ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅತೀವೇಗದಿಂದ ಚಲಿಸಿದ ಕಾರು ಅಪಘಾತ, ಟ್ರಕ್‌ಗೆ ಡಿಕ್ಕಿಯಾಗಿ ಐವರ ಸಾವು!

Twitter
Facebook
LinkedIn
WhatsApp
ಅತೀವೇಗದಿಂದ ಚಲಿಸಿದ ಕಾರು ಅಪಘಾತ, ಟ್ರಕ್‌ಗೆ ಡಿಕ್ಕಿಯಾಗಿ ಐವರ ಸಾವು!

ಸುಲ್ತಾನಪುರ: ಭಾರತದಲ್ಲಿ ರಸ್ತೆ ಅಪಘಾತ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಅತೀ ವೇಗ, ನಿಯಮಗಳ ನಿರ್ಲಕ್ಷ್ಯ ಸೇರಿದಂತೆ ಹಲವು ಕಾರಣಗಳಿಂದ ಅಪಘಾತ ಸಂಭವಿಸುತ್ತಿದೆ. ಅದರಲ್ಲೂ ಎಕ್ಸ್‌ಪ್ರೆಸ್‌ವೇನಲ್ಲಿ ಅತೀವೇಗದ ಪರಿಣಾಮ ಅಪಘಾತದ ಪ್ರಮಾಣ ಜಾಸ್ತಿಯಾಗಿದೆ. ಇದೀಗ ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇನಲ್ಲಿ ಅತೀವೇಗದಿಂದ ಕಾರು ಟ್ರಕ್‌ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ದೆಹಲಿಯಿಂದ ಬಿಹಾರಕ್ಕೆ ತೆರಳುತ್ತಿದ್ದ ವೇಳೆ  ಯುಪಿಯ ಸುಲ್ತಾನಪುರ್ ಜಿಲ್ಲೆ ಬಳಿ ಈ ಘಟನೆ ನಡೆದಿದೆ.

ಮೃತರನ್ನು 19 ವರ್ಷದ ಸಾಹಿಲ್ ಖಂದ್, ಶಾರುಖ್(25), ಸೈನಾ ಖಟೂನ್(37), ಜಮೀಲಾ(33) ಹಾಗೂ ರುಕ್ಸರ್(31) ಎಂದು ಗುರುತಿಸಲಾಗಿದೆ. ದೆಹಲಿಯಿಂದ ಬಿಹಾರದ ಸಸರಾಂಗೆ ತೆರಳಲು ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ ಮೂಲಕ ಸಾಗಿದ್ದಾರೆ. ಅತೀ ವೇಗದದಲ್ಲಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ.

ಅಪಘಾತ ಸಂಭವಿಸಿದ ಬೆನ್ನಲ್ಲೇ ಗಾಯಾಳುಗಳನ್ನು ಆಸ್ಪತ್ರೆ ಸಾಗಿಸಲಾಗಿದೆ. ಆದರೆ ಆಸ್ಪತ್ರೆ ಸೇರುವ ಮೊದಲೇ ಐವರು ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಿಂದ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇನಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಸಂಭವಿಸಿತ್ತು.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಮೃತರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಭೀಕರ ಅಪಘಾತ ಎಕ್ಸ್‌ಪ್ರೆಸ್‌ವೇನಲ್ಲಿನ ಅತೀವೇಗದ ಚಾಲನೆಗೆ ನೀಡಿದ ಮುನ್ನಚ್ಚೆರಿಕಿಯಾಗಿದೆ. ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸುತ್ತಿರುವ ಅಪಘಾತಗಳ ಪ್ರಮಾಣ ಇತರ ಹೆದ್ದಾರಿಗಳಿಗಿಂತ ಕಡಿಮೆಯಾಗಿದೆ. ಆದರೆ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸುತ್ತಿರುವ ಅಪಘಾತಗಳು ಅತ್ಯಂತ ಭೀಕರ ಅನ್ನೋ ಅಭಿಪ್ರಾಯಗಳು ವ್ಯಕ್ತವಾಗಿದೆ. ಇತ್ತ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ಸಂಖ್ಯೆ ಹೆಚ್ಚಾಗುತ್ತಿದೆ. ಎಕ್ಸ್‌ಪ್ರೆಸ್‌ವೇ ಅವೈಜ್ಞಾನಿಕ ಅನ್ನೋ ಮಾತುಗಳು ಕೇಳಿಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ