ಬುಧವಾರ, ಅಕ್ಟೋಬರ್ 4, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೆರಿಗೆ ವೇಳೆ ರಕ್ತನಾಳವನ್ನೇ ಕತ್ತರಿಸಿದ ವೈದ್ಯ-ತಾಯಿ, ಶಿಶು ಸಾವು

Twitter
Facebook
LinkedIn
WhatsApp
ಹೆರಿಗೆ ವೇಳೆ ರಕ್ತನಾಳವನ್ನೇ ಕತ್ತರಿಸಿದ ವೈದ್ಯ-ತಾಯಿ, ಶಿಶು ಸಾವು

ಉತ್ತರಪ್ರದೇಶ, ಜ 27 : ಹೆರಿಗೆ ಶಸ್ತ್ರಚಿಕಿತ್ಸೆ ವೇಳೆ ನಕಲಿ ವೈದ್ಯನೊಬ್ಬ ರಕ್ತನಾಳವನ್ನೇ ಕತ್ತರಿಸಿದ ಪರಿಣಾಮ ಮಹಿಳೆ ಮತ್ತು ಆಕೆಯ ನವಜಾತ ಶಿಶು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಮಾವಾನಾ ಪಟ್ಟಣದ ಪರೀಕ್ಷಿತ್‌ಗಢ ರಸ್ತೆಯಲ್ಲಿರುವ ರತನ್ ನರ್ಸಿಂಗ್ ಹೋಂನಲ್ಲಿ ನಡೆದಿದೆ.

ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಹಿಳೆ ನರ್ಸಿಂಗ್ ಹೋಂಗೆ ದಾಖಲಾಗಿದ್ದರು. ಈ ವೇಳೆ ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ನಕಲಿ ವೈದ್ಯ ಮಹಿಳೆಯ ಒಂದು ರಕ್ತನಾಳವನ್ನು ಕತ್ತರಿಸಿದ್ದಾನೆ. ಇದರಿಂದ ಮಹಿಳೆಗೆ ತೀವ್ರ ರಕ್ತಸ್ರಾವವಾಗಿದ್ದು, ತಾಯಿ-ಮಗು ಇಬ್ಬರೂ ಮೃತಪಟ್ಟಿದ್ದಾರೆ.

ತಾಯಿ-ನವಜಾತ ಶಿಶುವಿನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮೃತ ಮಹಿಳೆಯ ಕುಟುಂಬಿಕರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ. ಇನ್ನು ಗಲಾಟೆ ವೇಲೆ ನರ್ಸಿಂಗ್ ಹೋಂ ಸಿಬಂದಿ ಮತ್ತು ವೈದ್ಯರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಪ್ರತಿಭಟನಾಕಾರರನ್ನು ಮನವೊಲಿಸಿ ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮಾವಾನಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ