ಗುರುವಾರ, ಫೆಬ್ರವರಿ 22, 2024
ಕರ್ನಾಟಕದಲ್ಲಿಯೂ ಬಾಂಬೆ ಮಿಠಾಯಿ ನಿಷೇಧ ಸಾಧ್ಯತೆ..!-ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಿಲ್ಪ ಶೆಟ್ಟಿ ಪರ ಬ್ಯಾಟಿಂಗ್ ಮಾಡಿದ ತಂಗಿ ಶಮಿತಾ ಶೆಟ್ಟಿ.

Twitter
Facebook
LinkedIn
WhatsApp
ಶಿಲ್ಪ ಶೆಟ್ಟಿ ಪರ ಬ್ಯಾಟಿಂಗ್ ಮಾಡಿದ ತಂಗಿ ಶಮಿತಾ ಶೆಟ್ಟಿ.

ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ನೀಲಿ ಚಿತ್ರಗಳ ದಂಧೆಯಲ್ಲಿ ಪ್ರಮುಖ ಆರೋಪಿ ಆಗಿದ್ದಾರೆ. ಇದರಿಂದ ಶಿಲ್ಪಾ ಶೆಟ್ಟಿಗೂ ಕೆಟ್ಟ ಹೆಸರು ಬಂದಿದೆ. ಮಾಡೆಲ್​ ಮತ್ತು ನಟಿಯರನ್ನು ಬಳಸಿಕೊಂಡು ರಾಜ್​ ಕುಂದ್ರಾ ಅಶ್ಲೀಲ ಸಿನಿಮಾಗಳನ್ನು ಮಾಡುತ್ತಿದ್ದರು ಎಂಬ ಆರೋಪ ಎದುರಾಗಿದೆ. ಇದರ ಮಧ್ಯೆಯೇ ಶಿಲ್ಪಾ ಶೆಟ್ಟಿ ನಟನೆಯ ಹಂಗಾಮಾ 2 ಸಿನಿಮಾ ರಿಲೀಸ್​ ಆಗಿದೆ. ಈ ಸಿನಿಮಾಗೆ ಶುಭಾಶಯಗಳ ಸುರಿಮಳೆ ಹರಿದು ಬಂದಿದೆ.

ಬಹುಕಾಲದ ಬಳಿಕ ಶಿಲ್ಪಾ ಶೆಟ್ಟಿ ನಟನೆಗೆ ಮರಳಿದ್ದಾರೆ. ‘ಹಂಗಾಮಾ 2’ ಚಿತ್ರದ ಮೂಲಕ ಅವರು ಕಮ್​ಬ್ಯಾಕ್​ ಮಾಡಿದ್ದಾರೆ. ಈ ಸಿನಿಮಾ ಜು.23ರಂದು ಬಿಡುಗಡೆ ಆಗಿದೆ. ‘ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​’ ಓಟಿಟಿ ಮೂಲಕ ರಿಲೀಸ್​ ಆಗಿರುವ ಈ ಚಿತ್ರಕ್ಕೆ ಶಿಲ್ಪಾ ಸಹೋದರಿ ಶಮಿತಾ ಶೆಟ್ಟಿ ಶುಭ ಕೋರಿದ್ದಾರೆ.

14 ವರ್ಷಗಳ ನಂತರ ನಿನ್ನ ನಟನೆಯ ಹಂಗಾಮಾ 2 ರಿಲೀಸ್​ ಆಗುತ್ತಿದೆ. ನಿನಗೆ ಶುಭವಾಗಲಿ. ನೀನು ಇದಕ್ಕಾಗಿ ಸಾಕಷ್ಟು ಪರಿಶ್ರಮ ಪಟ್ಟಿದ್ದೀಯಾ ಎನ್ನುವುದು ಗೊತ್ತು. ನಾನು ನಿನ್ನ ಜತೆ ಸದಾ ಇರುತ್ತೇನೆ. ನೀನು ಜೀವನದಲ್ಲಿ ಸಾಕಷ್ಟು ಏರಿಳಿತ ಕಂಡಿದ್ದೀಯಾ. ಪ್ರತಿ ಬಾರಿ ಮತ್ತಷ್ಟು ಸ್ಟ್ರಾಂಗ್​ ಆಗುತ್ತಿದ್ದೀಯಾ. ಈ ಕಷ್ಟವೂ ಕಳೆದು ಹೋಗುತ್ತದೆ. ಹಂಗಾಮಾ 2 ತಂಡಕ್ಕೆ ಆಲ್​ ದಿ ಬೆಸ್ಟ್​ ಎಂದಿದ್ದಾರೆ ಶಮಿತಾ.

ಯೋಗ ಕಲಿಸಿದ ಪಾಠಗಳನ್ನು ನಾನು ನಂಬುತ್ತೇನೆ ಮತ್ತು ಪಾಲಿಸುತ್ತೇನೆ. ಬದುಕು ಇರುವುದೇ ಈ ಕ್ಷಣದಲ್ಲಿ. ಒಂದು ಒಳ್ಳೆಯ ಸಿನಿಮಾ ಮಾಡಲು ‘ಹಂಗಮಾ 2’ ತಂಡ ಶ್ರಮಿಸಿದೆ. ಎಂದಿಗೂ ಸಿನಿಮಾಗೆ ತೊಂದರೆ ಆಗಬಾರದು. ಹಾಗಾಗಿ, ಇಂದು ನೀವು ನಿಮ್ಮ ಕುಟುಂಬ ಸಮೇತ ಈ ಸಿನಿಮಾ ನೋಡಿ ಅಂತ ನಾನು ಮನವಿ ಮಾಡಿಕೊಳ್ಳುತ್ತೇನೆ ಎಂದು ಸೋಶಿಯಲ್​ ಮೀಡಿಯಾದಲ್ಲಿ ಶಿಲ್ಪಾ ಶೆಟ್ಟಿ ಪೋಸ್ಟ್​ ಮಾಡಿದ್ದರು.

ಜು.27ರವರೆಗೂ ರಾಜ್​ ಕುಂದ್ರಾ ಅವರನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಶಿಲ್ಪಾ ಶೆಟ್ಟಿ ಮನೆ ಮೇಲೂ ಪೊಲೀಸರು ದಾಳಿ ಮಾಡಿ ತಪಾಸಣೆ ನಡೆಸಿದ್ದಾರೆ. ತನಿಖೆ ವೇಳೆ ಹೊಸ ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ತನಿಖೆಗೆ ರಾಜ್​ ಕುಂದ್ರಾ ಸರಿಯಾಗಿ ಸಹಕರಿಸುತ್ತಿಲ್ಲ ಎಂಬ ಸುದ್ದಿ ಕೂಡ ಕೇಳಿಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು