ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ - ಕೊಡಗಿನವರಿಗೆ ಗೌರವ.
Twitter
Facebook
LinkedIn
WhatsApp
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 2023ರ ಜನವರಿ 6, 7, 8 ರಂದು ಹಾವೇರಿಯಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ ಕೊಡಗು ಜಿಲ್ಲೆಯ ಸಾಧಕರನ್ನು ಸನ್ಮಾನಿಸುವ, ಸಾಹಿತಿಗಳಿಗೆ ಕವನ ವಾಚನ ಮತ್ತು ವಿಷಯ ಮಂಡನೆಗೆ ಅವಕಾಶ ನೀಡಲಾಗಿದೆ. ದಿನಾಂಕ 6/1/2023 ರ ಶುಕ್ರವಾರ ಸಂಜೆ 6.00 ಗಂಟೆಗೆ ನಡೆಯಲಿರುವ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಕೊಡಗಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಪುತ್ರರಾದ ನಿವೃತ್ತ ಏರ್ ಮಾರ್ಷಲ್ ಕೆ.ಸಿ.ಕಾರಿಯಪ್ಪ ಅವರಿಗೆ ರಕ್ಷಣಾ ಕ್ಷೇತ್ರದಲ್ಲಿ ದೇಶ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಸನ್ಮಾನ ನಡೆಯಲಿದೆ.
ಇದು ಕೊಡಗು ಜಿಲ್ಲೆಗೆ ಮತ್ತು ಕೊಡಗಿನ ರಕ್ಷಣಾ ಕ್ಷೇತ್ರದ ಸೇವೆಗೆ ನೀಡಿದ ಗೌರವವಾಗಿದೆ.