಲಕ ರಹಸ್ಯ ಕಾರ್ಯಾಚರಣೆ ನಡೆಸಿ ನನ್ನನ್ನು ಆರೋಪಿತಳನ್ನಾಗಿ ಮಾಡುವ ಪ್ರಯತ್ನ ನಡೆಸುತ್ತಿರುವುದು ದುರದೃಷ್ಟಕರ. ಖಾಸಗಿ ವಾಹಿನಿಯಲ್ಲಿ ಹೇಳುತ್ತಿರುವ ಹಾಗೆ ಮೊಟ್ಟೆ ಖರೀದಿಗೆ ಇದುವರೆಗೂ ಯಾವದೇ ಟೆಂಡರ್ ಕರೆದಿಲ್ಲ. ಅಲ್ಲದೇ ಟೆಂಡರ್ ನೀಡಲು ನಾನು ವಯಕ್ತಿಕವಾಗಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯಿಂದ ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ ಎಂದು ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು