
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಸಿದ್ದರಾಮಯ್ಯ ಕರ್ನಾಟಕದ ವರ್ಚಸ್ವಿ ನಾಯಕರುಗಳಲ್ಲಿ ಒಬ್ಬರು. ದೇಶದ ಕೆಲವು ಮಂದಿ ವರ್ಚಸ್ಸಿನ ನಾಯಕರುಗಳಲ್ಲಿ ಸಿದ್ದರಾಮಯ್ಯನವರ ಹೆಸರು ಕೂಡಾ ಇದೆ.
ಸಿದ್ದರಾಮಯ್ಯನವರ ವರ್ಚಸ್ಸು ಕಳೆದ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಏರಲು ಸಹಾಯ ಮಾಡಿದ್ದು, ಅದೇ ವರ್ಚಸ್ಸನ್ನು ಸಿದ್ದರಾಮಯ್ಯ ಉಳಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಕಾಂಗ್ರೆಸ್ನಿಂದ ಪ್ರತ್ಯೇಕ ವಾಗಿ ಬೇರೆ ಪಕ್ಷ ಕಟ್ಟಿದರು 30ರಿಂದ 40 ಸೀಟು ಗೆಲ್ಲಬಲ್ಲ ಸಾಮರ್ಥ್ಯ ಹೊಂದಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ.
ಸಿದ್ದರಾಮಯ್ಯ ಒಂದು ಸಮಯದಲ್ಲಿ ಮುಖ್ಯಮಂತ್ರಿಯಾದವರು. ಆ ಕಾರಣದಿಂದ ಮುಖ್ಯಮಂತ್ರಿ ಹುದ್ದೆಯನ್ನು ಬಯಸುತ್ತಾರೆ ಹೊರತು ಬೇರೇನೂ ಅಲ್ಲ. ಯಾಕೆಂದರೆ ಅದಕ್ಕಿಂತ ಹೆಚ್ಚಿನದು ಕಾಂಗ್ರೆಸ್ನಲ್ಲಿ ಅವರಿಗೆ ಈ ಪರಿಸ್ಥಿತಿಯಲ್ಲಿ ದಕ್ಕಲು ಸಾಧ್ಯವಿಲ್ಲ. ಕೇಂದ್ರದಲ್ಲಿ ಏಕಾಂಗಿಯಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಈ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯನವರಿಗೆ ನ್ಯಾಯಯುತ ಹುದ್ದೆಗಳು ಲಭ್ಯವಾಗುವುದು ಪ್ರಸ್ತುತ ಸಂದರ್ಭದಲ್ಲಿ ಬಹಳ ದೂರದ ಮಾತು ಎಂಬ ರೀತಿಯಲ್ಲಿ ಗೋಚರವಾಗುತ್ತದೆ.
ಈ ನೆಲೆಯಲ್ಲಿ ಅವರಿಗೆ ರಾಜಕೀಯದಲ್ಲಿ ಉಳಿಯಬೇಕಾದರೆ ಮುಖ್ಯಮಂತ್ರಿ ಹುದ್ದೆಯೇ ಬೇಕಾಗುತ್ತದೆ. ಆದರೆ ಕಾಂಗ್ರೆಸ್ಗೆ ಸಿದ್ದರಾಮಯ್ಯ ಎಷ್ಟು ಅನಿವಾರ್ಯ ಆಗಿದ್ದಾರೆ ಎಂದರೆ ಅವರನ್ನು ಬಿಟ್ಟು ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೇರುವುದು ಅಷ್ಟು ಸುಲಭವಲ್ಲ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.
ಡಿಕೆ ಶಿವಕುಮಾರ್ ಪ್ರಭಾವಿ ನಾಯಕನಾದರೂ ಇಡೀ ಕರ್ನಾಟಕದ ಮಟ್ಟಿಗೆ ವರ್ಚಸ್ವಿ ನಾಯಕನಲ್ಲ ಎಂಬುದು ರಾಜಕೀಯ ವಿಶ್ಲೇಷಕರ ಮಾತು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಇಲ್ಲದ ಕಾಂಗ್ರೆಸ್ 60ರಿಂದ 70 ಸೀಟು ಪಡೆಯಬಹುದೇ ಹೊರತು ದಡ ಮುಟ್ಟಲು ಸಾಧ್ಯವಿಲ್ಲ ಎಂಬುದು ರಾಜಕೀಯ ವಿಶ್ಲೇಷಕರ ಮಾತು. ಒಂದು ಹಂತದಲ್ಲಿ ದೇಶದಲ್ಲಿ ಹೈಕಮಾಂಡ್ ದುರ್ಬಲವಾಗಿದೆ. ಈ ನೆಲೆಯಲ್ಲಿ ಸಿದ್ದರಾಮಯ್ಯ ಬಹಳಷ್ಟು ಪ್ರಬಲ ನಾಯಕನಾಗಿ ಕಾಣುತ್ತಿದ್ದಾರೆ.
ಸಿದ್ದರಾಮಯ್ಯ ಪ್ರತ್ಯೇಕ ಪಕ್ಷ ಕಟ್ಟಿಕೊಂಡರೆ ಅಹಿಂದ ಮತಗಳೊಂದಿಗೆ ಇತರ ಮತಗಳು ಸೇರಿಕೊಂಡು ಪ್ರಬಲ ಪ್ರಾದೇಶಿಕ ಪಕ್ಷವಾಗಿ ಹೊರಹೊಮ್ಮಬಹುದು ಎಂಬುದು ರಾಜಕೀಯ ವಿಶ್ಲೇಷಕರ ಮಾತು. ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಅನಿವಾರ್ಯ ಅಲ್ಲದಿರಬಹುದು. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಕಾಂಗ್ರೆಸ್ಸಿಗೆ ಪ್ರಬಲ ವರ್ಚಸ್ವಿ ನಾಯಕ ಸಿದ್ದರಾಮಯ್ಯನವರ ಅನಿವಾರ್ಯತೆಯಿದೆ. ಆದರೆ ಕ್ಷಣಕ್ಷಣಕ್ಕೆ ಬದಲಾಗುತ್ತಿರುವ ರಾಜಕೀಯ ಯಾವ ತಿರುವನ್ನು ಪಡೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಷ್ಟೇ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್