ಶನಿವಾರ, ಮೇ 4, 2024
ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಗ್ನಿಪಥ ಯೋಜನೆ'ಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ: ಉನ್ನತ ಮಿಲಿಟರಿ ಅಧಿಕಾರಿ ಅನಿಲ್ ಪುರಿ

Twitter
Facebook
LinkedIn
WhatsApp
ಅಗ್ನಿಪಥ ಯೋಜನೆ’ಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ: ಉನ್ನತ ಮಿಲಿಟರಿ ಅಧಿಕಾರಿ ಅನಿಲ್ ಪುರಿ

ನವದೆಹಲಿ: ಕೇಂದ್ರ ರಕ್ಷಣಾ ಸಚಿವಾಲಯ ತಂದಿರುವ ಭಾರತೀಯ ಮಿಲಿಟರಿಗೆ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಹಿಂತೆಗೆದುಕೊಳ್ಳುವುದಿಲ್ಲ. ದೇಶದ ಯುವಶಕ್ತಿಯನ್ನು ಹೆಚ್ಚಿಸಲು ಇರುವ ಏಕೈಕ ಪ್ರಗತಿಪರ ಹೆಜ್ಜೆ ಎಂದು ದೇಶಾದ್ಯಂತ ಯೋಜನೆಗೆ ಪ್ರತಿಭಟನೆ ತೀವ್ರವಾಗಿರುವ ಸಂದರ್ಭದಲ್ಲಿ ಸೇನೆಯ ಹಿರಿಯ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಭಾರತೀಯ ಭೂಸೇನೆ, ನೌಕಾಸೇನೆ ಮತ್ತು ವಾಯುಸೇನೆಯ ಹಿರಿಯ ಅಧಿಕಾರಿಗಳು ಇಂದು ದೆಹಲಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಕೇಂದ್ರ ಸರ್ಕಾರ ಕಳೆದ ಜೂನ್ 14ರಂದು ಮಿಲಿಟರಿಯಲ್ಲಿ ಯುವಕರನ್ನು ನೇಮಕಾತಿ ಮಾಡುವ ಅಗ್ನಿಪಥ್ ಯೋಜನೆಯನ್ನು ಜಾರಿಗೆ ತಂದಿದ್ದು, ವಾಯುಸೇನೆಗೆ ಜೂನ್ 24ರಂದು ನೇಮಕಾತಿ ಆರಂಭವಾಗಲಿದೆ.

ಈ ಮಧ್ಯೆ ಅಗ್ನಿಪಥ ಯೋಜನೆ ಮಿಲಿಟರಿಗೆ ಸೇರುವ ಯುವಕರಿಗೆ ಮಾರಕವಾಗಿದೆ, ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತದೆ ಎಂದು ಬಿಹಾರ, ಪಶ್ಚಿಮ ಬಂಗಾಳ, ಹೈದರಾಬಾದ್, ಸಿಕಂದರಾಬಾದ್, ತೆಲಂಗಾಣ, ಪಂಜಾಬ್, ಕೇರಳ ರಾಜ್ಯಗಳಲ್ಲಿ ತೀವ್ರವಾಗಿ ಸಾವು ನೋವುಗಳು ಸಂಭವಿಸಿವೆ. ರೈಲು, ಬಸ್ಸು ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿಗಳು ಪ್ರತಿಭಟನೆ, ಹಿಂಸಾಚಾರದಲ್ಲಿ ಹಾನಿಗೀಡಾಗಿವೆ.

ಈ ಎಲ್ಲದರ ಮಧ್ಯೆ ಇಂದು ದೆಹಲಿಯಲ್ಲಿ ಭಾರತೀಯ ನೌಕಾಪಡೆ ಮತ್ತು ವಾಯುಪಡೆಯ ಅಧಿಕಾರಿಗಳೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಿಲಿಟರಿ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ, ಅಗ್ನಿಪಥ್ ಯೋಜನೆಯನ್ನು ಏಕೆ ಹಿಂತೆಗೆದುಕೊಳ್ಳಬೇಕು. ದೇಶವನ್ನು ಯುವಶಕ್ತಿಯನ್ನಾಗಿಸಲು ಅದೊಂದೇ ಪ್ರಗತಿಪರ ಹೆಜ್ಜೆಯಾಗಿದೆ. ದೇಶದ ಭದ್ರತೆ ದೃಷ್ಟಿಯಿಂದ ಈ ಯೋಜನೆ ಮುಖ್ಯವಾಗಿದೆ. ನಮ್ಮ ದೇಶದ ಅತಿ ಎತ್ತರದ ಪ್ರದೇಶಗಳಲ್ಲಿ ನೇಮಕಗೊಂಡಿರುವ ಮಿಲಿಟರಿ ಸಿಬ್ಬಂದಿಗಳು ಅನಾರೋಗ್ಯ ಕಾರಣದಿಂದ ಎಷ್ಟು ಮಂದಿ ಸಾಯುತ್ತಾರೆ ಎಂದು ನಿಮಗೆ ಗೊತ್ತಿದೆಯೇ, ಅದರ ಬಗ್ಗೆ ತಿಳಿದುಕೊಳ್ಳಿ ಆಗ ನಿಮಗೆ ಮಿಲಿಟರಿಯಲ್ಲಿ ಯುವಕರ ಅಗತ್ಯ ಎಷ್ಟಿರುತ್ತದೆ ಎಂಬುದು ಗೊತ್ತಾಗುತ್ತದೆ ಎಂದರು.

ನೇಮಕಾತಿ ಪ್ರಕ್ರಿಯೆಗೆ ಪ್ರಮಾಣಪತ್ರ ಕಡ್ಡಾಯ: ಮಿಲಿಟರಿ ಪಡೆಗೆ ಸೇರಲಿಚ್ಛಿಸುವ ಯುವಕರು ತಾವು ಪ್ರತಿಭಟನೆ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟದಲ್ಲಿ ಭಾಗಿಯಾಗಿರಲಿಲ್ಲ ಎಂದು ಶೇಕಡಾ 100ರಷ್ಟು ಪೊಲೀಸ್ ಪರಿಶೀಲನೆಯೊಂದಿಗೆ ಪ್ರಮಾಣಪತ್ರವನ್ನು ನೀಡಬೇಕಾಗುತ್ತದೆ ಎಂದು ಸಹ ಹೇಳಿದರು.

ಭಾರತೀಯ ಸೇನೆಯ ಅಡಿಪಾಯ ಶಿಸ್ತು. ಬೆಂಕಿ ಹಚ್ಚುವುದು, ವಿಧ್ವಂಸಕ ಕೃತ್ಯಗಳಿಗೆ ಇಲ್ಲಿ ಜಾಗವಿಲ್ಲ. ಪ್ರತಿಯೊಬ್ಬ ವ್ಯಕ್ತಿಯು ಪ್ರತಿಭಟನೆ ಅಥವಾ ವಿಧ್ವಂಸಕ ಕೃತ್ಯದ ಭಾಗವಾಗಿಲ್ಲ ಎಂದು ಪ್ರಮಾಣಪತ್ರವನ್ನು ತೋರಿಸಬೇಕಾಗುತ್ತದೆ. ಪೊಲೀಸ್ ಪ್ರಮಾಣಪತ್ರ ನೂರಕ್ಕೆ ನೂರು ಸರಿಯಾಗಿರುತ್ತದೆ. ಪ್ರಮಾಣಪತ್ರ ಇಲ್ಲದಿದ್ದರೆ ಸೇನೆ ಸೇರಲು ಸಾಧ್ಯವಿಲ್ಲ ಎಂದು ತಿಳಿಸಿದರು

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ