ಸಚಿವ ಮುರುಗೇಶ್ ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಸ್ಫೋಟ; ಓರ್ವ ಸಾವು, ನಾಲ್ವರಿಗೆ ಗಾಯ
Twitter
Facebook
LinkedIn
WhatsApp
ಬಾಗಲಕೋಟೆ: ಸಚಿವ ಮುರುಗೇಶ್ ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು ನಾಲ್ವರಿಗೆ ಗಾಯಗಳಾಗಿವೆ.
ಮುಧೋಳದ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಾಗಲಕೋಟೆ ಜಿಲ್ಲೆ ಮುಧೋಳ ನಗರದ ಬಳಿ ಇರುವ ಡಿಸ್ಟಿಲರಿ ಘಟಕದಲ್ಲಿ ಘಟನೆ ನಡೆದಿದೆ.
ಜುಂಜರಕೊಪ್ಪಗಲ್ಲಿ ನಿವಾಸಿ ಗುರುನಾಥ ಹುಚ್ಚಣ್ಣನವರ್(27) ಮೃತ ಕಾರ್ಮಿಕ. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ಬರಬೇಕಿದೆ.