ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ - ಕೊಡಗಿನವರಿಗೆ ಗೌರವ.

Twitter
Facebook
LinkedIn
WhatsApp
file7nqtukz20oh1hykmvjjf1669234868

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 2023ರ ಜನವರಿ 6, 7, 8 ರಂದು ಹಾವೇರಿಯಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ ಕೊಡಗು ಜಿಲ್ಲೆಯ ಸಾಧಕರನ್ನು ಸನ್ಮಾನಿಸುವ, ಸಾಹಿತಿಗಳಿಗೆ ಕವನ ವಾಚನ ಮತ್ತು ವಿಷಯ ಮಂಡನೆಗೆ ಅವಕಾಶ ನೀಡಲಾಗಿದೆ. ದಿನಾಂಕ 6/1/2023 ರ ಶುಕ್ರವಾರ ಸಂಜೆ 6.00 ಗಂಟೆಗೆ ನಡೆಯಲಿರುವ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಕೊಡಗಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಪುತ್ರರಾದ ನಿವೃತ್ತ ಏರ್ ಮಾರ್ಷಲ್ ಕೆ.ಸಿ.ಕಾರಿಯಪ್ಪ ಅವರಿಗೆ ರಕ್ಷಣಾ ಕ್ಷೇತ್ರದಲ್ಲಿ ದೇಶ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಸನ್ಮಾನ ನಡೆಯಲಿದೆ.
ಇದು ಕೊಡಗು ಜಿಲ್ಲೆಗೆ ಮತ್ತು ಕೊಡಗಿನ ರಕ್ಷಣಾ ಕ್ಷೇತ್ರದ ಸೇವೆಗೆ ನೀಡಿದ ಗೌರವವಾಗಿದೆ.

08.01.2023ರ ಭಾನುವಾರ ಮಧ್ಯಾಹ್ನ 3:00ಗೆ ನಡೆಯಲಿರುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಕೊಡಗಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಕಟ್ಟಿ ಬೆಳೆಸಿದ, 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿದ ಸಾಹಿತ್ಯ ಸಂಘಟಕ ಟಿ.ಪಿ ರಮೇಶ್ ರವರನ್ನು ಸನ್ಮಾನಿಸಲಾಗುವುದು.
ದಿನಾಂಕ 06.01. 2023ರ ಭಾನುವಾರ 4 ಗಂಟೆಗೆ ಜರಗುವ ಕವಿಗೋಷ್ಠಿಯಲ್ಲಿ ಕೊಡಗಿನ ಹಿರಿಯ ಚುಟುಕು ಕವಿ ಹಾ.ತಿ ಜಯಪ್ರಕಾಶ್ ರವರು ಕವನ ವಾಚನ ಮಾಡಲಿದ್ದಾರೆ.
ದಿನಾಂಕ : 07.01.2023 ರ ಶನಿವಾರ ಮದ್ಯಾಹ್ನ 3.00 ಗಂಟೆಗೆ ನಡೆಯುವ “ಶಿಕ್ಷಣದಲ್ಲಿ ಕನ್ನಡ ಅಸ್ಮಿತೆ” ಎಂಬ ವಿಚಾರ ಗೋಷ್ಠಿಯಲ್ಲಿ ಕೊಡಗಿನವರಾದ, ಇದೀಗ ಹಂಪಿ ವಿಶ್ವವಿದ್ಯಾಲಯದಲ್ಲಿ ಹಿರಿಯ ಪ್ರಾಧ್ಯಾಪಕರಾದ
ಡಾ ಮಾಧವ ಪೆರಾಜೆ ( ಇವರು ದಿ. ಕೇಶವ ಪೆರಾಜೆ ಅವರ ಸಹೋದರರು) ಆಶಯ ಭಾಷಣ ಮಾಡಲಿದ್ದಾರೆ.
ದಿನಾಂಕ 07.01.2023ರ ಶನಿವಾರ ಕರ್ನಾಟಕ ಭಾಷಾ ವೈವಿಧ್ಯ ಕುರಿತು ನಡೆಯುವ ವಿಚಾರಗೋಷ್ಠಿಯಲ್ಲಿ ಕೊಡವ ಭಾಷಾ ವೈವಿಧ್ಯ ಕುರಿತು ಮಡಿಕೇರಿಯ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕಿ ಡಾ. ಕಾವೇರಿ ಎನ್ ಎ ಉಪನ್ಯಾಸ ನೀಡಲಿದ್ದಾರೆ. ಅದೇ ವೇದಿಕೆಯಲ್ಲಿ ಅರೆ ಭಾಷೆ ವೈವಿಧ್ಯತೆಯ ಕುರಿತು ಜಿಲ್ಲೆಯ ಸಾಹಿತಿ ಸ್ಮಿತಾ ಅಮೃತರಾಜ್ ಉಪನ್ಯಾಸ ನೀಡಲಿದ್ದಾರೆ.
ದಿನಾಂಕ. 08.01.2023 ಭಾನುವಾರ ವರ್ತಮಾನದಲ್ಲಿ ಮಹಿಳೆ ಗೋಷ್ಠಿಯಲ್ಲಿ ಔದ್ಯೋಗಿಕ ಮಹಿಳೆಯರ ಸಾಧನೆಗಳು ಎಂಬ ವಿಚಾರದ ಕುರಿತು ಜಿಲ್ಲೆಯ ಉದ್ಯಮಿ ಜೇನು ಕೃಷಿ ಮತ್ತು ಮಾರುಕಟ್ಟೆಯಲ್ಲಿ ಸಾಧನೆ ಸಾಧಿಸಿದ ಛಾಯಾ ನಂಜಪ್ಪ ವಿಷಯ ಮಂಡನೆ ಮಾಡಲಿದ್ದಾರೆ.

ಈ ಬಾರಿ ಸಮ್ಮೇಳನದಲ್ಲಿ ಕೊಡಗು ಜಿಲ್ಲೆಯ ಏಳು ಜನರಿಗೆ ಅವಕಾಶ ದೊರೆತಿದ್ದು ಇದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ ಸಂದ ಗೌರವವಾಗಿದೆ.
ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಕಾರ್ಯಕ್ರಮದಲ್ಲಿ ಸ್ವಾಗತ ಜವಾಬ್ದಾರಿ ನಿರ್ವಹಿಸಲಿದ್ದು ವಿರಾಜಪೇಟೆ ತಾಲೂಕು ಅಧ್ಯಕ್ಷ ಡಿ ರಾಜೇಶ್ ಪದ್ಮನಾಭ ಕಾರ್ಯಕ್ರಮ ನಿರ್ವಹಣೆ ಮಾಡಲಿದ್ದಾರೆ.
ಜಿಲ್ಲೆಯಿಂದ ನೂರಕ್ಕೂ ಹೆಚ್ಚು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರುಗಳು ಮತ್ತು ಕನ್ನಡ ಅಭಿಮಾನಿಗಳು ಈ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ ಮುನೀರ್ ಅಹ್ಮದ್ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ