ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಂಕ್ರಾಂತಿ ಹಾಡಿಗೆ ಸುಂದರಿಯರ ಜೊತೆ ಕುಣಿದ ರಮೇಶ್ ಅರವಿಂದ್

Twitter
Facebook
LinkedIn
WhatsApp
whatsapp image 2022 03 20 at 14040 pm16478028851649185798 5

ಬ್ಬ ಅಂದ್ರೆ ಸಂಭ್ರಮ. ಸಂಭ್ರಮ ಅಂದ್ಮೇಲೆ ಒಂದಿಷ್ಟು ಆತ್ಮೀಯರು ಸೇರಬೇಕು. ಎಲ್ಲರೂ ಸೇರಿದಾರೆ ಅಂದ್ರೆ ಅಲ್ಲೊಂದು ಚೆಂದದ ಹಾಡು ಇರ್ದಿದ್ರೆ ಹೇಗೆ. ಹೌದು, ಇನ್ನೇನು ಕೆಲವೇ ದಿನ ಸಂಕ್ರಾಂತಿ ಹಬ್ಬ ಬಂದೇ ಬಿಡ್ತು. ಸಂಕ್ರಾಂತಿ ಹಬ್ಬಕ್ಕೆ ಒಂದು ಚೆಂದದ ಸಾಂಗ್ ಇದ್ರೆ ಎಷ್ಟು ಚೆನ್ನಾಗಿರುತ್ತೆ ಅಲ್ವಾ. ಇಂತಹ ಆಲೋಚನೆಯಲ್ಲೇ ಹಾಡೊಂಡು ಸಿದ್ಧವಾಗಿ ಬಿಡುಗಡೆಯಾಗಿದೆ. ಒಂದಿಷ್ಟು ಸಂಗೀತ ಪ್ರಿಯ ಮನಸ್ಸುಗಳು ಒಟ್ಟಿಗೆ ಸೇರಿ ಸಂಕ್ರಾಂತಿಗೆಂದು ಹೊಸ ಸಾಂಗ್ ವೊಂದನ್ನು ರಚಿಸಿ ಬಿಡುಗಡೆ ಮಾಡಿದ್ದಾರೆ.

ಸಂಕ್ರಾಂತಿ ಹಬ್ಬಕ್ಕೆಂದೇ ವಿಶೇಷವಾಗಿ ರಚಿಸಲಾದ ‘ಸಂಕ್ರಾಂತಿ ತಕಥೈ’ ವೀಡಿಯೋ ಸಾಂಗ್ ಬಿಡುಗಡೆಯಾಗಿದೆ. ಕನ್ನಡ ಹಾಗೂ ತೆಲುಗು ಎರಡೂ ಭಾಷೆಯಲ್ಲಿ ಮೂಡಿ ಬಂದಿರೋ ಈ ಹಾಡಿಗೆ ಹರ್ಷಿಕಾ ಪೂಣಚ್ಚ, ರಾಧಿಕಾ ನಾರಾಯಣ್, ಪೃಥ್ವಿ ಅಂಬರ್ ಹಾಗೂ ತೆಲುಗಿನ ಮಾನಸ್ ನಗುಲಪಲ್ಲಿ, ಕೀರ್ತಿ ಭಟ್, ನಿಖಿಲ್ ಮಲಿಯಕ್ಕಳ್ ಹೆಜ್ಜೆ ಹಾಕಿದ್ದಾರೆ. ಖ್ಯಾತ ನಟ ರಮೇಶ್ ಅರವಿಂದ್ ಸ್ಪೆಷಲ್ ಅಪಿಯರೆನ್ಸ್ ಇರುವ ಈ ಹಾಡು ಬಿಡುಗಡೆಯಾಗಿ ಸಂಕ್ರಾಂತಿ ಹಬ್ಬದ ರಂಗು ಹೆಚ್ಚಿಸಿದೆ. 

ತೆಲುಗಿನ ಖ್ಯಾತ ಹಾಗೂ ಹಿರಿಯ ನೃತ್ಯ ನಿರ್ದೇಶಕಿ ಆನಿ ಮಾಸ್ಟರ್ ನೃತ್ಯ ನಿರ್ದೇಶನದಲ್ಲಿ ‘ಸಂಕ್ರಾಂತಿ ತಕಥೈ’ ಹಾಡು ಮೂಡಿ ಬಂದಿದೆ. ಗಾಯಕಿ ಹಾಗೂ ‘ಎದೆ ತುಂಬಿ ಹಾಡುವೆನು’ ಖ್ಯಾತಿಯ ಲಕ್ಷ್ಮೀ ಹೊಯ್ಸಳ್ ಹಾಗೂ ಶ್ರೀನಿವಾಸ್ ನಾಯಕ್ ಈ ಹಾಡಿಗೆ ಸಾಹಿತ್ಯ ರಚಿಸಿದ್ದಾರೆ. ಮಲಯಾಳಂ ಸಂಗೀತ ನಿರ್ದೇಶಕ ಅನೂಪ್ ಮೆನನ್ ಸಂಗೀತ ನಿರ್ದೇಶನ ಹಾಡಿಗಿದ್ದು, ಅನೂಪ್ ಮೆನನ್ ಹಾಗೂ ಲಕ್ಷ್ಮೀ ಹೊಯ್ಸಳ್ ಹಾಡಿಗೆ ದನಿಯಾಗಿದ್ದಾರೆ.  ಶರದ್ ಗುಮಾಸ್ತೆ ಅವರ ರೆಡ್ ಸೀಡರ್ ಎಂಟಟೈನ್ಮೆಂಟ್ ಬ್ಯಾನರ್ ಅಡಿ ‘ಸಂಕ್ರಾಂತಿ ಥಕಥೈ’ ಹಾಡನ್ನು ನಿರ್ಮಾಣ ಮಾಡಿದ್ದು, ಜಯ್ ಸಿರಿಕೊಂಡ ಛಾಯಾಗ್ರಹಣ, ಪ್ರಭು ಸಂಕಲನ ಹಾಡಿಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ