ಲಖನೌ: ಭಾರೀ ಬಹುಮತದೊಂದಿಗೆ ಬಿಜೆಪಿ ಎರಡನೇ ಅವಧಿಗೆ ಉತ್ತರಪ್ರದೇಶವನ್ನು(Uttar Pradesh) ಗೆದ್ದ ಕೆಲವು ದಿನಗಳ ನಂತರ, ಜಯಂತ್ ಚೌಧರಿ(Jayant Chaudhary) ಅವರ ಆರ್‌ಎಲ್‌ಡಿ(RLD) ಸೋಮವಾರ ರಾಜ್ಯದಲ್ಲಿ ಪಕ್ಷದ ಘಟಕಗಳನ್ನು ವಿಸರ್ಜಿಸುವ ಕುರಿತು ದೊಡ್ಡ ಘೋಷಣೆ ಮಾಡಿದೆ. ಚೌಧರಿ ಅವರು ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. “ರಾಷ್ಟ್ರೀಯ ಲೋಕದಳದ ರಾಷ್ಟ್ರೀಯ ಅಧ್ಯಕ್ಷ ಚೌಧರಿ ಜಯಂತ್ ಸಿಂಗ್ ಅವರ ಸೂಚನೆಯಂತೆ ರಾಜ್ಯ, ಪ್ರಾದೇಶಿಕ ಮತ್ತು ಜಿಲ್ಲಾ ಘಟಕಗಳು ಮತ್ತು ಎಲ್ಲಾ ಘಟಕಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗುತ್ತಿದೆ” ಎಂದು ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಿಂದಿಯಲ್ಲಿ ಟ್ವೀಟ್ ಮಾಡಲಾಗಿದೆ. ಆದಾಗ್ಯೂ ಈ ನಿರ್ಧಾರಕ್ಕೆ ಕಾರಣ ಏನು ಎಂದು ತಿಳಿದಿಲ್ಲ. ರಾಜ್ಯ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ 111 ಸ್ಥಾನಗಳನ್ನು ಗೆದ್ದರೆ ಆರ್‌ಎಲ್‌ಡಿ ಎಂಟು ಸ್ಥಾನಗಳನ್ನು ಗೆದ್ದಿದೆ. ರಾಜ್ಯದಲ್ಲಿ ಜಯಂತ್ ಚೌಧರಿ ಅವರ ಪಕ್ಷದ ಮತಗಳಿಕೆ ಶೇ.2.89 ಆಗಿದ್ದು, ಸಮಾಜವಾದಿ ಪಕ್ಷ ಶೇ.32.1ರಷ್ಟು ಮತಗಳನ್ನು ದಾಖಲಿಸಿದೆ.
ರಾಜ್ಯ ಚುನಾವಣೆಗೆ ಮುನ್ನ ಚೌಧರಿ ಅವರು ಬಿಜೆಪಿ ಮೈತ್ರಿಕೂಟಕ್ಕೆ ಸೇರುವ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ಹೇಳಿದ್ದರು. “ನಾವು ತಿರುಗುವ ‘ಚವನ್ನಿ’ (ನಾಣ್ಯ) ಅಲ್ಲ. ಬಿಜೆಪಿಯವರು ನಮ್ಮನ್ನು ಹಗುರವಾಗಿ ಪರಿಗಣಿಸಬಾರದು. ನಾವು ನಮ್ಮ ನಿರ್ಧಾರವನ್ನು ಬದಲಾಯಿಸುವುದಿಲ್ಲ ಎಂದು ಅವರು ಆ ಸಮಯದಲ್ಲಿ ಹೇಳಿದ್ದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist