
ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ – ಓರ್ವ ಮೃತ್ಯು, ಉಚ್ಚಿಲದ ವ್ಯಕ್ತಿಗೆ ಗಂಭೀರ ಗಾಯ
ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ – ಓರ್ವ ಮೃತ್ಯು, ಉಚ್ಚಿಲದ ವ್ಯಕ್ತಿಗೆ ಗಂಭೀರ ಗಾಯ
ಸುಳ್ಯ: ಅಪ್ರಾಪ್ತ ವಯಸ್ಸಿನ ಮಗಳ ಅತ್ಯಾಚಾರಕ್ಕೆ ಯತ್ನಿಸಿದ್ದ ಪ್ರಕರಣದ ಆರೋಪಿಗೆ ಪುತ್ತೂರು ನ್ಯಾಯಾಲಯ 5 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶಿದೆ. 2015ರ ಮೇ 24ರಂದು ಸುಳ್ಯ ತಾಲೂಕಿನ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದ್ದ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಆರೋಪಿಯನ್ನು ಬಂಧಿಸಿದ್ದ ಪೊಲೀಸರು ವಿಚಾರಣೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಇದೀಗ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಮನೆಯಲ್ಲಿ ಮಲಗಿದ್ದ ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಸ್ವತಃ ತಂದೆಯೇ ಅತ್ಯಾಚಾರಕ್ಕೆ ಯತ್ನಿಸಿದ್ದ ಪ್ರಕರಣ ಅಂದು ಬೆಚ್ಚಿ ಬೀಳಿಸಿತ್ತು. ಸುಳ್ಯ ತಾಲೂಕಿನ ವ್ಯಾಪ್ತಿಯಲ್ಲಿ ಆರೋಪಿ ತನ್ನ ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ವಿಚಾರ ಬಾಲಕಿಯ ತಾಯಿಗೆ ತಿಳಿದ ಕಾರಣ ಆರೋಪಿ ಆಕೆಯನ್ನು ನಿಂದಿಸಿ ಹಲ್ಲೆ ನಡೆಸಿದ್ದ ಎಂದು ಸುಬ್ರಹ್ಮಣ್ಯ ಠಾಣೆಯಲ್ಲಿ ಕೇಸು ದಾಖಲಾಗಿತ್ತು.
ಪೊಲೀಸರು ಆರೋಪಿಯ ವಿರುದ್ಧ ಭಾ.ದಂ.ಸಂ. ಕಲಂ 376, 504, 323 ಮತ್ತು ಪೋಕ್ಸೋ ಕಾಯ್ದೆ ಕಲಂ 4ರಡಿ ಪ್ರಥಮ ವರ್ತಮಾನ ದಾಖಲೆ ದಾಖಲಿಸಿದ್ದರು. ನಂತರ ತನಿಖೆ ನಡೆಸಿದ್ದ ಅಂದಿನ ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ಬಿ. ಎಸ್. ಸತೀಶ್ ಪುತ್ತೂರಿನ ಪೊಕ್ಸೋ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಆರೋಪಿಯು ಬಾಲಕಿಯ ತಂದೆಯಾದ ಕಾರಣ ನ್ಯಾಯಾಲಯವು ವಿಚಾರಣಾ ಕಾಲಕ್ಕೆ ಪೋಕ್ಸೋ ಕಲಂ 6ನ್ನು ಹೆಚ್ಚುವರಿಯಾಗಿ ಸೇರಿಸಿತ್ತು. ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯ, ಬಾಲಕಿಯನ್ನು ಅತ್ಯಾಚಾರವೆಸಗಲು ಪ್ರಯತ್ನಿಸಿದ್ದಾಗಿ ಭಾ.ದಂ.ಸಂ. 376/511, 504, 323 ಮತ್ತು ಪೋಕ್ಸೋ ಕಾಯ್ದೆ ಕಲಂ 6 ಜತೆಗೆ 18ರಡಿ ಆರೋಪಿ ತಪ್ಪಿತಸ್ಥನೆಂದು ತೀರ್ಪು ನೀಡಿದೆ.
ಈ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಕಠಿಣ ಕಾರಾಗೃಹ ವಾಸದ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ತೆರಲು ಆದೇಶಿಸಿದೆ. ದಂಡ ತೆರಲು ತಪ್ಪಿದ್ದಲ್ಲಿ 1 ವರ್ಷ ಸಾದಾ ಸ್ವರೂಪದ ಶಿಕ್ಷೆ ಅನುಭವಿಸುವಂತೆ ಕೋರ್ಟ್ ತಿಳಿಸಿದೆ. ಆರೋಪಿ ತನ್ನ ಪತ್ನಿಯನ್ನು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿ 4 ತಿಂಗಳ ಸಾದಾ ಸ್ವರೂಪದ ಶಿಕ್ಷೆ ಮತ್ತು 1 ಸಾವಿರ ರೂ. ದಂಡ ವಿಧಿಸಿರುವ ನ್ಯಾಯಾಲಯ ದಂಡ ತೆರಲು ತಪ್ಪಿದ್ದಲ್ಲಿ ಮತ್ತೆ 1 ತಿಂಗಳ ಸಾದಾ ಸ್ವರೂಪದ ಶಿಕ್ಷೆ ಅನುಭವಿಸಬೇಕು ಎಂದು ತೀರ್ಪಿನಲ್ಲಿ ತಿಳಿಸಿದೆ.
ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ – ಓರ್ವ ಮೃತ್ಯು, ಉಚ್ಚಿಲದ ವ್ಯಕ್ತಿಗೆ ಗಂಭೀರ ಗಾಯ
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್