ಶನಿವಾರ, ಜೂನ್ 15, 2024
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!-HSRP ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ-ಇಂದು ಯುಎಸ್ಎ ಮತ್ತು ಭಾರತ ತಂಡ ಮುಖಾಮುಖಿ; ಯಾರಿಗೆ ಗೆಲುವು..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!-ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೋರ್ನಾಡು ಎಂಬಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ರವಾನೆಯಾಗುತ್ತಿದ್ದ ಪೈಪ್ ಲೈನ್ ನಿಂದ ಡೀಸೆಲ್ ಕಳವು

Twitter
Facebook
LinkedIn
WhatsApp
ಸೋರ್ನಾಡು ಎಂಬಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ರವಾನೆಯಾಗುತ್ತಿದ್ದ ಪೈಪ್ ಲೈನ್ ನಿಂದ ಡೀಸೆಲ್ ಕಳವು

ಬಂಟ್ವಾಳ: ಪೈಪ್ ಲೈನ್ ಕೊರೆದು ಡೀಸೆಲ್‌ ಕಳವು ಮಾಡುವ ಪ್ರಕರಣ ಸೋರ್ನಾಡು ಎಂಬಲ್ಲಿ ಜುಲೈ 30ರ ಶುಕ್ರವಾರ ಪತ್ತೆಯಾಗಿದೆ.
ಬಂಟ್ವಾಳ ತಾಲೂಕಿನ ಸೋರ್ನಾಡು ಅರ್ಬಿ ಎಂಬಲ್ಲಿ ಎಂ.ಆರ್.ಪಿ.ಎಲ್.ಕಂಪೆನಿಗೆ ಸೇರಿದ ಪೈಪ್ ಲೈನ್ ಕೊರೆದು ಡೀಸಲ್ ಕಳ್ಳತನ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸರಿಂದ ತನಿಖೆ ಆರಂಭವಾಗಿದೆ. ಈ ಬಗ್ಗೆ ಸುಲಿವು ಸಿಕ್ಕಿದ ಕೂಡಲೇ ಆರೋಪಿ ಐವನ್ ಮನೆ ಬಿಟ್ಟು ಪರಾರಿಯಾಗಿದ್ದು ಪೊಲೀಸರು ಆತನಿಗಾಗಿ ಹುಡುಕಲು ಆರಂಭಿಸಿದ್ದಾರೆ.
ಅರಳ ಗ್ರಾಮದ ಸೋರ್ನಾಡು ಸಮೀಪದ ಅರ್ಬಿ ಎಂಬಲ್ಲಿ ಐವನ್ ಎಂಬವರಿಗೆ ಸೇರಿದ ಖಾಸಗಿ ಜಮೀನಿನ ರಸ್ತೆಯಲ್ಲಿ ಪೈಪ್ ಲೈನ್ ಹಾದು ಹೋಗುತ್ತಿದೆ. ಇದನ್ನು ಕೊರೆದು ಆರೋಪಿ ಡೀಸೆಲ್ ಕಳವು ಮಾಡುತ್ತಿದ್ದ. ಮಂಗಳೂರು ಎಂ‌ಆರ್.ಪಿ.ಎಲ್.ಕಂಪೆನಿಯಿಂದ ಹಾಸನಕ್ಕೆ ಪೈಪ್ ಲೈನ್ ಮುಖಾಂತರ ಸಾಗಾಟ ವಾಗುವ ಡಿಸೇಲ್ ನ್ನು ಕಳವು ಮಾಡಲಾಗಿದೆ.
ಐವನ್ ಅವರ ರಸ್ತೆಯಲ್ಲಿ ಸುಮಾರು 20 ಅಡಿ ಆಳದಲ್ಲಿ ಹಾದುಹೋಗುವ ಡೀಸೆಲ್‌ ಪೈಪ್ ಲೈನ್ ನ್ನು ಅಗೆದು ಬಳಿಕ ಪೈಪ್ ಲೈನ್ ಕೊರೆದು ಆ ಪೈಪ್ ಗೆ ಇನ್ನೊಂದು ಪೈಪ್ ಅಳವಡಿಸಿ ಸುಮಾರು ಅರ್ಧ ಕಿ.ಮೀ ದೂರದಲ್ಲಿ ಗೇಟ್ ವಾಲ್ ಸಿಕ್ಕಿಸಿ ಟ್ಯಾಪ್ ಮೂಲಕ ವಾಹನಕ್ಕೆ ಡೀಸೆಲ್‌ ತುಂಬಿಸಿ ಆ ಬಳಿ ಮಾರಾಟ ಮಾಡಲಾಗುತ್ತಿತ್ತು ಎಂದು ಪ್ರಾಥಮಿಕ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ.
ಕಂಪೆನಿಯಲ್ಲಿ ಕೆಲ ದಿನಗಳಿಂದ ಪೈಪ್ ಲೈನ್ ನಲ್ಲಿ ಡಿಸೇಲ್ ನ ಅಳತೆಯಲ್ಲಿ ವ್ಯತ್ಯಾಸ ಕಂಡು ಬರುತ್ತಿದ್ದು ಸ್ವತಃ ಕಂಪೆನಿಯವರು ಮಂಗಳೂರು ಕಮೀಷನರ್ ಅವರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಕಂಪೆನಿಯ ತಂತ್ರಜ್ಞಾನ ಯಂತ್ರದಲ್ಲಿ ಪರಿಶೀಲನೆ ನಡೆಸಿದಾಗ ಇಲ್ಲಿ ಸೋರಿಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಕಂಪೆನಿಯವರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿ ಪೊಲೀಸರ ಸಮಕ್ಷಮದಲ್ಲಿ ಐವನ್ ಅವರ ರಸ್ತೆಯನ್ನು ಜೆ.ಸಿ‌ಬಿ.ಮೂಲಕ ಅಗೆಯುವ ಕಾರ್ಯ ಮಾಡಿದ್ದಾರೆ.
ರಸ್ತೆಯನ್ನು ಅಗೆದಾಗ ಕಂಪೆನಿ ಪೈಪ್ ಲೈನ್ ಕೊರೆದು ಇವರು ಡೀಸೆಲ್‌ ಕಳವು ಮಾಡುತ್ತಿದ್ದ ಬಗ್ಗೆ ಬೆಳಕಿಗೆ ಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು