ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೆಚ್​ಡಿ ಕುಮಾರಸ್ವಾಮಿ ಅವರ ಷರತ್ತನ್ನು ಪಾಲಿಸಿದ ಬಿಜೆಪಿ?

Twitter
Facebook
LinkedIn
WhatsApp
ಹೆಚ್​ಡಿ ಕುಮಾರಸ್ವಾಮಿ ಅವರ ಷರತ್ತನ್ನು ಪಾಲಿಸಿದ ಬಿಜೆಪಿ?

ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಬಿಜೆಪಿ ಮತ್ತು ಜೆಡಿಎಸ್​ ಜಂಟಿಯಾಗಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಆರಂಭಿಸಿವೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಪಾದಯಾತ್ರೆ ಚಾಲನಾ ಕಾರ್ಯಕ್ರಮದಲ್ಲಿ  ಕಾಣಸಿಕೊಂಡಿಲ್ಲ. ಈ ಮೂಲಕ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರ ಷರತ್ತನ್ನು ಪಾಲಿಸಿದ ಬಿಜೆಪಿ?.

ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ನೀವೇಶನ ಹಂಚಿಕೆ ಹಗರಣ (Muda Scam) ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಅವರ ಕುಟುಂಬ ಭಾಗಿಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಿಜೆಪಿ ಮತ್ತು ಜೆಡಿಎಸ್​ ಜಂಟಿಯಾಗಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಆರಂಭಿಸಿವೆ. 

ಪಾದಯಾತ್ರೆಗೆ ಬೆಂಗಳೂರಿನ ಮೈಸೂರು ರಸ್ತೆಯ ಕೆಂಗೇರಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಹಾಗೂ ಹೆಚ್ ಡಿ ಕುಮಾರಸ್ವಾಮಿ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಅಕ್ರಮವಾಗಿ 14 ನಿವೇಶಗಳನ್ನು ಹಂಚಲಾಗಿದೆ ಎಂಬ ಆರೋಪ ಬಿಜೆಪಿ, ಜೆಡಿಎಸ್‌ ನದ್ದಾಗಿದೆ. ಕೆಂಗೇರಿಯ ನೈಸ್‌ ಜಂಕ್ಷನ್ ಬಳಿ ಇರುವ ಕೆಂಪಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂದು ಪಾದಯಾತ್ರೆಗೆ ಚಾಲನೆ ನೀಡಿದರು. ಬೆಂಗಳೂರಿನಿಂದ ಮೈಸೂರಿಗೆ ಬೃಹತ್ ಪಾದಯಾತ್ರೆ ಆರಂಭಗೊಂಡಿದ್ದು ಅಲ್ಲೀಗ ಭಾರೀ ಸಂಚಾರದಟ್ಟಣೆ ಉಂಟಾಗಿದೆ. ಡಾ. ರಾಧಾ ಮೋಹನ್‌ ದಾಸ್ ಅಗರವಾಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಹಾಜರಿದ್ದರು.

ಜೆಡಿಸ್ ಹಾಗೂ ಬಿಜೆಪಿ ಜಂಟಿಯಾಗಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಯ ಗೀತೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಬಿಡುಗಡೆ ಮಾಡಿದರು.

ಕಾಂಗ್ರೆಸ್‌ ಸರ್ಕಾರದ ಹಗರಣಗಳ ವಿರುದ್ಧ ಬಿಜೆಪಿ ಜೆಡಿಎಸ್‌ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆ ಕರ್ನಾಟಕದ ದಿಕ್ಕು ಬದಲಿಸಲಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧದ ಹೋರಾಟ ಇದಾಗಿದೆ. ಕರುನಾಡ ಜನರ ಸುಲಿಗೆ ಮಾಡಿ ರಾಹುಲ್‌ ಗಾಂಧಿ ಅವರಿಗೆ ಕಳುಹಿಸಿ ಕೊಡುತ್ತಿದೆ ಕರ್ನಾಟಕ ಕಾಂಗ್ರೆಸ್ ಎಂದು ಹೇಳಿದರು.

ಇಂದಿನಿಂದ ಆಗಸ್ಟ್ 10ರವರೆಗೆ 140 ಕಿಮೀ ಪಾದಯಾತ್ರೆ ಇದಾಗಿದೆ. ಕೆಂಗೇರಿಯಲ್ಲಿ ಉದ್ಘಾಟನೆ, ಮೈಸೂರಿನ ಸಮಾರೋಪ ಕಾರ್ಯಕ್ರಮ ಹೊರತುಪಡಿಸಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಶ್ರೀರಂಗಪಟ್ಟಣದಲ್ಲಿ ಬಹಿರಂಗ ಸಭೆಗಳು ನಡೆಯಲಿವೆ. ಬೆಳಗ್ಗೆ 10 ಕಿ.ಮೀ. ಮಧ್ಯಾಹ್ನ ಊಟದ ನಂತರ 10 ಕೀ.ಮೀನಂತೆ ಪ್ರತಿದಿನ 20 ಕಿ.ಮೀ. ಕ್ರಮಿಸಲು ಯೋಜಿಸಲಾಗಿದೆ. ಆಗಸ್ಟ್​ 10ರಂದು ಬೆಳಗ್ಗೆ 10.30ಕ್ಕೆ ಮೈಸೂರಿನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿಧಾನಸಭೆ ಕ್ಷೇತ್ರವಾರು 200 ಜನರು ಸೇರಿ ಪ್ರತಿದಿನ ಐದಾರು ಸಾವಿರ ಜನರು ಭಾಗಹಿಸಲಿದ್ದಾರೆ. 

ವಿಧಾನಸಭೆ, ವಿಧಾನ ಪರಿಷತ್ ಸದಸ್ಯರು ಸೇರಿ ರಾಜ್ಯದ ಎಲ್ಲ ಜಿಲ್ಲೆಗಳ ಮುಖಂಡರು, ಪದಾಧಿಕಾರಿಗಳು ಏಳು ದಿನವೂ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪಾದಯಾತ್ರೆಯ ಯಶಸ್ಸಿಗೆ 20ರಿಂದ 22 ವಿಭಾಗಗಳನ್ನು ರಚಿಸಲಾಗಿದೆ.

ಪ್ರೀತಂ ಗೌಡ ಬರದೆ ಇರಲು ಕಾರಣವೇನು?

ರಾಜ್ಯ ಕಾಂಗ್ರೆಸ್​ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ಆಗ್ರಹಿಸಿ ಬಿಜೆಪಿ, ಜೆಡಿಎಸ್​ ನಾಯಕರು ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿದ್ದಾರೆ. ಮೈಸೂರು ಚಲೋ ಪಾದಯಾತ್ರೆ ಸಿದ್ಧತೆ ಸಮಯದಲ್ಲೇ ಅಪಸ್ವರ ಕೇಳಿಬಂದಿತ್ತು. ಜೆಡಿಎಸ್ ನಾಯಕರು​ ಪಾದಯಾತ್ರೆಗೆ ಬೆಂಬಲ ಸೂಚಿಸುವುದಿಲ್ಲ ಎಂದು ಹೇಳಿದ್ದರು.

ಆರಂಭದಲ್ಲಿ ರಾಜ್ಯದಲ್ಲಿ ಪ್ರವಾಹ ಪರಿಸ್ಥತಿ ಉಂಟಾಗಿದೆ, ಹೀಗಾಗಿ ಪಾದಯಾತ್ರೆ ನಡೆಸುವುದು ಬೇಡ ಅಂತ ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಸೇರಿದಂತೆ ಎಲ್ಲ ಜೆಡಿಎಸ್​ ನಾಯಕರು ಪುನರ್ ಉಚ್ಚರಿಸಿದ್ದರು.​ ಆದರೆ ಬಿಜೆಪಿ ಇದನ್ನು ಕಿವಿಗೆ ಹಾಕಿಕೊಳ್ಳದೆ ತಯಾರಿಯನ್ನು ಜೋರಾಗಿಯೇ ನಡೆಸಿತ್ತು. ಪಾದಯಾತ್ರೆಗೆ ಪೂರ್ವ ಸಿದ್ಧತೆ ಸಭೆಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಆಹ್ವನಿಸಲಾಗಿತ್ತು. ಈ ಸಭೆಯಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಕೂಡ ಭಾಗಿಯಾಗಿದ್ದರು. ಅಲ್ಲದೆ, ಪಾದಯಾತ್ರೆ ಕೂಡ ಪ್ರೀತಂ ಗೌಡ ನೇತೃತ್ವದಲ್ಲೇ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.

ಪ್ರೀತಂ ಗೌಡ ನೇತೃತ್ವದಲ್ಲಿ ಪಾದಯಾತ್ರೆ ಮತ್ತು ಸಭೆಯಲ್ಲಿ ಭಾಗಿಯಾಗಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ  ಕೆಂಡದಂತಾಗಿದ್ದರು. ಬಿಜೆಪಿ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸಿದ್ದರು. 

ಹಾಸನದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್​ಡ್ರೈವ್​ ಅನ್ನು ಪ್ರೀತಂ ಗೌಡ ಅವರು ತಮ್ಮ ಬೆಂಬಲಿಗರ ಮೂಲಕ ಹಂಚಿದ್ದಾರೆ. ದೇವೇಗೌಡರ ಕುಟುಂಬಕ್ಕೆ ವಿಷ ಹಾಕಲು ಹೊರಟಿದ್ದವರನ್ನು ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆ. ಮತ್ತು ಪಾದಯಾತ್ರೆ ಬಗ್ಗೆ ನಮಗೆ ಯಾವ ಮಾಹಿತಿ ನೀಡಲ್ಲ, ನಾವು ಪಾದಯಾತ್ರೆಗೆ ಬೆಂಬಲಿಸಲ್ಲ ಎಂದು ಬಹಿರಂಗವಾಗಿ ಹೇಳಿದ್ದರು.

ಪಾದಯಾತ್ರೆಗೆ ಆರಂಭದಲ್ಲೇ ವಿಘ್ನ ಬಂದಿದ್ದರಿದ್ದ, ಎಚ್ಚತ್ತ ಬಿಜೆಪಿ ಹೈಕಮಾಂಡ್​ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಹೆಚ್​ಡಿ ಕುಮಾರಸ್ವಾಮಿ ಅವರನ್ನು ದೆಹಲಿಗೆ ಕರೆಸಿಕೊಂಡು ರಾಜಿಸಂಧಾನ ಮಾಡಿದರು. ಈ ವೇಳೆ ಹೆಚ್​ಡಿ ಕುಮಾರಸ್ವಾಮಿ ಹೈಕಮಾಂಡ್​ ಮುಂದೆ ಪ್ರೀತಂ ಗೌಡ ಪಾದಯಾತ್ರೆಯಲ್ಲಿ ಭಾಗಿಯಾಗದಂತೆ ಷರತ್ತು ವಿಧಿಸಿದ್ದರು. ಅದರಂತೆ ಇದೀಗ ಮೈಸೂರು ಚಲೋ ಕಾರ್ಯಕ್ರಮದಲ್ಲಿ ಪ್ರೀತಂಗೌಡ ಭಾಗಿಯಾಗಲಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ