ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುವೆಂದು ಗೆಲುವನ್ನು ಪ್ರಶ್ನಿಸಿದ ಮಮತಾ. ನ್ಯಾಯಾಲಯದಲ್ಲಿ ವಿಚಾರಣೆ ಇಂದು ಆರಂಭ.

Twitter
Facebook
LinkedIn
WhatsApp
ಸುವೆಂದು ಗೆಲುವನ್ನು ಪ್ರಶ್ನಿಸಿದ ಮಮತಾ. ನ್ಯಾಯಾಲಯದಲ್ಲಿ ವಿಚಾರಣೆ ಇಂದು ಆರಂಭ.

ಕೊಲ್ಕತ್ತಾ:ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ದ ನಂದಿಗ್ರಾಮದಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಿರುವ ಸುವೇಂದು ಅಧಿಕಾರಿ ಅವರ ಗೆಲುವನ್ನು ಪ್ರಶ್ನಿಸಿ ಟಿಎಂಸಿ ಬೆಂಗಾಲ್‌ ಹೈಕೋರ್ಟ್‌ ಮೆಟ್ಟಿಲೇರಿದೆ. ಕೊಲ್ಕತ್ತಾ ಹೈಕೋರ್ಟ್‌ ನ್ಯಾಯಮೂರ್ತಿ ಕೌಸಿಕ್ ಚಂದಾ ಅವರು ಶುಕ್ರವಾರ ವಿಚಾರಣೆ ನಡೆಸಲಿದ್ದಾರೆ.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಮರಳಿದರೂ, ಬ್ಯಾನರ್ಜಿ ಅವರು ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿಯ ವಿರುದ್ಧ 1,956 ಮತಗಳ ಅಂತರದಿಂದ ಸೋತರು. ಮೊದಲಿಗೆ ಮಮತಾ ನ್ಯಾನರ್ಜಿ ಗೆಲುವು ಸಾಧಿಸಿದ್ದಾರೆ ಎಂದಿದ್ದ ಆಯೋಗ, ನಂತರ ಮಮತಾ ಸೋತಿದ್ದಾರೆ ಎಂದು ಪ್ರಕಟಿಸಿತು. ಇದು ಬ್ಯಾನರ್ಜಿ ಅವರ 32 ವರ್ಷಗಳ ರಾಜಕೀಯದಲ್ಲಿ ಮೊದಲ ಸೋಲಾಗಿದೆ.

ಟಿಎಂಸಿ ನಾಯಕರ ಪ್ರಕಾರ ನಂದಿಗ್ರಾಮ ಕ್ಷೇತ್ರದ ಮತಗಳನ್ನು ಸರಿಯಾಗಿ ಎಣಿಸಲಾಗಿಲ್ಲ ಎಂದು ಆರೋಪಿಸಲಾಗಿದೆ. 2020 ರ ಡಿಸೆಂಬರ್‌ನಲ್ಲಿ ಬಿಜೆಪಿಗೆ ಸೇರಿದ ಅಧಿಕಾರಿಯು ಈ ಸ್ಥಾನವನ್ನು ಗೆದ್ದು ಬಂಗಾಳ ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿದ್ದಾರೆ. ಚುನಾವಣಾ ಫಲಿತಾಂಶ ಪ್ರಕಟವಾದ ಒಂದು ದಿನದ ನಂತರ ಮೇ 3 ರಂದು ಟಿಎಂಸಿ ಮುಖ್ಯಸ್ಥರು ನ್ಯಾಯಾಲಯದಲ್ಲಿ ತಮ್ಮ ಸೋಲನ್ನು ಪ್ರಶ್ನಿಸುವುದಾಗಿ ಘೋಷಿಸಿದ್ದರು.

ನಂದಿಗ್ರಾಮದಲ್ಲಿನ ಸೋಲು ಬ್ಯಾನರ್ಜಿಗೆ ಹಿನ್ನಡೆಯಾಗಿದೆ. ಅವರ ಪಶ್ಚಿಮ ಬಂಗಾಳ ವಿಧಾನಸಭೆಯ 292 ಸ್ಥಾನಗಳಲ್ಲಿ 213 ಸ್ಥಾನಗಳಲ್ಲಿ ತಮ್ಮ ಪಕ್ಷ ಭರ್ಜರಿಯಾಗಿ ಗೆಲುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಅವರ ಪಕ್ಷದ ಮೂರನೇ ನೇರ ಗೆಲುವಾಗಿದೆ.
2016 ರ ವಿಧಾನಸಭೆಯಲ್ಲಿ ಭಬಾನಿಪುರದಲ್ಲಿ ಪ್ರತಿನಿಧಿಸಿದ ಬ್ಯಾನರ್ಜಿ, ಎಂಟು ಹಂತದ ಚುನಾವಣೆ ಪ್ರಾರಂಭವಾಗುವ ಒಂದು ತಿಂಗಳ ಮೊದಲು ನಂದಿಗ್ರಾಮದಿಂದ ಸ್ಪರ್ಧಿಸುವ ನಿರ್ಧಾರವನ್ನು ಪ್ರಕಟಿಸಿದ್ದರು. 2007 ರಲ್ಲಿ ನಂದಿಗ್ರಾಮದಿಂದ ಆರಂಭವಾಗಿದ್ದ ಭೂ ಆಂದೋಲನವು ರಾಜ್ಯದಲ್ಲಿ ಟಿಎಂಸಿಯನ್ನು ಅಧಿಕಾರಕ್ಕೆ ತರಲು ನೆರವಾಗಿತ್ತು. ಸುವೇಂದು ಅಧಿಕಾರಿ ಟಿಎಂಸಿಯಲ್ಲಿದ್ದಾಗ ಈ ನಂದಿಗ್ರಾಮದಿಂದ ಗೆದ್ದು ಎರಡು ಬಾರಿ ಶಾಸಕರಾಗಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು