ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶ್ರೀಲಂಕಾ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಮುರಿದ ಕಿಂಗ್ ಕೊಹ್ಲಿ

Twitter
Facebook
LinkedIn
WhatsApp
kohli sachin 1673358489485 1673358496006 1673358496006

ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅಬ್ಬರಿಸುವ ಮೂಲಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದ ಕೊಹ್ಲಿ 80 ಎಸೆತಗಳಲ್ಲಿ ಶತಕ ಪೂರೈಸಿದರು. ಅಲ್ಲದೆ 87 ಎಸೆತಗಳಲ್ಲಿ 12 ಫೋರ್​ ಹಾಗೂ 1 ಸಿಕ್ಸ್​ನೊಂದಿಗೆ 113 ರನ್​ ಬಾರಿಸಿದರು. ಈ ಶತಕದೊಂದಿಗೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆಯನ್ನು ಕಿಂಗ್ ಕೊಹ್ಲಿ ಮುರಿದಿರುವುದು ವಿಶೇಷ.

ಶ್ರೀಲಂಕಾ ವಿರುದ್ಧ ಏಕದಿನ ಕ್ರಿಕೆಟ್​ ಅತ್ಯಧಿಕ ಶತಕ ಬಾರಿಸಿದ ವಿಶ್ವ ದಾಖಲೆ ಸಚಿನ್ ತೆಂಡೂಲ್ಕರ್​ ಹೆಸರಿನಲ್ಲಿತ್ತು. ಕ್ರಿಕೆಟ್​ ದೇವರು ಲಂಕಾ ವಿರುದ್ಧವೇ 8 ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದರು. ಇದೀಗ ಈ ದಾಖಲೆಯನ್ನು ಕೊಹ್ಲಿ ಮುರಿದಿದ್ದಾರೆ.

ಗುವಹಾಟಿಯಲ್ಲಿ ಶ್ರೀಲಂಕಾ ವಿರುದ್ಧ ಶತಕ ಪೂರೈಸುವುದರೊಂದಿಗೆ ಶ್ರೀಲಂಕಾ ವಿರುದ್ಧ ಅತ್ಯಧಿಕ ಸೆಂಚುರಿ ಸಿಡಿಸಿದ ವಿಶೇಷ ವಿಶ್ವ ದಾಖಲೆ ಕಿಂಗ್ ಕೊಹ್ಲಿ ಪಾಲಾಗಿದೆ. ಕೊಹ್ಲಿ ಇದುವರೆಗೆ ಲಂಕಾ ವಿರುದ್ಧ 9 ಶತಕ ಬಾರಿಸಿದ್ದಾರೆ. ಈ ಮೂಲಕ ಸಿಂಹಳೀಯರ ವಿರುದ್ಧದ ಶತಕದ ಸರದಾರನಾಗಿ ವಿರಾಟ್ ಕೊಹ್ಲಿ ಹೊರಹೊಮ್ಮಿದ್ದಾರೆ.

ಇದಲ್ಲದೆ, ಭಾರತದಲ್ಲಿ ಅತ್ಯಧಿಕ ಶತಕ ಬಾರಿಸಿದ ಸಚಿನ್ ತೆಂಡೂಲ್ಕರ್ ದಾಖಲೆಯನ್ನೂ ಕೂಡ ಕೊಹ್ಲಿ ಸರಿಗಟ್ಟಿದ್ದರು. ಸಚಿನ್ ತವರಿನಲ್ಲಿ 164 ಏಕದಿನ ಪಂದ್ಯಗಳಲ್ಲಿ 20 ಶತಕಗಳನ್ನು ಸಿಡಿಸಿದ್ದರು.

ಇದೀಗ ಶ್ರೀಲಂಕಾ ವಿರುದ್ಧದ ಶತಕದೊಂದಿಗೆ ಕೊಹ್ಲಿ ಕೂಡ ಭಾರತದ ಪಿಚ್​ನಲ್ಲಿ 20 ಶತಕ ಪೂರೈಸಿದ್ದಾರೆ. ವಿಶೇಷ ಎಂದರೆ ಕೊಹ್ಲಿ ತವರಿನಲ್ಲಿ 20 ಶತಕ ಬಾರಿಸಲು ತೆಗೆದುಕೊಂಡಿರುವುದು ಕೇವಲ 102 ಇನಿಂಗ್ಸ್ ಮಾತ್ರ. ಇದರೊಂದಿಗೆ ತವರಿನ ಶತಕದ ಸರದಾರ ಎಂಬ ಮಾಸ್ಟರ್ ಬ್ಲಾಸ್ಟರ್ ಅವರ ಮತ್ತೊಂದು ದಾಖಲೆಯನ್ನು ಕಿಂಗ್ ಕೊಹ್ಲಿ ಸರಿಗಟ್ಟಿದ್ದಾರೆ.

Most ODI 100s in a country
20 Virat Kohli in India (99 inngs) *
20 Sachin Tendulkar in India (160)
14 Hashim Amla in South Africa (69)
14 Ricky Ponting in Australia (151)

ಈ ಶತಕದ ಮೂಲಕ ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲೂ ತಮ್ಮ ಶತಕದ ಭರವನ್ನು ನೀಗಿಸಿಕೊಂಡಿದ್ದು ಮಾತ್ರವಲ್ಲದೇ ಒಂದೇ ಪಂದ್ಯದಿಂದ ಎರಡೆರಡು ವಿಶ್ವದಾಖಲೆ ನಿರ್ಮಿಸಿದ್ದಾರೆ. ಈ ಶತಕದ ಮೂಲಕ ಕೊಹ್ಲಿ ಅತೀ ಹೆಚ್ಚು ಏಕದಿನ ಶತಕ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಜಂಟಿ ಅಗ್ರಸ್ಥಾನಕ್ಕೇರಿದ್ದು, ಭಾರತದ ಬ್ಯಾಟಿಂಗ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರೊಂದಿಗೆ ಜಂಟಿ ಅಗ್ರ ಸ್ಥಾನಕ್ಕೇರಿದ್ದಾರೆ. 

ಕೊಹ್ಲಿಗೆ ಇದು 20 ಏಕದಿನ ಶತಕವಾಗಿದ್ದು, ಇದಕ್ಕಾಗಿ ಅವರು 102 ಇನ್ನಿಂಗ್ಸ್ ಗಳನ್ನು ತೆಗೆದುಕೊಂಡಿದ್ದಾರೆ. ಅಂತೆಯೇ ಇಷ್ಟೇ ಶತಕಕ್ಕೆ ಸಚಿನ್ ತೆಂಡೂಲ್ಕರ್ ಅವರು 160 ಇನ್ನಿಂಗ್ಸ್ ಆಡಿದ್ದಾರೆ. ಉಳಿದಂತೆ 69 ಇನ್ನಿಂಗ್ಸ್ ಗಳಲ್ಲಿ 14 ಶತಕ ಸಿಡಿಸಿರುವ ದಕ್ಷಿಣ ಆಫ್ರಿಕಾದ ಅಶೀಂ ಆಮ್ಲಾ ಮೂರನೇ ಸ್ಥಾನದಲ್ಲಿದ್ದು, ಆಸ್ಚ್ರೇಲಿಯಾದ ದಂತಕಥೆ ರಿಕ್ಕಿ ಪಾಂಟಿಂಗ್  151 ಇನ್ನಿಂಗ್ಸ್ ಗಳಲ್ಲಿ 14 ಶತಕ ಸಿಡಿಸಿ 4ನೇ ಸ್ಥಾನದಲ್ಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist