ಗುರುವಾರ, ಫೆಬ್ರವರಿ 22, 2024
ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!-ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಚಿವ ಶ್ರೀರಾಮುಲುರನ್ನು ದಿಢೀರ್ ಕರೆಸಿಕೊಂಡ ಹೈಕಮಾಂಡ್.

Twitter
Facebook
LinkedIn
WhatsApp
ಸಚಿವ ಶ್ರೀರಾಮುಲುರನ್ನು ದಿಢೀರ್ ಕರೆಸಿಕೊಂಡ ಹೈಕಮಾಂಡ್.

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಿಗೂಢ ಬೆಳವಣಿಗೆ ನಡೆಯುತ್ತಿರುವ ಮಧ್ಯೆಯೇ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರಿಗೆ ಹೈಕಮಾಂಡ್ ನಿಂದ ಬುಲಾವ್ ಬಂದಿದ್ದು, ಬುಧವಾರ ಬೆಳಗ್ಗೆ ದೆಹಲಿಗೆ ದಿಢೀರ್ ಪ್ರಯಾಣ ಬೆಳೆಸಿರುವುದು ಕುತೂಹಲ ಕೆರಳಿಸಿದೆ.

ಮಂಗಳವಾರ ತಡರಾತ್ರಿ ಹೈಕಮಾಂಡ್ ದೂರವಾಣಿ ಕರೆಮಾಡಿ ದೆಹಲಿಗೆ ಬರುವಂತೆ ಶ್ರೀರಾಮುಲು ಅವರಿಗೆ ಸೂಚಿಸಿದ ಮೇರೆಗೆ ಇಂದು ಬೆಳಗ್ಗೆ 5.30ರ ವಿಮಾನದಲ್ಲಿ ಶ್ರೀರಾಮುಲು ಅವರು ದೆಹಲಿಗೆ ತೆರಳಿ ಬಳಿಕ ಹೈಕಮಾಂಡ್ ಭೇಟಿ ಮಾಡಿದ್ದಾರೆ ಎಂದು ವರದಿಯಾಗಿದೆ. ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಹ್ವಾನದ ಮೇರೆಗೆ ತೆರಳಿದ್ದು ಇವರಲ್ಲದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಶ್ರೀರಾಮುಲು ಭೇಟಿ ಮಾಡಿರಬಹುದು ಎನ್ನಲಾಗುತ್ತಿದೆ.
ಈ ಮಧ್ಯೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮಂಗಳವಾರ ರಾತ್ರಿಯೇ ದೆಹಲಿಗೆ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ. ಜುಲೈ 26ರಂದು ರಾಜ್ಯ ಬಿಜೆಪಿ ನಾಯಕತ್ವದ ಬದಲಾವಣೆ ಎನ್ನುವ ಸುದ್ದಿಗಲು ಕೇಳಿಬರುತ್ತಿರುವ ಬೆನ್ನಲ್ಲೇ ಶ್ರೀರಾಮುಲು ಅವರನ್ನು ದೆಹಲಿಗೆ ಕರೆಯಿಸಿಕೊಂಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು