ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸದ್ಯದಲ್ಲೇ ಮದುವೆಯಾಗಲಿದ್ದಾರೆ ನಯನತಾರ!!

Twitter
Facebook
LinkedIn
WhatsApp
ಸದ್ಯದಲ್ಲೇ ಮದುವೆಯಾಗಲಿದ್ದಾರೆ ನಯನತಾರ!!

ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್ ಖ್ಯಾತಿಯ ನಯನತಾರಾ ತಮ್ಮ ವೈಯಕ್ತಿಕ ಬದುಕಿನ ಗುಟ್ಟು ಬಿಚ್ಚಿಟ್ಟಿದ್ದಾರೆ. ಪ್ರೀತಿಯಲ್ಲಿದ್ದರೂ ಪ್ರೀತಿಗೆ ಅಧಿಕೃತ ಮುದ್ರೆಯೊತ್ತದ ನಯನತಾರಾ ಕೊನೆಗೂ ತಮ್ಮ ಕೈಯಲ್ಲಿನ ಎಂಗೇಜ್ ಮೆಂಟ್ ರಿಂಗ್ ರಹಸ್ಯ ಬಹಿರಂಗಪಡಿಸಿದ್ದು, ಸದ್ಯದಲ್ಲೇ ವಿವಾಹವಾಗುವುದಾಗಿ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ನಯನತಾರಾ ಹಾಗೂ ವಿಘ್ನೇಶ್ ಶಿವನ್ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರೂ ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ. ಪ್ರೀತಿ ಬಹಿರಂಗವಾದ ಮೇಲೂ ಮದುವೆ ಬಗ್ಗೆ ಗುಟ್ಟು ಬಿಟ್ಟು ಕೊಡದ ಜೋಡಿ, ಡೆಸ್ಟಿನೇಶನ್ ವೆಡ್ಡಿಂಗ್ ಮಾಡಿಕೊಳ್ಳುತ್ತೇವೆ. ಅದಕ್ಕಾಗಿ ಹಣ ಕೂಡಿ ಹಾಕುತ್ತಿದ್ದೇವೆ ಎಂದಿತ್ತು.

ಕೆಲ ದಿನಗಳ ಹಿಂದೆಯಷ್ಟೇ ನಯನತಾರಾ ವಿಘ್ನೇಶ್ ಶಿವನ್ ನಿರ್ಮಾಣದ ನೇಟ್ರಿಕಣ್ ಸಿನಿಮಾ ಪ್ರಮೋಶನ್ ಶೋವೊಂದರಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ನಯನತಾರಾ ಕೈಯಲ್ಲಿದ್ದ ಉಂಗುರದ ಬಗ್ಗೆ ನಿರೂಪಕಿ ಪ್ರಶ್ನೆ ಮಾಡಿದ್ದು, ಈ ವೇಳೆ ನಯನತಾರಾ ಇದು ವಿಘ್ನೇಶ್ ಶಿವನ್ ನೀಡಿದ ನಿಶ್ಚಿತಾರ್ಥದ ಉಂಗುರ ಎಂದಿದ್ದಾರೆ.

ಹೀಗಾಗಿ ಈ ಜೋಡಿಯ  ಗುಟ್ಟಾದ ನಿಶ್ಚಿತಾರ್ಥದ ಸಂಗತಿ ಬೆಳಕಿಗೆ ಬಂದಿದ್ದು, ಮೂಲಗಳ ಮಾಹಿತಿ ಪ್ರಕಾರ ಕೊರೋನಾ ಅಬ್ಬರ ತಗ್ಗಿದ ಬಳಿಕ ಜೋಡಿ ಹೊಸಬದುಕಿಗೆ ಕಾಲಿಡಲಿದೆ. ಕಳೆದ ಮಾರ್ಚ್ ತಿಂಗಳಿನಲ್ಲೇ ವಿಘ್ನೇಶ್ ಶಿವನ್ ಹಂಚಿಕೊಂಡಿದ್ದ ಜೋಡಿ ಪೋಟೋದಲ್ಲಿ ನಯನತಾರಾ ಕೈಯಲ್ಲಿದ್ದ ಈ ಉಂಗುರ ಗಮನ ಸೆಳೆದಿತ್ತು.

WhatsApp Image 2021-08-11 at 5.01.59 PM (3)

ನಯನತಾರಾ ಹಾಗೂ ವಿಘ್ನೇಶ್ ಶಿವನ್ 2015 ರಲ್ಲಿ ಪೋಡಾಪೋಡಿ ನಿರ್ದೇಶನದ ಮೂಲಕ ಗುರುತಿಸಿಕೊಂಡಿದ್ದು ಅದೇ ವರ್ಷ ನಿರ್ದೇಶಿಸಿದ ನಾನು ರೌಡಿಧಾನ್ ಸಿನಿಮಾ ವೇಳೆಯೇ ಇವರಿಬ್ಬರ ನಡುವೆ ಪ್ರೀತಿ ಹುಟ್ಟಿತ್ತು ಎನ್ನಲಾಗಿದೆ.

ಇತ್ತೀಚಿಗಷ್ಟೇ ನಯನತಾರಾ ತಂದೆ ಅನಾರೋಗ್ಯಕ್ಕಿಡಾಗಿದ್ದು, ಕೊಚ್ಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ನಯನಾತಾರಾ ಮದುವೆ ನೋಡಲು ಬಯಸುತ್ತಿರೋದರಿಂದ ಸದ್ಯದಲ್ಲೇ ಈ ಜೋಡಿ ಸಪ್ತಪದಿ ತುಳಿಯಲಿದೆ ಎನ್ನಲಾಗುತ್ತಿದೆ.  

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು