ಬುಧವಾರ, ಅಕ್ಟೋಬರ್ 4, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾಲಾ ಬಸ್‌ನಿಂದ ಬಿದ್ದು 5ರ ಕಂದಮ್ಮ ಸಾವು

Twitter
Facebook
LinkedIn
WhatsApp
Ramanagara accident 1 780x450 1

ರಾಮನಗರ: ಚಾಲಕ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಶಾಲಾ ಬಸ್‌ನಿಂದ (School Bus) ಕೆಳಗೆ ಬಿದ್ದು 5 ವರ್ಷದ ಬಾಲಕಿ (Girl) ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಹಾರೋಹಳ್ಳಿ ಬಳಿಯ ಪಿಚ್ಚನಕೆರೆಯಲ್ಲಿ ಸೋಮವಾರ ಸಂಜೆ ನಡೆದಿದೆ.

ತಾಲೂಕಿನ ಸಿದ್ದೇಗೌಡಹಳ್ಳಿ ಗ್ರಾಮದ ನಿವಾಸಿ ಸ್ವಾಮಿ ಅವರ ಪುತ್ರಿ ರಕ್ಷಾ (5) ಸಾವನ್ನಪ್ಪಿರುವ ಬಾಲಕಿ. ರಾಮನಗರ (Ramanagara) ತಾಲೂಕಿನ ಬಿಡದಿ ಬಳಿಯ ಶ್ರೀ ಸಾಯಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಬಾಲಕಿ ಯುಕೆಜಿ ತರಗತಿಯಲ್ಲಿ ಓದುತ್ತಿದ್ದಳು. ಸೋಮವಾರ ಸಂಜೆ ಬಾಲಕಿ ಎಂದಿನಂತೆ ಶಾಲೆ ಮುಗಿಸಿ ಬಸ್‌ನಲ್ಲಿ ಬರುತ್ತಿದ್ದಳು. ಶಾಲಾ ಬಸ್‌ನ ಬಾಗಿಲು ಹಾಕಿರದ ಹಿನ್ನೆಲೆಯಲ್ಲಿ ತಿರುವಿನಲ್ಲಿ ಆಕೆ ಬಸ್‌ನಿಂದ ಕೆಳಗೆ ಬಿದ್ದಿದ್ದಾಳೆ.

ಬಸ್‌ನಿಂದ ಬಾಲಕಿ ಹೊರ ಬಿದ್ದ ಪರಿಣಾಮ ಬಸ್‌ನ ಹಿಂದಿನ ಚಕ್ರ ಆಕೆಯ ತಲೆ ಮೇಲೆ ಹರಿದಿದೆ. ಇದರಿಂದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ದುರ್ಘಟನೆಗೆ (Accident) ಶಾಲಾ ಬಸ್ ಸಿಬ್ಬಂದಿಯ ಅಜಾಗರೂಕತೆಯೇ ಕಾರಣ ಎಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತ ಬಾಲಕಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಗೆ ಸಂಬಂಧಿಸಿದಂತೆ ಕನಕಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ