ಬುಧವಾರ, ಮೇ 8, 2024
ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್-ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌-ಡಿಕೆಶಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಲಿ : ಎಚ್‌ಡಿ ಕುಮಾರಸ್ವಾಮಿ-ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಕಾಪಟ್ಟೆ ಟ್ರೋಲ್!!-ಹರಿಯಾಣ ಸರ್ಕಾರ ಬೆಂಬಲಿಸುತ್ತಿದ್ದ ಮೂವರು ಶಾಸಕರು ಕಾಂಗ್ರೆಸ್ ಸೇರ್ಪಡೆ..!-ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಕಾಲಿಕ ಮಳೆ,15 ದಿನಗಳಲ್ಲಿ ಬೆಳೆ ಹಾನಿ ಪರಿಹಾರ--ಸಚಿವ ಆರ್. ಅಶೋಕ್

Twitter
Facebook
LinkedIn
WhatsApp
ಅಕಾಲಿಕ ಮಳೆ, 15 ದಿನಗಳಲ್ಲಿ ಬೆಳೆ ಹಾನಿ ಪರಿಹಾರ–ಸಚಿವ ಆರ್. ಅಶೋಕ್

ಕೊಡಗು: ಕೊಡಗು ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದ ಅಪಾರ ಪ್ರಮಾಣದಲ್ಲಿ ಕಾಫಿ ಬೆಳೆ ನಷ್ಡವಾಗಿದ್ದು, ಕಾಫಿ ಬೆಳೆ ಹಾನಿ ಸಂಬಂಧ ಮರು ಸರ್ವೆ ಮಾಡಿ 15 ದಿನಗಳಲ್ಲಿ ವರದಿ ನೀಡಿ ಪರಿಹಾರ ವಿತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.

ಅಕಾಲಿಕ ಮಳೆಯಿಂದಾಗಿ ಸೋಮವಾರಪೇಟೆ ತಾಲೂಕಿನ ವಿವಿಧೆಡೆ ಕಾಫಿ, ಭತ್ತ, ಮುಸುಕಿನ ಜೋಳದ ಬೆಳೆ ಹಾನಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಭಾರಿ ಮಳೆಯಿಂದಾಗಿ 146 ಮನೆಗಳು ಹಾನಿಯಾಗಿವೆ. 40,878 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ, 22 ಜಾನುವಾರುಗಳ ಪ್ರಾಣ ಹಾನಿ, 10 ಜಾನುವಾರು ಕೊಟ್ಟಿಗೆ ಹಾನಿ ಹಾಗೂ 127 ಕೋಟಿ ರೂ.ಗಳ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಉಂಟಾಗಿದ್ದು, ಈಗಾಗಲೇ ಹಲವು ಹಾನಿ ಪ್ರಕರಣಕ್ಕೆ ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಪರಿಹಾರ ವಿತರಿಸಲಾಗಿದೆ. ಸದ್ಯ ಅಕಾಲಿಕ ಮಳೆಯಿಂದ ಹಾನಿಯಾಗಿರುವ ಬೆಳೆ ಹಾನಿಗೆ 15 ದಿನಗಳಲ್ಲಿ ಪರಿಹಾರ ಭರಿಸಲಾಗುವುದು.

ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಹೆಚ್ಚಿನ ಹಣವಿದೆ. ಕೃಷಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಗಮನಹರಿಸುವುದು ಮೊದಲ ಆದ್ಯತೆಯಾಗಿದೆ ಎಂದು ಸಚಿವರು ನುಡಿದರು. ನವೆಂಬರ್ 26 ಮತ್ತು 27 ರಂದು ಜಿಲ್ಲೆಯಲ್ಲಿಯೂ ಅಕಾಲಿಕ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಕೃಷಿಕರು ಮುನ್ನೆಚ್ಚರ ವಹಿಸಬೇಕು ಎಂದು ಆರ್.ಅಶೋಕ್ ಸಲಹೆ ಮಾಡಿದರು.

ಅಕಾಲಿಕ ಮಳೆಯಿಂದಾಗಿ ಸೋಮವಾರಪೇಟೆ ತಾಲೂಕಿನ ಹೆಬ್ಬಾಲೆ ಗ್ರಾ.ಪಂ.ವ್ಯಾಪ್ತಿಯ ಮರೂರು ಗ್ರಾಮದಲ್ಲಿ ಅಧಿಕ ಮಳೆಯಿಂದಾಗಿ ಮುಸುಕಿನ ಜೋಳ ಮೊಳಕೆ ಬರುತ್ತಿದೆ. ಹಾಗೆಯೇ ಶುಂಠಿ ಬೆಳೆ ಕೊಳೆಯುತ್ತಿದೆ. ಆದ್ದರಿಂದ ಕೂಡಲೇ 15ದಿನದೊಳಗೆ ಬೆಳೆ ಹಾನಿಯಾದ ಕೃಷಿಕರಿಗೆ ಪರಿಹಾರ ವಿತರಿಸಲು ನಿರ್ದೇಶನ ನೀಡಲಾಗಿದೆ ಎಂದು ಕಂದಾಯ ಸಚಿವರು ಹೇಳಿದರು.

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಭಾರಿ ಮಳೆಯಿಂದ ಮೂರು ಮಾನವ ಪ್ರಾಣ ಹಾನಿಗೆ ಪರಿಹಾರ ವಿತರಿಸಲಾಗಿದೆ. 22 ಜಾನುವಾರು ಪ್ರಾಣ ಹಾನಿ ಪ್ರಕರಣಗಳಿಗೆ 4.86 ಲಕ್ಷ ರೂ ಪರಿಹಾರ ನೀಡಲಾಗಿದೆ. ಗುಡಿಸಲು ಹಾನಿ ಹಾಗೂ ಜಾನುವಾರು ಕೊಟ್ಟಿಗೆ ಹಾನಿ ಪ್ರಕರಣಗಳಿಗೆ ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಪರಿಹಾರ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ Twitter Facebook LinkedIn WhatsApp ಪುತ್ತೂರು: ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ|

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು