ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ʼಕೈʼಯಿಂದ ತಪ್ಪಿದ ಟಿಕೆಟ್‌: JDS ಸೇರಿದ ಅನಿಲ್‌ ಲಾಡ್

Twitter
Facebook
LinkedIn
WhatsApp
Madhuri Dixit Nene in white chikankari Tarun Tahiliani lehenga 2

ಬೆಂಗಳೂರು: ಕಾಂಗ್ರೆಸ್‌ ನಿಂದ ಟಿಕೆಟ್‌ ಕೈ ತಪ್ಪಿದಕ್ಕೆ ಅಸಮಾಧಾನಗೊಂಡು ಬಂಡಾಯ ಎದಿದ್ದ ಮಾಜಿ ಶಾಸಕ ಅನಿಲ್‌ ಲಾಡ್‌ ರಾತ್ರೋ ರಾತ್ರಿ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಸಮ್ಮುಖದಲ್ಲಿ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್ ಪಕ್ಷ ತನಗೆ ಟಿಕೆಟ್‌ ನೀಡುತ್ತದೆ ಎನ್ನುವ ಭರವಸೆಯಲ್ಲಿದ್ದ ಮಾಜಿ ಶಾಸಕ ಅನಿಲ್‌ ಲಾಡ್‌ ಅವರಿಗೆ ಟಿಕೆಟ್‌ ನೀಡಿಲ್ಲ. ಇದರಿಂದ ತಮ್ಮ ಪಕ್ಷದ ವಿರುದ್ಧವೇ ಅಸಮಾಧಾನಗೊಂಡು ಬಂಡಾಯ ಅಭ್ಯರ್ಥಿಯಾಗಿ ನಿಲ್ಲುವುದಾಗಿ ಅನಿಲ್‌ ಲಾಡ್‌ ಹೇಳಿದ್ದರು. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಂಡಾಯ ಅಭ್ಯರ್ಥಿಯ ಬದಲು ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬುಧವಾರ ಮುಂಜಾನೆ ಹೆಚ್.‌ ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಬಳ್ಳಾರಿ ಕ್ಷೇತ್ರದಿಂದಲೇ ಸ್ಪರ್ಧಿಸಲು ಬಿ ಫಾರ್ಮ್‌ ಪಡೆದುಕೊಂಡಿದ್ದಾರೆ. ಈ ಹಿಂದೆ ಬಳ್ಳಾರಿ ಕ್ಷೇತ್ರಕ್ಕೆ ಜೆಡಿಎಸ್‌ ಮುಸ್ಲಿಂ ಅಭ್ಯರ್ಥಿ ಭಕಾಶ್‌ ಮುನ್ನ ಎಂಬುವವರಿಗೆ ಟಿಕೆಟ್‌ ನೀಡಿತ್ತು. ಇದೀಗ ಅಭ್ಯರ್ಥಿಯನ್ನು ಬದಲಾಯಿಸಿ ಬಳ್ಳಾರಿ ಕ್ಷೇತ್ರಕ್ಕೆ ಅನಿಲ್‌ ಲಾಡ್‌ ಅವರಿಗೆ ಟಕೆಟ್‌ ನೀಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ