ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೌದಿ ಜೈಲಿನಿಂದ ಬಿಡುಗಡೆ, ಆ.18 ಕ್ಕೆ ಹುಟ್ಟೂರಿಗೆ ಹರೀಶ್‌ ಬಂಗೇರ.

Twitter
Facebook
LinkedIn
WhatsApp
ಸೌದಿ ಜೈಲಿನಿಂದ ಬಿಡುಗಡೆ, ಆ.18 ಕ್ಕೆ ಹುಟ್ಟೂರಿಗೆ ಹರೀಶ್‌ ಬಂಗೇರ.

ಕುಂದಾಪುರ : ಸೌದಿ ಅರೇಬಿಯಾ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಕೋಟೇಶ್ವರ ಬೀಜಾಡಿಯ ನಿವಾಸಿ ಹರೀಶ್‌ ಬಂಗೇರ ಬಿಡುಗಡೆಗೊಂಡಿದ್ದಾರೆ. ಇದೇ ಅಗಸ್ಟ್‌ 18ರಂದು ಅವರು ಹುಟ್ಟೂರಿಗೆ ಆಗಮಿಸಲಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಫೇಸ್‌ಬುಕ್‌ ನಲ್ಲಿ ಮೆಕ್ಕಾ ಹಾಗೂ ಸೌದಿ ದೊರೆಯ ಬಗ್ಗೆ ಅವಹೇಳನಕಾರಿ ಬರಹದ ಆರೋಪದಡಿಯಲ್ಲಿ ಬಂಧನಕ್ಕೆ ಒಳಗಾಗಿದ್ದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರದ ನಿವಾಸಿ ಹರೀಶ್‌ ಬಂಗೇರ ಅವರು ಮೂರು ವರ್ಷಗಳ ಕಾಲ ಜೈಲಿನಲ್ಲಿದ್ದರು. ದುಬೈನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿ ಹರೀಶ್‌ ಬಂಗೇ ಮಂಗಳೂರಿನ ಸಿಎಎ ಗಲಭೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿದ್ದರು. ನಂತರ ಬೆದರಿಕೆಯ ಹಿನ್ನೆಲೆಯ ವಿಡಿಯೋ ಜೊತೆಗೆ ತಮ್ಮ ಫೇಸ್‌ಬುಕ್‌ ಖಾತೆಯನ್ನೇ ಡಿಲೀಟ್‌ ಮಾಡಿದ್ದರು.

ಆದರೆ ಕಿಡಿಗೇಡಿಗಳು ಹರೀಶ್‌ ಬಂಗೇರ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆಯನ್ನು ತೆರೆದು ಮೆಕ್ಕಾ ಹಾಗೂ ಸೌದಿ ದೊರೆಯ ಬಗ್ಗೆಅವಹೇಳನಕಾರಿ ಪೋಸ್ಟ್‌ ಮಾಡಿದ್ದಾರೆ. ಈ ಪೋಸ್ಟ್‌ ಸೌದಿಯಲ್ಲಿ ಸಾಕಷ್ಟು ವೈರಲ್‌ ಆಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಹರೀಶ್‌ ಬಂಗೇರ ಅವರನ್ನು ಬಂಧಿಸಿದ್ದರು. ಇದರ ಬೆನ್ನಲ್ಲೇ ಹರೀಶ್‌ ಬಂಗೇರ ಪತ್ನಿ, ತನ್ನ ಪತಿ ಹೆಸರಲ್ಲಿ ಫೇಕ್‌ ಫೇಸ್‌ಬುಕ್‌ ಖಾತೆ ತೆರೆದಿರುವ ಕುರಿತು ಉಡುಪಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತು ತನಿಖೆ ನಡೆಸಿದ ಎಸ್ಪಿ ನಿಶಾ ಜೇಮ್ಸ್‌ ಹಾಗೂ ಇಂದಿನ ಎಸ್ಪಿ ವಿಷ್ಣುವರ್ಧನ್‌ ಅವರು ಆರೋಪಿಗಳಾದ ಮೂಡಬಿದರೆಯ ಅಬ್ದುಲ್‌ ಹುಯೇಸ್‌ ಹಾಗೂ ಅಬ್ದುಲ್ ತುವೇಸ್‌ ಎಂಬವರನ್ನು ಬಂಧಿಸಿದ್ದರು. ‌ ಈ ಕಿಡಿಗೇಡಿಗಳು ನಡೆಸಿದ ಕೃತ್ಯಕ್ಕೆ ಅಮಾಯಕ ಹರೀಶ್ ಬಂಗೇರ ಸೌದಿಯಲ್ಲಿ ಮೂರು ವರ್ಷ ಕಳೆಯಬೇಕಾಗಿ ಬಂದಿದೆ.

ಉಡುಪಿಯಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದಿರುವುದು ದೃಢಪಟ್ಟ ಬೆನ್ನಲ್ಲೇ ಸೌದಿ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹರೀಶ್‌ ಬಂಗೇರ ಅಮಾಯಕ ಅನ್ನೋದು ಸೌದಿ ಪೊಲೀಸರಿಗೆ ಮನವರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹರೀಶ್‌ ಬಂಗೇಶ್‌ ಅವರನ್ನು ಬಿಡುಗಡೆ ಮಾಡಲಾಗಿದ್ದು, ಸೌದಿಯಲ್ಲಿರುವ ಅರೇಬಿಯಾ ಮಂಗಳೂರು ಅಸೋಸಿಯೇಷನ್‌ ಪ್ರಯಾಣದ ವೆಚ್ಚವನ್ನು ಭರಿಸಲು ಮುಂದೆ ಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು