ಸೋಮವಾರ, ಅಕ್ಟೋಬರ್ 2, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಿಕ್ಷೆ ಕಡಿತ ಅಧಿಕಾರ ಪೋಕ್ಸೋ ನ್ಯಾಯಾಲಯಕ್ಕಿಲ್ಲ: ಹೈಕೋರ್ಟ್‌ ಆದೇಶ

Twitter
Facebook
LinkedIn
WhatsApp
court3 1674189485

ಬೆಂಗಳೂರು (ಜ.20): ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಅಪರಾಧ ಕೃತ್ಯಕ್ಕೆ ನಿಗದಿತ ಪ್ರಮಾಣದ ಶಿಕ್ಷೆಯನ್ನು ಕಡಿಮೆ ಮಾಡುವ ಯಾವುದೇ ಅಧಿಕಾರ ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಇಲ್ಲ ಎಂದು ಹೈಕೋರ್ಟ್‌ ಆದೇಶಿಸಿದೆ. ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಕಾಲವಾಡಿ ನಿವಾಸಿ ಶೇಖ್‌ ರೌಫ್‌ ಎಂಬಾತನಿಗೆ ಸ್ಥಳೀಯ ಪೋಕ್ಸೋ ವಿಶೇಷ ನ್ಯಾಯಾಲಯವು 7 ವರ್ಷದ ಬದಲಾಗಿ ಐದು ವರ್ಷ ಜೈಲು ಶಿಕ್ಷೆ ವಿಧಿಸಿದ ಕ್ರಮ ಪ್ರಶ್ನಿಸಿ ಭಾಲ್ಕಿ ಟೌನ್‌ ಠಾಣಾ ಪೊಲೀಸರು (ರಾಜ್ಯ ಸರ್ಕಾರ) ಹೈಕೋರ್ಟ್‌ಗೆ ಕ್ರಿಮಿನಲ್‌ ಮೇಲ್ಮನವಿ ಸಲ್ಲಿಸಿದ್ದರು. 

ಈ ಮೇಲ್ಮನವಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರ ಪೀಠ ಈ ಆದೇಶ ಮಾಡಿದೆ. ಇದೇ ವೇಳೆ ಪ್ರಕರಣದಲ್ಲಿ ಆರೋಪಿ ಶೇಖ್‌ ರೌಫ್‌ನನ್ನು ದೋಷಿಯಾಗಿ ತೀರ್ಮಾನಿಸಿರುವ ಪೋಕ್ಸೋ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿರುವ ಹೈಕೋರ್ಟ್‌, ಆತನಿಗೆ ವಿಧಿಸಲಾಗಿದ್ದ ಐದು ವರ್ಷ ಜೈಲು ಶಿಕ್ಷೆಯನ್ನು ಏಳು ವರ್ಷಕ್ಕೆ ಹೆಚ್ಚಿಸಿದೆ. ಪೋಕ್ಸೋ ಕಾಯ್ದೆಯ ಸೆಕ್ಷನ್‌ 4 ಅಡಿಯಲ್ಲಿ ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಅಪರಾಧ ಕೃತ್ಯಕ್ಕೆ ಕನಿಷ್ಠ ಏಳು ವರ್ಷ ಜೈಲು ಶಿಕ್ಷೆ ನಿಗದಿಪಡಿಸಲಾಗಿದೆ. ಈ ಅಂಶಗಳನ್ನು ನಿರ್ಲಕ್ಷಿಸಿ ವಿಶೇಷ ನ್ಯಾಯಾಲಯ ಆರೋಪಿಗೆ ಕೇವಲ ಐದು ವರ್ಷ ಜೈಲು ಶಿಕ್ಷೆ ವಿಧಿಸಿರುವುದು ಕಾನೂನು ಬಾಹಿರ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಕರಣದ ವಿವರ: 12 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಶೇಖ್‌ ರೌಫ್‌ನನ್ನು ಅಪರಾಧಿಯಾಗಿ ಪರಿಗಣಿಸಿದ್ದ ಪೋಕ್ಸೋ ವಿಶೇಷ ನ್ಯಾಯಾಲಯ, ಆತನಿಗೆ ಐದು ವರ್ಷ ಸಾಧಾರಣಾ ಜೈಲು ಶಿಕ್ಷೆ ವಿಧಿಸಿ 2015ರ ಸೆ.7ರಂದು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಭಾಲ್ಕಿ ಟೌನ್‌ ಪೊಲೀಸರು ಹೈಕೋರ್ಟ್‌ಗೆ ಕ್ರಿಮಿನಲ್‌ ಅರ್ಜಿ ಸಲ್ಲಿಸಿದ್ದರು. ಸರ್ಕಾರದ ವಿಶೇಷ ಅಭಿಯೋಜಕರು ವಾದ ಮಂಡಿಸಿ, ಪೋಕ್ಸೋ ನ್ಯಾಯಾಲಯವು ಶೇಖ್‌ ರೌಫ್‌ನನ್ನು ದೋಷಿಯಾಗಿ ತೀರ್ಮಾನಿಸಿದೆ. 

ಆದರೆ ಅಪರಾಧಿಗೆ ಶಿಕ್ಷೆ ಮತ್ತು ದಂಡ ಮೊತ್ತವನ್ನು ಕಾಯ್ದೆಯಡಿ ನಿಗದಿಪಡಿಸಿರುವ ಪ್ರಮಾಣಕ್ಕಿಂತ ಕಡಿಮೆ ವಿಧಿಸಿರುವುದು ಸರಿಯಲ್ಲ. ಈ ರೀತಿ ಶಿಕ್ಷೆ ಪ್ರಮಾಣವನ್ನು ಕಡಿಮೆ ಮಾಡಲು ವಿಶೇಷ ನ್ಯಾಯಾಲಯಕ್ಕೆ ಯಾವುದೇ ವಿವೇಚನಾತ್ಮಕ ಅಧಿಕಾರ ಇಲ್ಲ ಎಂದು ವಾದಿಸಿದ್ದರು. ಜತೆಗೆ, ಆರೋಪಿಯು 12 ವರ್ಷದ ಬಾಲಕಿ ಮೇಲೆ ಹೀನ ಕೃತ್ಯ ಎಸಗಿ ಆಕೆಯ ಭವಿಷ್ಯವನ್ನೇ ಹಾಳು ಮಾಡಿದ್ದಾನೆ. ಸಮಾಜದಲ್ಲಿನ ಆಕೆಯ ಮರ್ಯಾದೆ, ಗೌರವಕ್ಕೆ ಧಕ್ಕೆ ತಂದಿದ್ದಾನೆ. ಆದ್ದರಿಂದ ವಿಶೇಷ ನ್ಯಾಯಾಲಯ ವಿಧಿಸಿರುವ ಜೈಲು ಶಿಕ್ಷೆ ಮತ್ತು ದಂಡ ಪ್ರಮಾಣ ತುಂಬಾ ಕಡಿಮೆಯಿದ್ದು, ಅದನ್ನು ಹೆಚ್ಚಿಸಬೇಕು ಎಂದು ಕೋರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ