ಮಂಗಳೂರು:ಸುರತ್ಕಲ್ ಟೋಲ್ ಡಿ.1ರಿಂದ ರದ್ದಾಗಿದ್ದು ಉದ್ಯೋಗ ಕಳೆದುಕೊಂಡ ಟೋಲ್ ಕಾರ್ಮಿಕರಿಗೆ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಉದ್ಯೋಗದ ವ್ಯವಸ್ಥೆ ಮಾಡಿದ್ದಾರೆ.
ಟೋಲ್ ತೆರವು ಹಿನ್ನೆಲೆ ಉದ್ಯೋಗ ಕಳೆದುಕೊಂಡವರಲ್ಲಿ 22 ಮಂದಿ ಯುವಕ ಯುವತಿಯರು ಪ್ರತಿಭಾ ಕುಳಾಯಿ ಅವರನ್ನು ಭೇಟಿ ಮಾಡಿದ್ದಾರೆ.ಭೇಟಿ ಮಾಡಿದವರಿಗೆ ಉದ್ಯೋಗದ ವ್ಯವಸ್ಥೆ ಮಾಡಿರುವುದಾಗಿ ಪ್ರತಿಭಾ ಕುಳಾಯಿ ಫೇಸ್ ಬುಕ್ ಪೋಸ್ಟ್ ನಲ್ಲಿ ಹೇಳಿದ್ದಾರೆ.
ಪ್ರತಿಭಾ ಕುಳಾಯಿ ಮಾಡಿದ ಪೋಸ್ಟ್ ನಲ್ಲಿ ಏನಿದೆ?
ತುಳುನಾಡಿನ ಸೋದರ, ಸೋದರಿಯರೇ,
ಸುರತ್ಕಲ್ ಟೋಲ್ ಗೇಟ್ ನಲ್ಲಿ ಉದ್ಯೋಗ ಕಳೆದುಕೊಂಡ 35 ಮಂದಿಯನ್ನು ನಾನು ಭೇಟಿಯಾಗಿ ಅವರಿಗೆ ಅವರ ವಿದ್ಯಾರ್ಹತೆಗೆ ಅನುಸಾರವಾಗಿ ಉದ್ಯೋಗ ದೊರಕಿಸಿಕೊಡುವ ಭರವಸೆ ನೀಡಿದ್ದು ಅದರಂತೆ ಇಂದು ಬೆಳಗ್ಗಿನಿಂದ ನನ್ನ ಕಚೇರಿಯಲ್ಲಿ ಕಾರ್ಯ ನಿರತಳಾಗಿದ್ದೇನೆ. ಟೋಲ್ ಇನ್ ಚಾರ್ಜ್ ಮಿಥುನ್ ಬೈಕಂಪಾಡಿ ಸೂಕ್ತ ರೀತಿಯಲ್ಲಿ ಸ್ಪಂದಿಸಿದ್ದು ಈಗಾಗಲೇ 22 ಮಂದಿ ನನ್ನನ್ನು ಭೇಟಿಯಾಗಿ ಬಹುಪಾಲು ಯುವಕ-ಯುವತಿಯರಿಗೆ ಬೇರೆ ಬೇರೆ ಸಂಸ್ಥೆಗಳಲ್ಲಿ ಸೂಕ್ತ ಉದ್ಯೋಗ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದೇನೆ. ಉದ್ಯೋಗ ಕಳೆದುಕೊಂಡವರಲ್ಲಿ ಒಬ್ಬ ವಿದ್ಯಾರ್ಥಿಯಾಗಿದ್ದು ಆತನ ಮನೆಯ ಪರಿಸ್ಥಿತಿ ತೀರಾ ಹದಗೆಟ್ಟಿರುವ ಕಾರಣ ಹಗಲು ಕೆಪಿಟಿಯಲ್ಲಿ ಕಲಿತು ರಾತ್ರಿ ಟೋಲ್ ನಲ್ಲಿ ಕೆಲಸ ಮಾಡುತ್ತಿದ್ದ. ಆತನನ್ನು ನನ್ನ ಕುಳಾಯಿ ಫೌಂಡೇಶನ್ ಮೂಲಕ ದತ್ತು ಪಡೆದು ಶಿಕ್ಷಣದ ಖರ್ಚು ವೆಚ್ಚ ನೋಡಿಕೊಳ್ಳುವ ಜೊತೆಗೆ ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದೇನೆ. ಇನ್ನೊಬ್ಬ ಮಹಿಳೆ ಟೋಲ್ ನಲ್ಲಿ ದುಡಿದು ತನ್ನ ಮಕ್ಕಳನ್ನು ಸಾಕುತ್ತಿದ್ದು ಆಕೆಗೆ ಸೂಕ್ತ ಉದ್ಯೋಗ ಕೊಡಿಸಿ ಮಕ್ಕಳನ್ನು ಶೈಕ್ಷಣಿಕ ದತ್ತು ಪಡೆಯಲಿದ್ದೇನೆ. ಕುಳಾಯಿ ಫೌಂಡೇಶನ್ ಮೂಲಕ ಈಗಾಗಲೇ 500ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಶೈಕ್ಷಣಿಕ ದತ್ತು ಪಡೆಯಲಾಗಿದ್ದು ಈ ವರ್ಷ ಇನ್ನಷ್ಟು ಮಕ್ಕಳನ್ನು ಶಿಕ್ಷಣದ ಉದ್ದೇಶದಿಂದ ದತ್ತು ಪಡೆಯಲಿದ್ದೇನೆ. ನಾನು ಭರವಸೆಗಳನ್ನು ಮಾತ್ರ ಕೊಡುವುದಿಲ್ಲ, ನುಡಿದ ಮಾತಿನಂತೆ ನಡೆಯುತ್ತೇನೆ. ಈ ಕುರಿತು ಇನ್ನಷ್ಟು ಮಾಹಿತಿ ಮುಂದಿನ ದಿನಗಳಲ್ಲಿ ನಿಮ್ಮೆದುರು ನೀಡಲಿದ್ದೇನೆ.
-ಇಂತಿ ನಿಮ್ಮ ಪ್ರತಿಭಾ ಕುಳಾಯಿ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist