ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೆಸರಿಲ್ಲದ 21 ಅಂಡಮಾನ್ ದ್ವೀಪಗಳಿಗೆ ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರಿಟ್ಟ ಪ್ರಧಾನಿ ಮೋದಿ

Twitter
Facebook
LinkedIn
WhatsApp
PM Modi 1

ನವದೆಹಲಿ (ಜನವರಿ 23, 2023): ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ವಾರ್ಷಿಕೋತ್ಸವ. ಈ ಹಿನ್ನೆಲೆ, ಈ ಮಹತ್ತರ ದಿನದ ನೆನಪಿಗಾಗಿ ಕೇಂದ್ರ ಸರ್ಕಾರವು 2021 ರಲ್ಲಿ ಜನವರಿ 23 ಅನ್ನು ಪರಾಕ್ರಮ್ ದಿವಸ್ ಎಂದು ಘೋಷಿಸಿತ್ತು. ಈ ಹಿನ್ನೆಲೆ ಈ ಸಂದರ್ಭದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ 21 ದೊಡ್ಡ ಹೆಸರಿಸದ ದ್ವೀಪಗಳಿಗೆ ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರಿಡಲಾಗಿದೆ. ಅಲ್ಲದೆ, ಈ ಹಿಂದೆ ರಾಸ್ ಐಲ್ಯಾಂಡ್ಸ್ ಎಂದು ಕರೆಯಲಾಗುತ್ತಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪದಲ್ಲಿ ನಿರ್ಮಿಸಲಾಗಿದ್ದ ನೇತಾಜಿಗೆ ಮೀಸಲಾಗಿರುವ ರಾಷ್ಟ್ರೀಯ ಸ್ಮಾರಕದ ಮಾದರಿಯನ್ನು ಸಹ ಪ್ರಧಾನಿ ಮೋದಿ ಅನಾವರಣಗೊಳಿಸಿದರು. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ನಡೆದ ಈ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ಉಪಸ್ಥಿತರಿದ್ದರು.

ಕಾಶ್ಮೀರದ ಶ್ರೀನಗರ ವಿಮಾನ ನಿಲ್ದಾಣದ ಬಳಿ ಪಾಕಿಸ್ತಾನಿ ನುಸುಳುಕೋರರ ವಿರುದ್ಧ ಹೋರಾಡುವಾಗ ನವೆಂಬರ್ 3, 1947 ರಂದು ಕಾರ್ಯಾಚರಣೆಯಲ್ಲಿ ಪ್ರಾಣ ಕಳೆದುಕೊಂಡ ಮೊದಲ ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತ ಮೇಜರ್ ಸೋಮನಾಥ್ ಶರ್ಮಾ ಅವರ ಹೆಸರನ್ನು ಹೆಸರಿಸದ ಅತಿದೊಡ್ಡ ದ್ವೀಪಕ್ಕೆ ಇಡಲಾಗಿದೆ.

“ದೇಶದ ನಿಜಜೀವನದ ಹೀರೋಗಳಿಗೆ ಸರಿಯಾದ ಗೌರವವನ್ನು ನೀಡುವುದು ಯಾವಾಗಲೂ ಪ್ರಧಾನ ಮಂತ್ರಿಯ ಅತ್ಯುನ್ನತ ಆದ್ಯತೆಯಾಗಿದೆ. ಈ ಮನೋಭಾವದೊಂದಿಗೆ ಮುಂದುವರಿಯುತ್ತಾ, ಈಗ ದ್ವೀಪ ಸಮೂಹದ 21 ದೊಡ್ಡ ಹೆಸರಿಸದ ದ್ವೀಪಗಳಿಗೆ 21 ಪರಂ ವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರಿಸಲು ನಿರ್ಧರಿಸಲಾಗಿದೆ” ಎಂದೂ ಪ್ರಧಾನ ಮಂತ್ರಿ ಕಾರ್ಯಾಲಯ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಹೆಸರಿಸದ ಅತಿದೊಡ್ಡ ದ್ವೀಪಕ್ಕೆ ಮೊದಲ ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಇಡಲಾಗಿದೆ. ಹಾಗೆ, ಎರಡನೇ ಅತಿ ದೊಡ್ಡ ಹೆಸರಿಲ್ಲದ ದ್ವೀಪಕ್ಕೆ ಎರಡನೇ ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರು, ಹೀಗೆ ಹೆಸರು ಇಡಲಾಗಿದೆ. ರಾಷ್ಟ್ರದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ರಕ್ಷಿಸಲು ಅಂತಿಮ ತ್ಯಾಗ ಮಾಡಿದ ನಮ್ಮ ವೀರರಿಗೆ ಈ ಹಂತವು ಶಾಶ್ವತ ಗೌರವವಾಗಿದೆ ಎಂದೂ ಅವರು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ