ಮಂಗಳವಾರ, ಜುಲೈ 16, 2024
Karnataka Government: ಆಗಸ್ಟ್‌ 1ರಿಂದಲೇ ಏಳನೇ ವೇತನ ಆಯೋಗದ ಜಾರಿಗೆ ಸರ್ಕಾರ ತೀರ್ಮಾನ-K P Sharma Oli: ಕೆಪಿ ಶರ್ಮಾ ಒಲಿ ನೇಪಾಳದ ಪ್ರಧಾನಿಯಾಗಿ ಅಧಿಕಾರ ಸ್ವೀಕರ-ಮಣಿಪುರದಲ್ಲಿ ಉಗ್ರರ ದಾಳಿಯಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮ-ಲೋಕಸಭೆಯ ಉಪ ನಾಯಕರಾಗಿ ಗೌರವ್ ಗೊಗೊಯ್ ಅವರನ್ನು ನೇಮಿಸಿದ ಕಾಂಗ್ರೆಸ್-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-ಅಮಿತಾಬ್ ಬಚ್ಚನ್ ಪಾದಗಳನ್ನು ಮುಟ್ಟಿದ ರಜಿನಿಕಾಂತ್, ವಿಡಿಯೋ ವೈರಲ್!-ಡೊನಾಲ್ಡ್‌ ಟ್ರಂಪ್‌ ಮೇಲೆ ಗುಂಡಿನ ದಾಳಿ; ಅಮೆರಿಕದ ಮಾಜಿ ಅಧ್ಯಕ್ಷನ ಬಲ ಕಿವಿಗೆ ಗಾಯ-13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!

Twitter
Facebook
LinkedIn
WhatsApp
ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ನಿಧನ..!

ಶಿವಮೊಗ್ಗ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಶಿವಮೊಗ್ಗದಲ್ಲಿ ಸೋಮವಾರ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಚಾಲಕ ಎಂಬಿ ಭಾನುಪ್ರಕಾಶ್ ದಿಢೀರ್ ಅಸುನೀಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು.

ವಿಧಾನ ಪರಿಷತ್‌ ಮಾಜಿ ಸದಸ್ಯರೂ ಆಗಿದ್ದ ಬಿಜೆಪಿ ಹಿರಿಯ ನಾಯಕ ಭಾನುಪ್ರಕಾಶ್ ಅವರು ನಗರದ ಟಿ. ಸೀನಪ್ಪಶೆಟ್ಟಿ ವೃತ್ತದಲ್ಲಿ ಸೋಮವಾರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಪ್ರತಿಭಟನೆ ಬಳಿಕ ಪಕ್ಷದ ಮುಖಂಡರೊಂದಿಗೆ ಮಾತನಾಡುತ್ತ ನಿಂತಿದ್ದ ಭಾನುಪ್ರಕಾಶ್ ಅವರು, ಏಕಾಏಕಿ‌ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆಯೇ ಅಸುನೀಗಿದ್ದಾರೆ.ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್) ಅನುಯಾಯಿಯಾಗಿದ್ದ ಭಾನು ಪ್ರಕಾಶ್ ಅವರು, 2019ರಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. 2001- 2005ರ ಅವಧಿಯಲ್ಲಿ ಗಾಜನೂರು ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದರು. 2005ರಲ್ಲಿ ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಾಗ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿದ್ದ ಎಸ್ ಬಂಗಾರಪ್ಪ ಅವರಿಗೆ ಎದುರಾಳಿಯಾಗಿ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಅದರಲ್ಲಿ ಅವರು 1.48 ಲಕ್ಷ ಮತಗಳನ್ನು ಪಡೆದು ಮೂರನೇ ಸ್ಥಾನ ಗಳಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ