ಭಾನುವಾರ, ಮೇ 12, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಂಗನವಾಡಿ ಶಿಕ್ಷಣ ಅವಧಿ ಕಡಿತ- ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಕ್ಷಣ

Twitter
Facebook
LinkedIn
WhatsApp
agSGsh 1024x576 1

ಬೆಂಗಳೂರು (ಫೆ.01): ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಶಿಕ್ಷಣ ನೀಡುವ ಅವಧಿಯನ್ನು ಸೀಮಿತಗೊಳಿಸಿ ಸರ್ಕಾರವು ಸುತ್ತೋಲೆ ಹೊರಡಿಸಿದ್ದು, ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಕ್ಷಣ ನೀಡುವಂತೆ ಸೂಚಿಸಲಾಗಿದೆ. ಹಿಂದೆ 2011ರಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ನೀಡುವ ಶಿಕ್ಷಣ ಅವಧಿಯನ್ನು ಬೆಳಗ್ಗೆ 9.30ರಿಂದ ಸಂಜೆ 4ಗಂಟೆವರೆಗೆ ನಡೆಸುವಂತೆ ಆದೇಶಿಸಲಾಗಿತ್ತು. 

ಇದನ್ನು ಬದಲಿಸಿ ಶಿಕ್ಷಣ ಅವಧಿಯನ್ನು ಬೆಳಗ್ಗೆ 10ರಿಂದ ಮಧ್ಯಾಹ್ನ 1ಗಂಟೆವರೆಗೆ ನಡೆಸಲು ಸಮಯ ನಿಗದಿ ಮಾಡಲಾಗಿದೆ ಎಂದು ಸುತ್ತೋಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ. ಶಿಕ್ಷಣ ನೀಡುವ ಅವಧಿಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಪೋಷಕರು, ಸಾರ್ವಜನಿಕರು, ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದ ರೀತಿಯಲ್ಲಿ ಭೇಟಿಯಾಗಬೇಕು.

ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಫಲಾನುಭವಿಗಳು ಮತ್ತು ಭಾಗ್ಯಲಕ್ಷ್ಮೇ ಯೋಜನೆಯ ಫಲಾನುಭವಿಯ ಪೋಷಕರು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕಾದರೆ ಅಥವಾ ಚರ್ಚೆ ನಡೆಸಬೇಕಾದರೆ ಮಧ್ಯಾಹ್ನ 2 ಗಂಟೆಯ ನಂತರ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಬೇಕು. ಈ ಸೂಚನೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಸಂಬಂಧಪಟ್ಟಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯರು ಸಹ ಶಾಲಾ ಪೂರ್ವ ಶಿಕ್ಷಣ ಕಲಿಕೆಯ ಅವಧಿಯನ್ನು ಹಾಲಿ ಬೆಳಗ್ಗೆ 9.30ರಿಂದ ಸಂಜೆ 4 ರವರೆಗೆ ಇರುವುದನ್ನು ಕಡಿಮೆ ಮಾಡಬೇಕು ಎಂದು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಶಾಲಾ ಶಿಕ್ಷಣದ ಅವಧಿಯನ್ನು ಕಡಿಮೆ ಮಾಡಿದೆ. ಈ ನಡುವೆ, ಮಿನಿ ಅಂಗನವಾಡಿ ಕಾರ್ಯಕತೆಯರನ್ನು ಅಂಗನವಾಡಿ ಕಾರ್ಯಕರ್ತೆಯರನ್ನಾಗಿ ಬಡ್ತಿ ನೀಡುವ ವಿಚಾರದಲ್ಲಿ ಮಾಡಲಾಗಿದ್ದ ಆದೇಶಕ್ಕೆ ತಿದ್ದುಪಡಿ ಮಾಡಿ ಈ ಮೊದಲಿನಂತೆ ಅನುಸರಿಸುವ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಆದೇಶಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ