ರಾಯಪುರ: ಛತ್ತೀಸ್‌ಗಢದ ಕೊಂಡಗಾಂವ್ ಜಿಲ್ಲೆಯಲ್ಲಿ ವಿವಾಹಿತ ಪುರುಷ ಮತ್ತು ಆತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಜೂನ್ 11 ರಂದು ಊರಿಂದಬೇಡ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಅಕ್ರಮ ಸಂಬಂಧ ಹೊಂದಿದ್ದ ವಿವಾಹಿತ ಪುರುಷನ ಪತ್ನಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಘಟನೆ ಬೆಳಕಿಗೆ ಬಂದ ನಂತರ ತನಿಖೆಗಾಗಿ ಪೊಲೀಸ್ ತಂಡವನ್ನು ಗ್ರಾಮಕ್ಕೆ ಕಳುಹಿಸಲಾಗಿತ್ತು. ತನ್ನ ಪತಿ ಮತ್ತೊಬ್ಬ ಮಹಿಳೆಯ ಜೊತೆ ಇದ್ದುದ್ದನ್ನು ಕಂಡ ಪತ್ನಿ, ತನ್ನ ಸಂಬಂಧಿಕರನ್ನ ಕರೆದು ಬಳಿಕ ಮಹಿಳೆ ಹಾಗೂ ಪತಿ ಇಬ್ಬರನ್ನೂ ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತರ ಹೇಳಿಕೆಗಳ ಆಧಾರದ ಮೇಲೆ, ಉರಿಂದಬೇಡ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 354 ಮತ್ತು ಭಾರತೀಯ ದಂಡ ಸಂಹಿತೆಯ ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯ ಹೆಂಡತಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist