ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರ್ತಾರಾ? ಒಗಟಿನ ಉತ್ತರ ನೀಡಿದ ಡಿ.ಕೆ.ಶಿವಕುಮಾರ್!
ಕಲಬುರಗಿ: ಸಿದ್ದರಾಮಯ್ಯ ನವರು 5 ವರ್ಷ ಪೂರ್ಣಾವಧಿ ಸಿಎಂ ಆಗಿರ್ತಾರಾ ಎಂಬ ಪತ್ರಕರ್ತರ ಪ್ರಶ್ನೆಗೆ ನೇರ ಉತ್ತರ ನೀಡದೆ, ಒಗಟಿನ ಉತ್ತರ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದು ತನಿಖೆಗೆ ಹೆದರುವ ರಕ್ತವಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ.
ಮುಡಾ ಹಗರಣದ ತನಿಖೆಗೆ ಮುಖ್ಯಮಂತ್ರಿಗಳೇ ನ್ಯಾಯಾಂಗ ಸಮಿತಿ ರಚಿಸಿ ತನಿಖೆಗೆ ಆದೇಶ ನೀಡಿದ್ದಾರೆ. ನಲವತ್ತು ವರ್ಷ ರಾಜಕಾರಣ ಮಾಡಿಕೊಂಡು ಬಂದಿರುವ ಅವರು ಹೆದರುವವರಲ್ಲ, ಅದು ಅವರ ರಕ್ತದಲ್ಲಿಯೇ ಇಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಕಲಬುರ್ಗಿಯಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ತಪ್ಪು ಮಾಡದಿದ್ದರೇ ಸಿಎಂ ಏಕೆ ಹೆದರಬೇಕು ಎನ್ನುವ ಜಗದೀಶ್ ಶೆಟ್ಟರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ “ಯಾರು ಹೆದರಿದ್ದಾರೆ. ಶೆಟ್ಟರ್ ಅವರಿಗೆ ಹೆದರಿಕೆ ಇರಬೇಕು. ನಾವು ಈ ನೆಲದ ಕಾನೂನಿಗೆ ಗೌರವ ನೀಡುತ್ತೇವೆ. ಸಿಎಂ ಅವರ ತಪ್ಪು ಇಲ್ಲದಿರುವ ಕಾರಣಕ್ಕೆ ಹೈಕೋರ್ಟ್ ಪ್ರಾಸಿಕ್ಯೂಷನ್ ಗೆ ತಡೆ ನೀಡಿದೆ. ಈ ಹಿಂದೆ ರಚನೆ ಮಾಡಿರುವ ಆಯೋಗದಂತೆ ನ್ಯಾಯಾಂಗ ತನಿಖೆ ನಡೆಯಲಿದೆ” ಎಂದು ತಿಳಿಸಿದರು.
ರಾಜ್ಯಪಾಲರು ದಲಿತ ಎನ್ನುವ ಕಾರಣಕ್ಕೆ ಕಾಂಗ್ರೆಸ್ ಅವಮಾನ ಮಾಡುತ್ತಿದೆ ಎಂದು ಕೇಳಿದಾಗ “ಅವರನ್ನು ರಾಜ್ಯಪಾಲರ ಹುದ್ದೆಗೆ ಕೂರಿಸಿರುವುದು ಸಂವಿಧಾನವೇ ಹೊರತು ಜಾತಿಯಲ್ಲ” ಎಂದರು. ರಾಜ್ಯಪಾಲರನ್ನು ನಿಂದಿಸಿದವರ ಮೇಲೆ ಪೊಲೀಸರು ಸ್ವಯಂಪ್ರೇರಿತರಾಗಿ ಎಸ್ ಇ, ಎಸ್ ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎನ್ನುವ ವಿರೋಧ ಪಕ್ಷಗಳ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ “ಕಲಬುರ್ಗಿಯಲ್ಲಿ ನಿರ್ಮಾಣವಾಗಿರುವ ಹೊಸ ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಬಂದು ಸೇರಿಸಲು ಹೇಳಿ” ಎಂದು ಹೇಳಿದರು.
ಸಿದ್ದು 5 ವರ್ಷ ಸಿಎಂ ಆಗಿರ್ತಾರಾ?
ಇದೇ ವೇಳೆ, ಸಿದ್ದರಾಮಯ್ಯ 5 ವರ್ಷ ಪೂರ್ಣಾವಧಿ ಮುಖ್ಯಮಂತ್ರಿ ಆಗಿರ್ತಾರಾ? ಎಂದು ಸುದ್ದಿಗಾರರು ಪ್ರಶ್ನಿಸಿದಾಗ, ಕೆಲ ಕ್ಷಣ ಸುಮ್ಮನಾದರು. ಬಳಿಕ, ಅವರ ಜೊತೆಗೆ ಒಟ್ಟಾಗಿ ನಿಂತಿದ್ದೀವಿ ಎಂಬ ಪದವನ್ನು 2-3 ಬಾರಿ ಹೇಳಿದರು.
ಆದರೆ, ಸಿಎಂ ಅವಧಿ ವಿಚಾರದಲ್ಲಿ ಏನನ್ನೂ ಹೇಳಲಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯ ರಾಜಕಾರಣಕ್ಕೆ ಮರಳಿ, ಮುಖ್ಯಮಂತ್ರಿ ಆಗೋದಾದ್ರೆ ಬೆಂಬಲ ನೀಡುತ್ತೀರಾ? ಎಂಬ ಇನ್ನೊಂದು ಪ್ರಶ್ನೆಗೆ, ಕೆಲಕಾಲ ಮೌನವಹಿಸಿದ ಡಿಕೆಶಿವಕುಮಾರ್, ನಂತರ, ಪ್ರಶ್ನೆ ಕೇಳಿದ ವರದಿಗಾರನತ್ತ ನೋಡಿ ನಸುನಗೆ ಬೀರಿದರು
ತಪ್ಪು ಮಾಡದಿದ್ದರೆ ಸಿಎಂ ಏಕೆ ಹೆದರಬೇಕು ಎನ್ನುವ ಜಗದೀಶ್ ಶೆಟ್ಟರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಯಾರು ಹೆದರಿದ್ದಾರೆ?. ಶೆಟ್ಟರ್ ಅವರಿಗೆ ಹೆದರಿಕೆ ಇರಬೇಕು. ನಾವು ಈ ನೆಲದ ಕಾನೂನಿಗೆ ಗೌರವ ನೀಡುತ್ತೇವೆ ಎಂದರು.
ರಾಜ್ಯಪಾಲರು ದಲಿತ ಎನ್ನುವ ಕಾರಣಕ್ಕೆ ಕಾಂಗ್ರೆಸ್ ಅವಮಾನ ಮಾಡುತ್ತಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರನ್ನು ರಾಜ್ಯಪಾಲರ ಹುದ್ದೆಗೆ ಕೂರಿಸಿರುವುದು ಸಂವಿಧಾನವೇ ಹೊರತು ಜಾತಿಯಲ್ಲ ಎಂದರು.
2011 ರಲ್ಲಿ ಯಡಿಯೂರಪ್ಪ ಅವರನ್ನು ಜೈಲಿಗೆ ಹಾಕಿಸಲಾಯಿತು ಈಗ ಅದೇ ಸನ್ನಿವೇಶ ಸೃಷ್ಟಿಯಾಗಿದೆ ಎನ್ನುವ ಬಿಜೆಪಿ ಸಾಮಾಜಿಕ ಜಾಲತಾಣದ ಪೋಸ್ಟಿನ ಬಗ್ಗೆ ಕೇಳಿದಾಗ “ಅವರನ್ನು ಜೈಲಿಗೆ ಹಾಕಿಸಿದ್ದು ಕಾಂಗ್ರೆಸ್ ಅಲ್ಲ. ಇದೇ ದೇವೇಗೌಡರು, ಕುಮಾರಸ್ವಾಮಿ ನಾವಲ್ಲ” ಎಂದು ಹೇಳಿದರು. ಕುಮಾರಸ್ವಾಮಿ ಅವರ ವಿರುದ್ದ ಲೋಕಾಯುಕ್ತ ದೋಷಾರೋಪ ಪಟ್ಟಿ ಸಲ್ಲಿಕೆಗೆ ರಾಜ್ಯಪಾಲರ ಅನುಮತಿ ಕೇಳಿರುವ ವಿಚಾರದ ಬಗ್ಗೆ ಪ್ರಶ್ನಿಸಿದಾಗ “ಇದರ ಬಗ್ಗೆ ನನಗೆ ಮಾಹಿತಿಯಿಲ್ಲ. ಸ್ವತಃ ನನ್ನ ಕಣ್ಣಿನಿಂದ ನೋಡಬೇಕು. ಯಾವುದಾದರೂ ದಾಖಲೆ ಇದ್ದರೆ ನೀಡಿ. ನಾನು ನಿಮ್ಮನ್ನು ಆಶ್ರಯಿಸಲು ಆಗುವುದಿಲ್ಲ” ಎಂದರು.
ರಾಜ್ಯಪಾಲರು ರಾಷ್ಟ್ರಪತಿಗಳ ಪ್ರತಿನಿಧಿಯಾಗಿ ಕೆಲಸ ಮಾಡಲಿ: ಸಿಎಂ ಸಿದ್ದರಾಮಯ್ಯ
ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರು ರಾಷ್ಟ್ರಪತಿಗಳ ಪ್ರತಿನಿಧಿಯಂತೆ ಕಾರ್ಯನಿರ್ವಹಿಸಬೇಕೇ ಹೊರತು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ವಿಷಯದಲ್ಲಿ ಕೆಲವರನ್ನು ಮಾತ್ರ ಆಯ್ಕೆ ಮಾಡಬಾರದು. ಗವರ್ನರ್ ಒಂದು ಸಾಂವಿಧಾನಿಕ ಹುದ್ದೆ ಮತ್ತು ನಾವು ಅದನ್ನು ಗೌರವಿಸುತ್ತೇವೆ. ನಾವು ಹೇಳುವುದೇನೆಂದರೆ ಅವರು ರಾಷ್ಟ್ರಪತಿಗಳ ಪ್ರತಿನಿಧಿಯಾಗಿ ಕೆಲಸ ಮಾಡಬೇಕೇ ಹೊರತು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಅಲ್ಲ ಎಂದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ತಡೆ ಕಾಯ್ದೆಯ 17ಎ ಅಡಿಯಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, 2023 ರ ಸೆಕ್ಷನ್ 218 ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲು ಆಗಸ್ಟ್ 16 ರಂದು ರಾಜ್ಯಪಾಲರು ಅನುಮತಿ ನೀಡಿದ್ದಾರೆ.
ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 2023 ರ ನವೆಂಬರ್ 23 ರಂದು ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರನ್ನು ವಿಚಾರಣೆಗೆ ಒಳಪಡಿಸಲು ಕರ್ನಾಟಕ ಲೋಕಾಯುಕ್ತರು ರಾಜ್ಯಪಾಲರ ಅನುಮತಿ ಕೋರಿದೆ. ಆದರೆ ಇಲ್ಲಿಯವರೆಗೆ ಯಾವುದೇ ಅನುಮತಿ ನೀಡಲಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
2007ರಲ್ಲಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಖಾಸಗಿ ಸಂಸ್ಥೆಗೆ ಕಾನೂನು ಉಲ್ಲಂಘಿಸಿ ಗಣಿ ಗುತ್ತಿಗೆ ನೀಡಿರುವ ಆರೋಪದಡಿ ಅವರ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಲೋಕಾಯುಕ್ತ ಸೋಮವಾರ ಮತ್ತೊಮ್ಮೆ ರಾಜ್ಯಪಾಲರಿಗೆ ಪ್ರಸ್ತಾವನೆ ಸಲ್ಲಿಸಿದೆ.
ಬಿಜೆಪಿಯ ಮಾಜಿ ಸಚಿವರಾದ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಮತ್ತು ಜನಾರ್ದನ ರೆಡ್ಡಿ ಅವರನ್ನು ವಿಚಾರಣೆಗೆ ಒಳಪಡಿಸಲು ರಾಜ್ಯಪಾಲರು ಲೋಕಾಯುಕ್ತಕ್ಕೆ ಅನುಮತಿ ನೀಡಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.
ಮತ್ತೊಂದೆಡೆ, ಟಿ ಜೆ ಅಬ್ರಹಾಂ ಅವರು ಜುಲೈ 26 ರಂದು ಬೆಳಗ್ಗೆ 11 ಗಂಟೆಗೆ ರಾಜ್ಯಪಾಲರಿಗೆ ನನ್ನ ವಿರುದ್ಧ(ಖಾಸಗಿ) ದೂರು ಸಲ್ಲಿಸಿದರು ಮತ್ತು 10 ಗಂಟೆಗಳ ನಂತರ ನನಗೆ ಶೋಕಾಸ್ ನೋಟಿಸ್ ನೀಡಲಾಗಿದೆ.
ಇದು ತಾರತಮ್ಯವಲ್ಲವೇ? ಆ ಕಾರಣದಿಂದಲೇ ಪಿಕ್ ಆ್ಯಂಡ್ ಸೆಲೆಕ್ಟ್ ಮಾಡಬೇಡಿ ಎಂದು ರಾಜ್ಯಪಾಲರಿಗೆ ತಿಳಿಸಲಾಗಿದೆ ಎಂದರು.