
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‍ನ 2021ನೇ ಸಾಲಿನ ‘ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ’ಗೆ ಆಳ್ವಾಸ್ ಫೌಂಡೇಶನ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಮೋಹನ್ ಆಳ್ವ ಆಯ್ಕೆಯಾಗಿದ್ದಾರೆ.
ಕಸಾಪ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಈ ಸಾಧಕರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಯು 51 ಸಾವಿರ ರೂ. ನಗದು ಹಾಗೂ ಡಾ.ಟಿ.ವಿ ವೆಂಕಟಾಚಲ ಶಾಸ್ತ್ರಿ ವಿದ್ವತ್ ಪ್ರಶಸ್ತಿ 10 ಸಾವಿರ ರೂ. ನಗದು, ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರಧಾನ ಸಮಾರಂಭವು ಕ್ರಮವಾಗಿ ಜು.1 ಹಾಗೂ ಜು.7ರಂದು ನಗರದ ಶ್ರೀಕೃಷ್ಣ ಪರಿಷನ್ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಪರಿಷತ್ತಿನ ಗೌರವ ಕಾರ್ಯದರ್ಶಿ ಕೆ.ರಾಜಕುಮಾರ್ ತಿಳಿಸಿದ್ದಾರೆ.
ಆಯ್ಕೆ ಸಮಿತಿ ಸಭೆಯಲ್ಲಿ ಕಸಾಪ ಸದಸ್ಯರಾದ ಚಿತ್ಕಲಾ, ಗೌರವ ಕಾರ್ಯದರ್ಶಿ ಡಾ.ಪದ್ಮರಾಜ ದಂಡಾವತಿ, ಕೆ.ರಾಜಕುಮಾರ್, ಕೋಶಾಧ್ಯಕ್ಷ ಮಲ್ಲಿಕಾರ್ಜುನಪ್ಪ ಉಪಸ್ಥಿತರಿದ್ದರು.
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ 1915ರಲ್ಲಿ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು. ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ ಇದಾಗಿದೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.
ಆರಂಭದಲ್ಲಿ ಪರಿಷತ್ತನ್ನು ಕಟ್ಟಿ ಬೆಳೆಸಲು ನೆರವಾದ ಮೈಸೂರು ಮಹಾರಾಜ ಶ್ರೀ ಕೃಷ್ಣರಾಜ ಒಡೆಯರ್ ಅವರ ಹೆಸರಿನಲ್ಲಿ ಶ್ರೀ ಕೃಷ್ಣರಾಜ ಪರಿಷನ್ಮಂದಿರ ಸಭಾಂಗಣವಿದೆ. ಜತೆಗೇ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿನಲ್ಲಿ ದತ್ತಿ ನಿಧಿ ಪ್ರಶಸ್ತಿಯನ್ನೂ ನೀಡಲಾಗುತ್ತದೆ. ಕನ್ನಡ ನಾಡಿನ ಮಹನೀಯರು, ಸಾಹಿತ್ಯ ಮತ್ತು ಸಾಂಸ್ಕೃತಿಕ ಆಸಕ್ತರು ಪರಿಷತ್ತಿನಲ್ಲಿ ಇರಿಸಿರುವ ದತ್ತಿನಿಧಿಗಳ ಮೂಲಕ ದತ್ತಿ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್