Friday, December 2, 2022
ಖ್ಯಾತ ನಿರ್ಮಾಪಕ ಮುರಳೀಧರನ್ ಹೃದಯಾಘಾತದಿಂದ ನಿಧನ; ಕಂಬನಿ ಮಿಡಿದ ಕಮಲ್ ಹಾಸನ್-ನಟ ವಸಿಷ್ಠ ಸಿಂಹ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ನಟಿ ಹರಿಪ್ರಿಯಾ-ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ: ಸುರ್ಜೇವಾಲಾ-6ನೇ ತರಗತಿಯ ಬಾಲಕ ಹೃದಯಾಘಾತದಿಂದ ಸಾವು-ಭಾರತವಿಂದು ಜಗತ್ತಿನ ನಂ.1 ಹಾಲು ಉತ್ಪಾದಕ: ಕೇಂದ್ರ ಸಚಿವ ಪರುಷೋತ್ತಮ ರೂಪಲಾ-ಪ್ರಜಾಪ್ರಭುತ್ವದ ಬಗ್ಗೆ ವಿಶ್ವ ನಮಗೆ ಪಾಠ ಮಾಡಬೇಕಿಲ್ಲ, ವಿಶ್ವಸಂಸ್ಥೆಗೆ ಭಾರತದ ದಿಟ್ಟ ಉತ್ತರ!-ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು-ಸ್ಮಿತ್ ಬ್ಯಾಟ್‍ನಿಂದ ಹೊಡೆತ ತಿಂದ ಅಂಪೈರ್-ಸೇಡು ತೀರಿಸಿಕೊಳ್ಳಲು ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ 15ರ ಬಾಲಕ-ಹೊಸ ಆಲೋಚನೆಯ ಅಭಿವೃದ್ಧಿ ಚಿಂತನೆಯ 'ಸಮೃದ್ಧ ಕೊಡಗು' ಪರಿಕಲ್ಪನೆಯ ಮೂಲಕ ಕೊಡಗಿನಲ್ಲಿ ಗಮನ ಸೆಳೆಯುತ್ತಿರುವ ಡಾ. ಮಂತರ್ ಗೌಡ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಾಮಾನ್ಯ ಜನರಿಗೆ ಬಿಗ್ ಶಾಕ್!.. ನಂದಿನಿ ಹಾಲು, ಮೊಸರು ದರ 2ರುಪಾಯಿ ಹೆಚ್ಚಳ

Twitter
Facebook
LinkedIn
WhatsApp

ಬೆಂಗಳೂರು (ನ. 23):  ಕೆಎಂಎಫ್‌ ನಂದಿನಿ ಹಾಲು ಹಾಗೂ ಮೊಸರಿನ ದರವನ್ನು ಪ್ರತಿ ಲೀಟರ್‌ಗೆ ₹2 ಹೆಚ್ಚಿಸುವುದಾಗಿ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಹಾಲು ಹಾಗೂ ಮೊಸರು ದರ ಹೆಚ್ಚಳದ ಬಗ್ಗೆ KMF ಆಡಳಿತ ಮಂಡಳಿ ಸಭೆ ಬಳಿಕ ಹಾಲಿನ ದರವನ್ನು 2 ರೂ ಹೆಚ್ಚಳ ಮಾಡುವುದಾಗಿ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಪ್ರತಿ ಲೀಟರ್ ಹಾಲಿಗೆ 2‌ ರೂಪಾಯಿ ಹಾಗೂ ಪ್ರತಿ ಕೆಜಿ ಮೊಸರಿಗೆ 2 ರೂಪಾಯಿ ಏರಿಕೆ ಮಾಡಲಾಗಿದೆ. ನೇರವಾಗಿ ರೈತರಿಗೆ ಈ ಹಣವನ್ನು‌ ನೀಡಲಾಗುತ್ತಿದ್ದು, ಗ್ರಾಹಕರು ಸಹಕಾರ‌ ಕೊಡುವಂತೆ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದ್ದಾರೆ. ನಾಳೆಯಿಂದಲೇ ಈ ದರ ಜಾರಿಯಾಗಲಿದೆ.

ಕೆಎಂಎಫ್‌ ಸಂಸ್ಥೆಯು ನ.14ರಂದು ಹೊರಡಿಸಿ ಹಿಂಪಡೆದಿದ್ದ ಆದೇಶದಲ್ಲಿ ಹಾಲು ಹಾಗೂ ಮೊಸರಿನ ಬೆಲೆಯನ್ನು ಪ್ರತಿ ಲೀಟರ್‌ಗೆ 3 ರು. ಹೆಚ್ಚಳ ಮಾಡಿತ್ತು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಹಾಲಿನ ದರ ಹೆಚ್ಚಳಕ್ಕೆ ವಿವಿಧ ಹಾಲು ಒಕ್ಕೂಟಗಳಿಂದ ಕೆಎಂಎಫ್‌ ಮೇಲೆ ತೀವ್ರ ಒತ್ತಡವಿತ್ತು. ಹೀಗಾಗಿ ಹಲವು ತಿಂಗಳ ಹಿಂದೆಯೇ ಹಾಲಿನ ದರ ಪರಿಷ್ಕರಣೆಗೆ ನಿರ್ಧರಿಸಿ ಸರ್ಕಾರಕ್ಕೆ ಪ್ರಸ್ತಾವನೆಯನ್ನೂ ಕಳುಹಿಸಿತ್ತು. ಸರ್ಕಾರ ಆಸಕ್ತಿ ತೋರದ ಹಿನ್ನೆಲೆಯಲ್ಲಿ ನ.14 ರಂದು ಹಾಲು ಹಾಗೂ ಮೊಸರಿನ ದರವನ್ನು ಲೀಟರ್‌ಗೆ 3 ರು.ಗಳಂತೆ ಹೆಚ್ಚಳ ಮಾಡಿ ಆದೇಶಿಸಿತ್ತು. 

ಮರು ದಿನದಿಂದಲೇ ಜಾರಿಯಾಗಬೇಕಿದ್ದ ಪರಿಷ್ಕೃತ ದರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಡೆ ನೀಡಿ ನ.20 ರ ಬಳಿಕ ಸಭೆ ನಡೆಸಿ ನಿರ್ಧರಿಸುವುದಾಗಿ ಪ್ರಕಟಿಸಿದ್ದರು. ಅದರಂತೆ ನವೆಂಬರ್ 21ರಂದು ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದರು. ಸಭೆಯಲ್ಲಿ ಸಚಿವ ಪ್ರಭು ಚೌಹಾಣ್, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹಾಗೂ ಪಶುಸಂಗೋಪನಾ ಇಲಾಖೆಯ ಹಾಗು ಕೆಎಂಎಫ್ ಅಧಿಕಾರಿಗಳು ಭಾಗವಹಿಸಿದ್ದರು. ಗ್ರಾಹಕರಿಗೆ ಹೊರೆಯಾಗದಂತೆ ಹಾಗೂ ರೈತರಿಗೂ ನ್ಯಾಯ ಸಿಗುವಂತೆ ಸೂತ್ರವೊಂದನ್ನು ಎರಡು ದಿನಗಳೊಳಗೆ ರೂಪಿಸಿಕೊಂಡು ಬರುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕ ಹಾಲು ಮಹಾಮಂಡಲದ (ಕೆಎಂಎಫ್‌) ಸೂಚನೆ ನೀಡಿದ್ದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ