ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶೈಕ್ಷಣಿಕ ಗೊಂದಲಗಳ ನಿವಾರಣೆಗಾಗಿ ರಾಜ್ಯಾದ್ಯಂತ ಆಮ್ ಆದ್ಮಿ ಪಕ್ಷದಿಂದ ನಡೆಯಲಿದೆ ಸಹಿ ಸಂಗ್ರಹಣೆ ಹಾಗೂ ಬೃಹತ್ ಜನಜಾಗೃತಿ ಕಾರ್ಯಕ್ರಮ

Twitter
Facebook
LinkedIn
WhatsApp
ಶೈಕ್ಷಣಿಕ ಗೊಂದಲಗಳ ನಿವಾರಣೆಗಾಗಿ ರಾಜ್ಯಾದ್ಯಂತ ಆಮ್ ಆದ್ಮಿ ಪಕ್ಷದಿಂದ ನಡೆಯಲಿದೆ ಸಹಿ ಸಂಗ್ರಹಣೆ ಹಾಗೂ ಬೃಹತ್ ಜನಜಾಗೃತಿ ಕಾರ್ಯಕ್ರಮ

ಬೆಂಗಳೂರು:ರಾಜ್ಯದಲ್ಲಿ ತಲೆದೋರಿರುವ ಶೈಕ್ಷಣಿಕ ಶುಲ್ಕಗಳು , ಸರ್ಕಾರಿ ಶಾಲೆಗಳ ದುರ್ವ್ಯವಸ್ಥೆ , ಖಾಸಗಿ ಶಿಕ್ಷಕರ ಸಮಸ್ಯೆ , ಶುಲ್ಕ ನಿಯಂತ್ರಣ ಪ್ರಾಧಿಕಾರದ ರಚನೆ ಸೇರಿದಂತೆ ಹಲವಾರು ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರವು ಸಂಪೂರ್ಣ ವೈಫಲ್ಯಗೊಂಡಿದೆ. ಸರ್ಕಾರದ ಹೊಣೆಗೇಡಿತನದ ಪರಿಣಾಮವಾಗಿ ಇಂದು ರಾಜ್ಯದಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ವ್ಯವಸ್ಥೆ ಸಾಕಷ್ಟು ಸಂಕಷ್ಟಕ್ಕೀಡಾಗಿದೆ. ಶಾಲಾ ಶುಲ್ಕ ಗಳ ವಿಚಾರದಲ್ಲಿಯೂ ಸಹ ಪೋಷಕ ವರ್ಗ ಸಮಸ್ಯೆಗೀಡಾಗಿದೆ.ಈ ಎಲ್ಲ ಗೊಂದಲಗಳಿಂದಾಗಿ ಲಕ್ಷಾಂತರ ಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಸುಳ್ಯ ಕ್ಷೇತ್ರ ಸಂಚಾಲಕ ಅಶೋಕ್ ಎಡಮಲೆ ಹೇಳಿದ್ದಾರೆ.
ಅವರು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಸರ್ಕಾರದ ಈ ಎಲ್ಲಾ ವೈಫಲ್ಯಗಳನ್ನು ಬಗೆಹರಿಸಲು ಒತ್ತಾಯಿಸುವ ನಿಟ್ಟಿನಲ್ಲಿ ಆಮ್ ಆದ್ಮಿ ಪಕ್ಷದ ಸಾವಿರಾರು ಕಾರ್ಯಕರ್ತರು ಗಳು ಸತತ 15 ದಿವಸಗಳ ಕಾಲ ರಾಜ್ಯದಾದ್ಯಂತ ಎಲ್ಲ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಕನಿಷ್ಠ 5 ಲಕ್ಷ ಮನೆಗಳಿಗೆ ತೆರಳಿ ಸಹಿ ಸಂಗ್ರಹಣೆ ಹಾಗೂ ಬೃಹತ್ ಜನಾಂದೋಲನ ಕಾರ್ಯ ಕ್ರಮವನ್ನು ನಡೆಸುವವರಿದ್ದಾರೆ ಎಂದು ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಎಂದು ಇಂದಿಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಮಗ್ರ ಚಿತ್ರಣ ನೀಡಿದರು.

ಕರಪತ್ರ, ಎಲ್.ಇ.ಡಿ ವಾಹನ, ವಿಚಾರಗೋಷ್ಠಿ ಗಳು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಈ ಅಭಿಯಾನವನ್ನು ಯಶಸ್ವಿಯಾಗಿಸಲು ಈಗಾಗಲೇ ಹಲವು ರೂಪುರೇಷೆಗಳನ್ನು ಪಕ್ಷವು ಕೈಗೊಂಡಿದೆ.

ಈ ಬೃಹತ್ ಅಭಿಯಾನದ ಭಾಗವಾಗಿ ಪಕ್ಷದ ರಾಜ್ಯಾಧ್ಯಕ್ಷ ಶ್ರೀ ಪೃಥ್ವಿರೆಡ್ಡಿ ದವರು ದಿನಾಂಕ : 05 – 07 – 2021 ಸೋಮವಾರ ಬೆಳಿಗ್ಗೆ 9 ಗಂಟೆಗೆ ಬೆಂಗಳೂರು ನಗರದ ಸಂಪಂಗಿ ರಾಮನಗರ ವಾರ್ಡ್ ನಲ್ಲಿ ಮನೆ ಮನೆಗೆ ತೆರಳಿ ವಿದ್ಯುಕ್ತವಾಗಿ ಚಾಲನೆ ಯನ್ನು ನೀಡಲಿದ್ದಾರೆ. ಇವರೊಂದಿಗೆ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಪ್ರಚಾರ ಸಮಿತಿ ಅಧ್ಯಕ್ಷೆ ಶಾಂತಲಾ ದಾಮ್ಲೆ ಸೇರಿದಂತೆ ಅನೇಕ ಮುಖಂಡರುಗಳು ಹಾಗೂ ಕಾರ್ಯಕರ್ತರುಗಳು ಭಾಗವಹಿಸಲಿದ್ದಾರೆ. ಇದೇ ಸಮಯದಲ್ಲಿ ರಾಜ್ಯದಾದ್ಯಂತ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಸಹ ಈ ಅಭಿಯಾನಕ್ಕೆ ಚಾಲನೆ ದೊರಕಲಿದೆ. ಈ ಮೂಲಕ ರಾಜ್ಯದಲ್ಲಿ ತಲೆದೋರಿರುವ ಶೈಕ್ಷಣಿಕ ಸಮಸ್ಯೆಗೆ ಆಮ್ ಆದ್ಮಿ ಪಕ್ಷವು ರಾಜ್ಯದ ಜನತೆಯ ಧ್ವನಿಯಾಗಿ ಕೆಲಸ ಮಾಡುತ್ತದೆ ಎಂದು ಅಶೋಕ ಎಡಮಲೆ ತಿಳಿಸಿದರು .

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು