ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಡಿಕೆ, ಕಾಳುಮೆಣಸು ಆಮದಿಗೆ ಆಮ್ ಆದ್ಮಿ ಪಾರ್ಟಿ ವಿರೋಧ

Twitter
Facebook
LinkedIn
WhatsApp
ಅಡಿಕೆ, ಕಾಳುಮೆಣಸು ಆಮದಿಗೆ ಆಮ್ ಆದ್ಮಿ ಪಾರ್ಟಿ ವಿರೋಧ

ಬೆಂಗಳೂರು: ಕಡಿಮೆ ಗುಣಮಟ್ಟದ ಅಡಿಕೆ ಹಾಗೂ ಕಾಳುಮೆಣಸನ್ನು ವಿದೇಶಗಳಿಂದ ಆಮದು ಮಾಡಿಕೊಂಡು ನಮ್ಮ ಅಡಿಕೆ ಬೆಳೆಗಾರರ ಭವಿಷ್ಯದ ಜೊತೆ ಚೆಲ್ಲಾಟವಾಡುವ ಮೋದಿ ಸರ್ಕಾರದ ನಿರ್ಧಾರಕ್ಕೆ ಆಮ್ ಆದ್ಮಿ ಪಾರ್ಟಿ ತೀವ್ರ ವಿರೋಧ ವ್ಯಕ್ತಪಡಿಸಿತು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಮ್ ಆದ್ಮಿ ಪಾರ್ಟಿ ಮುಖಂಡ ಹಾಗೂ ಹಿರಿಯ ವಕೀಲ ಬ್ರಿಜೇಶ್ ಕಾಳಪ್ಪ, “ನಮ್ಮ ಕರ್ನಾಟಕವು ಜಗತ್ತಿನಲ್ಲೇ ಅತ್ಯುತ್ತಮ ಗುಣಮಟ್ಟದ ಅಡಿಕೆ ಹಾಗೂ ಕಾಳುಮೆಣಸು ಬೆಳೆಯುತ್ತಿದೆ. ಆದರೆ ಕೇಂದ್ರ ಸರ್ಕಾರವು ಭೂತಾನ್ನಿಂದ ಅಡಿಕೆಯನ್ನು ಹಾಗೂ ವಿಯೆಟ್ನಾಂನಿಂದ ಶ್ರೀಲಂಕಾ ಮೂಲಕ ಕಾಳುಮೆಣಸನ್ನು ಆಮದು ಮಾಡಿಕೊಳ್ಳಲು ಅವಕಾಶ ನೀಡಲು ಮುಂದಾಗಿದೆ. ಅವು ಕಡಿಮೆ ಗುಣಮಟ್ಟದ್ದಾಗಿದ್ದು, ಇಲ್ಲಿನ ಉತ್ತಮ ಗುಣಮಟ್ಟದ ಬೆಳೆಗಳೊಂದಿಗೆ ಮಿಶ್ರವಾಗುವುದರಿಂದ ಸ್ವದೇಶಿ ಅಡಿಕೆ ಹಾಗೂ ಕಾಳುಮೆಣಸಿನ ಬಗ್ಗೆ ಗ್ರಾಹಕರಲ್ಲಿ ತಪ್ಪು ಕಲ್ಪನೆ ಮೂಡಲಿದೆ” ಎಂದು ಹೇಳಿದರು.

“ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ ರಾಜ್ಯ ರೈತರು ಬೆಳೆದ ಅಡಿಕೆ ಹಾಗೂ ಕಾಳುಮೆಣಸಿಗೆ ಬೇಡಿಕೆ ಕಡಿಮೆಯಾಗಲಿದೆ. ರೈತರಿಗೆ ಸಿಗುವ ಬೆಲೆಯ ಮೇಲೆ ಇದು ಕೆಟ್ಟ ಪರಿಣಾಮ ಪರಿಣಾಮ ಬೀರಲಿದೆ. ಭಾರತಕ್ಕೆ ಅಗತ್ಯವಿರುವಷ್ಟು ಅಡಿಕೆ ಹಾಗೂ ಕಾಳುಮೆಣಸನ್ನು ನಮ್ಮ ರೈತರೇ ಉತ್ಪಾದಿಸುವಾಗ ಆಮದು ಮಾಡಿಕೊಳ್ಳುವ ಅಗತ್ಯವೇನಿದೆ..?” ಎಂದು ಬ್ರಿಜೇಶ್ ಕಾಳಪ್ಪ ಪ್ರಶ್ನಿಸಿದರು.
“ಒಂದುವೇಳೆ ಅಡಿಕೆ ಹಾಗೂ ಕಾಳುಮೆಣಸನ್ನು ಸರ್ಕಾರ ಆಮದು ಮಾಡಿಕೊಳ್ಳುವುದಾದರೆ, ಭಾರೀ ಮೊತ್ತದ ಆಮದು ಸುಂಕವನ್ನು ಸರ್ಕಾರ ಇವುಗಳಿಗೆ ವಿಧಿಸಬೇಕು. ಭಾರತೀಯ ರೈತರನ್ನು ರಕ್ಷಿಸಲು ಪರಿಣಾಮಕಾರಿಯಾದ ಆಮದು ಸುಂಕ ನೀತಿ ಇಲ್ಲದಿರುವ ಸಂದರ್ಭವನ್ನು ದುರ್ಬಳಕೆ ಮಾಡಿಕೊಳ್ಳಲು ಆಮದುದಾರರಿಗೆ ಅವಕಾಶ ನೀಡಬಾರದು. ಅಡಿಕೆ ಹಾಗೂ ಕಾಳುಮೆಣಸು ಆಮದಿಗೆ ಸಂಬಂಧಿಸಿ ಪ್ರಭಾವಿಗಳಿಂದ ಸಫೆಮಾ, ಫೆರಾ ಮುಂತಾದ ಕಾನೂನುಗಳ ಉಲ್ಲಂಘನೆಯಾಗಿರುವುದು ಕಂಡುಬರುತ್ತಿದೆ. ಸರ್ಕಾರದ ಈ ರೈತವಿರೋಧಿ ನೀತಿಯ ಹಿಂದೆ ಭಾರೀ ಪ್ರಮಾಣದ ಹಣ ಕೆಲಸ ಮಾಡಿದ್ದು, 40% ಕಮಿಷನ್ಗಾಗಿ ರೈತರ ಹಿತದೊಂದಿಗೆ ರಾಜಿ ಮಾಡಿಕೊಳ್ಳಲಾಗಿದೆ. ಈ ಕುರಿತು ಸಂಬಂಧಪಟ್ಟ ನಾಯಕರು ಹಾಗೂ ಅಧಿಕಾರಿಗಳ ವಿರುದ್ಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಯಾಗಬೇಕು ಎಂಬುದು ಆಮ್ ಆದ್ಮಿ ಪಾರ್ಟಿಯ ಆಗ್ರಹವಾಗಿದೆ” ಎಂದು ಹೇಳಿದರು.

ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಮಾಧ್ಯಮ ವಕ್ತಾರ ಉಷಾ ಮೋಹನ್ ಮಾತನಾಡಿ, “ಹಲವು ದಶಕಗಳಿಂದ ಬಾಧಿಸುತ್ತಿರುವ ಹಳದಿರೋಗ ಹಾಗೂ ಕೊಳೆ ರೋಗದಿಂದ ಅಡಿಕೆ ಬೆಳೆಗಾರರು ತೊಂದರೆ ಅನುಭವಿಸುತ್ತಿದ್ದಾರೆ. ಇತ್ತೀಚೆಗೆ ಆರಂಭವಾದ ಎಲೆಚುಕ್ಕಿ ರೋಗವು ತೀವ್ರ ಸ್ವರೂಪ ಪಡೆಯುತ್ತಿದ್ದು, ಇದರಿಂದ ಭಾರೀ ಪ್ರಮಾಣದಲ್ಲಿ ಬೆಳೆ ನಾಶವಾಗುತ್ತಿದೆ. ಇಂತಹ ಸಂದರ್ಭದಲ್ಲಿ ರೈತರಿಗೆ ನೆರವಾಗಬೇಕಾದ ಸರ್ಕಾರವು ಅಡಿಕೆಯನ್ನು ಆಮದು ಮಾಡಿಕೊಳ್ಳುವ ಮೂಲಕ ಗಾಯದ ಮೇಲೆ ಬರೆ ಎಳೆಯಲು ಹೊರಟಿರುವುದು ಅಮಾನವೀಯ ನಡೆ” ಎಂದು ಹೇಳಿದರು.ಈ ಬಗ್ಗೆ ಪ್ರಧಾನಿಗಳಿಗೆ ಹಾಗೂ ಕೇಂದ್ರದ ವಾಣಿಜ್ಯ ಖಾತೆ ಸಚಿವರಿಗೆ ಪತ್ರ ಬರೆಯಲಾಗಿದೆ ಹಾಗೂ ಸಂಸತ್ತಿನಲ್ಲೂ ಆಮ್ ಆದ್ಮಿ ಪಕ್ಷದಿಂದ ಈ ಬಗ್ಗೆ ವಿರೋಧ ಮಾಡಲಾಗುತ್ತದೆ ಎಂದು ತಿಳಿಸಿದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ