ಸೋಮವಾರ, ಅಕ್ಟೋಬರ್ 2, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಾಲಿನಲ್ಲಿ ಇಲಿ ಪಾಷಾಣ ಬೆರೆಸಿ ಮಕ್ಕಳಿಗೆ ಕುಡಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ – ಮಗು ಸಾವು

Twitter
Facebook
LinkedIn
WhatsApp
DB 04012023 leopard 1

ಹಾಸನ: ತಾಯಿಯೊಬ್ಬಳು ಹಾಲಿನಲ್ಲಿ ಇಲಿ ಪಾಷಾಣ ಬೆರೆಸಿ ಮಕ್ಕಳಿಗೆ ಕುಡಿಸಿ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾಸನದ‌ (Hassan) ಚಿಪ್ಪಿನಕಟ್ಟೆ ಬಡಾವಣೆಯಲ್ಲಿ ತಡವಾಗಿ ಬೆಳಕಿಗೆ ನಡೆದಿದೆ.

ವಿಷ ಕುಡಿದಿದ್ದ ಆರಾನ್ (7) ಸಾವನ್ನಪ್ಪಿದ್ದು, ಸುನೈನಾ (6) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ, ಜೀನತ್‌ಬಾನು ಜಿಲ್ಲಾಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಪಡೆಯುತ್ತಿದ್ದಾಳೆ. 12 ವರ್ಷಗಳ ಹಿಂದೆ ಹಾಸನದ ಚಿಪ್ಪಿನಕಟ್ಟೆಯ ದಿಲ್‌ದಾರ್ ಜೊತೆ ಮಂಗಳೂರಿನ ಉಪ್ಪಿನಂಗಡಿ ಬಳಿಯ ಸತ್ತಿಗಲ್‌ ಮೂಲದ ಜೀನತ್‌ಬಾನು ವಿವಾಹವಾಗಿತ್ತು. ಮದುವೆಯಾದಗಿನಿಂದಲೂ (Wedding) ಆಕೆಯ ಪೋಷಕರು ಜೀನತ್‌ಬಾನುಳನ್ನು ನೋಡಲು ಬಂದಿರಲಿಲ್ಲ. ಇದರಿಂದ ಮನನೊಂದಿದ್ದ ಜೀನತ್‌ಬಾನು ಹಾಲಿನಲ್ಲಿ ಇಲಿ ಪಾಷಾಣ ಬೆರಸಿ ತಾನು ಕುಡಿದು ಮಕ್ಕಳಿಗೆ ಕುಡಿಸಿದ್ದಾಳೆ.‌ ವಿಷ ಉಣಿಸಿರುವ ಬಗ್ಗೆ ಪತಿ, ಅತ್ತೆ, ಮಾವನಿಗೆ ಜೀನತ್‌ಬಾನು ತಿಳಿಸಿರಲಿಲ್ಲ.

ಜ.8 ರಂದು ಬೆಳಿಗ್ಗೆ ಆರಾನ್‌ಗೆ ವಾಂತಿ ಭೇದಿಯಾಗಿದ್ದು, ಕೂಡಲೇ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಆರಾನ್ ಸಾವನ್ನಪ್ಪಿದ್ದಾನೆ.‌ ಆದರೂ ವಿಷ ಉಣಿಸಿರುವ ಬಗ್ಗೆ ತಾಯಿ (Mother) ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ಫುಡ್ ಪಾಯ್ಸನ್‌ನಿಂದ ಮಗು ಮೃತಪಟ್ಟಿದೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದರು. ನಂತರ ವಲ್ಲಭಭಾಯಿ ರಸ್ತೆಯಲ್ಲಿರುವ ಖಬ್ರಸ್ತಾನ್‌‌ನಲ್ಲಿ ಆರಾನ್ ಅಂತ್ಯಕ್ರಿಯೆ ನಡೆಸಲಾಗಿತ್ತು. ಇದಾದ ಬಳಿಕ ಸುನೈನಾ ಹಾಗೂ ಜೀನತ್‌ಬಾನುಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ಈ ವೇಳೆ ವಿಷ ಉಣಿಸಿರುವ ಬಗ್ಗೆ ಜೀನತ್‌ಬಾನು ತನ್ನ ಪತಿ ಬಳಿ ಹೇಳಿದ್ದಾಳೆ. 

ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜೀನತ್‌ಬಾನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಸುನೈನಾ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಹಾಸನ ತಹಸೀಲ್ದಾರ್ ಸಂತೋಷ್ ಸಮ್ಮುಖದಲ್ಲಿ ಹೂತಿದ್ದ ಆರಾನ್ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಯಿತು.‌ ಪೆನ್‌ಷನ್‌ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೀನತ್‌ಬಾನು ವಿರುದ್ಧ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ