ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹರಿಣಗಳೆದುರು ಸೋಲುಂಡ ಟೀಂ ಇಂಡಿಯಾ, ಪಾಕ್ ಕಣ್ಣಲ್ಲಿ ನೀರು!

Twitter
Facebook
LinkedIn
WhatsApp
ಹರಿಣಗಳೆದುರು ಸೋಲುಂಡ ಟೀಂ ಇಂಡಿಯಾ, ಪಾಕ್ ಕಣ್ಣಲ್ಲಿ ನೀರು!

T20 World Cup 2022: ಪರ್ತ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳಿಂದ ಸೋಲನುಭವಿಸಿದೆ. ಆದರೆ ಈ ಸೋಲಿಗೆ ಒಂದು ಕಾರಣ ಭಾರತ ತಂಡದ ಬ್ಯಾಟ್ಸ್​ಮನ್​ಗಳ ವೈಫಲ್ಯ. ಇದಾಗ್ಯೂ ಟೀಮ್ ಇಂಡಿಯಾಗೆ ಬೌಲರ್​ಗಳು ಅತ್ಯುತ್ತಮ ಆರಂಭ ಒದಗಿಸಿದ್ದರು. ಆದರೆ ಈ ಉತ್ತಮ ಆರಂಭವನ್ನು ಮುಂದುವರೆಸುವಲ್ಲಿ ಟೀಮ್ ಇಂಡಿಯಾ ಫೀಲ್ಡರ್​ಗಳು ಎಡವಿದ್ದರು. ಅಂದರೆ ಕಳಪೆ ಫೀಲ್ಡಿಂಗ್​ನಿಂದ ಟೀಮ್ ಇಂಡಿಯಾ ಪಂದ್ಯವನ್ನೇ ಕೈಚೆಲ್ಲಿಕೊಂಡಿತು ಎಂದರೆ ತಪ್ಪಾಗಲಾರದು.

ಏಕೆಂದರೆ ಕೇವಲ 134 ರನ್​ಗಳ ಸುಲಭ ಗುರಿಯೊಳಗೆ ಎದುರಾಳಿಗಳನ್ನು ನಿಯಂತ್ರಿಸಲು ಅತ್ಯುತ್ತಮ ಬೌಲಿಂಗ್ ಹಾಗೂ ಫೀಲ್ಡಿಂಗ್ ಅತ್ಯವಶ್ಯಕ. ಅದರಂತೆ ಟೀಮ್ ಇಂಡಿಯಾಗೆ ಪವರ್​ಪ್ಲೇನಲ್ಲಿ ವೇಗದ ಬೌಲರ್​ಗಳು ಅತ್ಯುತ್ತಮ ಆರಂಭ ಒದಗಿಸಿದ್ದರು. ಕೇವಲ 24 ರನ್​ ನೀಡಿ 3 ವಿಕೆಟ್ ಕಬಳಿಸಿ ಸೌತ್ ಆಫ್ರಿಕಾಗೆ ಆರಂಭಿಕ ಆಘಾತ ನೀಡಿದ್ದರು.

ಆದರೆ ಸೌತ್ ಆಫ್ರಿಕಾ ಬ್ಯಾಟರ್​ಗಳ ಮೇಲೆ ಇದೇ ಒತ್ತಡವನ್ನು ಮುಂದುವರೆಸುವಲ್ಲಿ ಸಾಧ್ಯವಾಗಲಿಲ್ಲ. ಇದಕ್ಕೆ ಮುಖ್ಯ ಕಾರಣ ಭಾರತೀಯ ಆಟಗಾರರ ಕಳಪೆ ಫೀಲ್ಡಿಂಗ್. ಏಕೆಂದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಕೈಚೆಲ್ಲಿಕೊಂಡಿದ್ದು ಬರೋಬ್ಬರಿ 4 ಅವಕಾಶಗಳನ್ನು.

ಪಂದ್ಯದ ಆರಂಭದಲ್ಲೇ ಡೇವಿಡ್ ಮಿಲ್ಲರ್​ನನ್ನು ರನೌಟ್ ಮಾಡುವ ಅವಕಾಶ ರೋಹಿತ್ ಶರ್ಮಾಗೆ ಲಭಿಸಿತ್ತು. ಆದರೆ ಹಿಟ್​ಮ್ಯಾನ್ ಎಸೆದ ಥ್ರೋ ವಿಕೆಟ್​ನಿಂದ ದೂರ ಸಾಗಿತ್ತು. ಇದಾದ ಬಳಿಕ ಏಡನ್ ಮಾರ್ಕ್ರಾಮ್ ಅವರನ್ನು ರನೌಟ್ ಮಾಡುವ ಮತ್ತೊಂದು ಅವಕಾಶ ಸೂರ್ಯಕುಮಾರ್ ಮುಂದಿತ್ತು. ಆದರೆ ವಿಕೆಟ್​ಗೆ ಡೈರೆಕ್ಟ್ ಹಿಟ್​ ಮಾಡುವಲ್ಲಿ ಸೂರ್ಯ ವಿಫಲರಾಗಿದ್ದರು.

ಹರಿಣಗಳೆದುರು ಸೋಲುಂಡ ಟೀಂ ಇಂಡಿಯಾ, ಪಾಕ್ ಕಣ್ಣಲ್ಲಿ ನೀರು!

ಇನ್ನು 12ನೇ ಓವರ್​ನಲ್ಲಿ ಏಡನ್ ಮಾರ್ಕ್ರಾಮ್ ನೀಡಿದ ಸುಲಭ ಕ್ಯಾಚ್​ ಅನ್ನು ವಿರಾಟ್ ಕೊಹ್ಲಿ ಕೈಚೆಲ್ಲಿದ್ದರು. ಇದರ ಬೆನ್ನಲ್ಲೇ 13ನೇ ಓವರ್​ನಲ್ಲಿ ಡೇವಿಡ್ ಮಿಲ್ಲರ್ ಅವರನ್ನು ಸುಲಭವಾಗಿ ರನೌಟ್ ಮಾಡುವ ಅವಕಾಶ ರೋಹಿತ್ ಶರ್ಮಾ ಮುಂದಿತ್ತು. ಆದರೆ ಅತ್ಯುತ್ತಮ ಅವಕಾಶದಲ್ಲೂ ವಿಕೆಟ್​ಗೆ ಡೈರೆಕ್ಟ್​ ಆಗಿ ಚೆಂಡು ತಾಗಿಸುವಲ್ಲಿ ಹಿಟ್​ಮ್ಯಾನ್ ವಿಫಲರಾದರು.

ಹೀಗೆ 13 ಓವರ್​ಗಳ ಒಳಗೆ ಸಿಕ್ಕ ನಾಲ್ಕು ಅವಕಾಶಗಳನ್ನು ಟೀಮ್ ಇಂಡಿಯಾ ಕೈಚೆಲ್ಲಿಕೊಂಡಿದ್ದು ದುಬಾರಿಯಾಯಿತು ಎನ್ನಬಹುದು. ಏಕೆಂದರೆ ಈ ಹಂತದಲ್ಲಿ ಸೌತ್ ಆಫ್ರಿಕಾ ಕಲೆಹಾಕಿದ್ದು ಕೇವಲ 68 ರನ್​ಗಳು ಮಾತ್ರ. ಆದರೆ ಟೀಮ್ ಇಂಡಿಯಾ ಫೀಲ್ಡರ್​ಗಳು ನೀಡಿದ ಜೀವದಾನವನ್ನು ಬಳಸಿಕೊಂಡ ಡೇವಿಡ್ ಮಿಲ್ಲರ್ (59) ಹಾಗೂ ಏಡನ್ ಮಾರ್ಕ್ರಾಮ್ (52) ಅರ್ಧಶತಕ ಬಾರಿಸುವ ಮೂಲಕ ತಂಡಕ್ಕೆ ಜಯ ತಂದುಕೊಡುವಲ್ಲಿ ಯಶಸ್ವಿಯಾದರು.

ಪಾಕ್ ಕಣ್ಣಲ್ಲಿ ನೀರು!  ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಪಾಕಿಸ್ತಾನ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ಗೆಲ್ಲಲಿ ಎಂದು ಪ್ರಾರ್ಥನೆ ಮಾಡಿತ್ತು. ಆದರೆ ಇಂದಿನ ಪಂದ್ಯದಲ್ಲಿ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಸೋಲು ಕಂಡಿದ್ದು ಈ ಮೂಲಕ ಪಾಕಿಸ್ತಾನದ ಸೆಮಿಫೈನಲ್ ಕನಸು ಮತ್ತಷ್ಟು ಕಗ್ಗಂಟಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist