ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಟನೆ ಬಿಟ್ಟು ವೇಶ್ಯಾವಾಟಿಕೆ ದಂಧೆಗಿಳಿದಿದ್ದ ಸ್ಯಾಂಡಲ್ ವುಡ್ ಹೀರೋ ಅರೆಸ್ಟ್

Twitter
Facebook
LinkedIn
WhatsApp
Manjunath

ಬೆಂಗಳೂರು: ಹೆಣ್ಣುಮಕ್ಕಳನ್ನು ಬಳಸಿಕೊಂಡು ಮಾಂಸ ದಂಧೆ ಶುರು ಮಾಡಿದ ಸ್ಯಾಂಡಲ್​ವುಡ್  ನಟನನ್ನು ಪೊಲೀಸರು ಬಂಧಿಸಿದ್ದಾರೆ.

ಲೊಕ್ಯಾಂಟೋ ಆ್ಯಪ್ ನ ಹಿಂದೆ ಬಿದ್ದಂತಹ ನಟ ಈಗ ಕಂಬಿ ಎಣಿಸುತ್ತಿದ್ದಾರೆ. ಹುಡುಗಿಯರ ಫೋಟೋಗಳನ್ನು ಬಳಸಿಕೊಂಡು ನಕಲಿ ಪ್ರೊಫೈಲ್ ಬಳಸಿ ದಂಧೆ ಮಾಡುತ್ತಿದ್ದ ನಟನನ್ನು ಪೊಲೀಸರು  ಬಂಧಿಸಿದ್ದಾರೆ. ಹೀರೋ ಆಗಿ ಗುರುತಿಸಿಕೊಂಡಿದ್ದ ವ್ಯಕ್ತಿಯೇ ದಂಧೆಯಲ್ಲಿ ಪ್ರಮುಖ ಆರೋಪಿಯಾಗಿದ್ದು ಸಂಜು ಅಲಿಯಾಸ್ ಮಂಜುನಾಥ್ ಅರೆಸ್ಟ್ ಆಗಿದ್ದಾರೆ.

ಮೂರು ವರ್ಷಗಳ ಹಿಂದೆ ತೆರೆಕಂಡ ‘ನ್ಯೂರಾನ್’ ಸಿನಿಮಾದ ನಾಯಕ ಮಂಜುನಾಥ್ ಅಲಿಯಾಸ್ ಸಂಜು ಅರೆಸ್ಟ್ ಆಗಿದ್ದಾನೆ. ಸಿನಿಮಾ ರಂಗದ ಹೆಸರನ್ನು ದುರುಪಯೋಗ ಪಡಿಸಿಕೊಂಡ ಈತ ಲೊಕ್ಯಾಂಟು ಆ್ಯಪ್ ಮೂಲಕ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನ್ಯೂರಾನ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಈತ ಆನಂತರ ಚಿತ್ರೋದ್ಯಮದಿಂದ ದೂರವಾಗಿ ಹೆಣ್ಣುಮಕ್ಕಳನ್ನು ದಂಧೆಗೆ ಇಳಿಸುವ ಕೆಲಸದಲ್ಲಿ ನಿರತನಾಗಿದ್ದ ಎಂದು ತಿಳಿದು ಬಂದಿದೆ.

ಸೈಕೋಲಾಜಿ ಸಂಬಂಧಪಟ್ಟಂತಹ  ನ್ಯೂರಾನ್ ಚಿತ್ರದಲ್ಲಿ ನಟಿಸಿದ್ದ ನಾಯಕ ನಟ ಮಂಜುನಾಥ್ ಬಂಧನವಾಗಿದೆ. ಈ ಸಿನಿಮಾ 2019ರಲ್ಲಿ ಬಿಡುಗಡೆಯಾಗಿತ್ತು.  ಈ ಸಂಬಂಧ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.. ತನಿಖೆ ಸಂಬಂಧ ಚಿತ್ರನಟ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಯುವ ಎಂದು ಹೆಸರಿಟ್ಟುಕೊಂಡು ಚಿತ್ರರಂಗಕ್ಕೆ ಪ್ರವೇಶ ನೀಡಿದ್ದ ಮಂಜುನಾಥ್ ಅಥವಾ ಸಂಜು ಲೊಕ್ಯಾಂಟೋದಲ್ಲಿ ಹುಡುಗಿಯರ ಫೋಟೋ ಬಳಸಿ ಗ್ರಾಹಕರನ್ನ ಸೆಳೆದು ಸುಲಿಗೆ ಮಾಡುವುದನ್ನೇ ಫುಲ್ ಟೈಂ ಕೆಲಸ ಮಾಡಿಕೊಂಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ