ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅತ್ಯಾಚಾರ ಪ್ರಕರಣ| ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ದೋಷಿ

Twitter
Facebook
LinkedIn
WhatsApp
mcms 3

ಗಾಂಧಿನಗರ: 2013ರ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ದೋಷಿ ಎಂದು ಗಾಂಧಿನಗರ ಸೆಷನ್ಸ್ ಕೋರ್ಟ್ ಇಂದು(ಜ.30) ತೀರ್ಪು ನೀಡಿದೆ.

2013ರಲ್ಲಿ ಸೂರತ್‌ನ ಅಪ್ರಾಪ್ತ ಬಾಲಕಿಯೊಬ್ಬಳು ರಾಜಸ್ಥಾನದ ಆಶ್ರಮದಲ್ಲಿ ಅಸಾರಾಂ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿದ್ದಳು. ಈ ದೂರಿನ ಆಧಾರದಲ್ಲಿ ಆತನನ್ನು 2013ರ ಆಗಸ್ಟ್​ 31ರಂದು ಬಂಧಿಸಲಾಗಿತ್ತು. 2018ರಲ್ಲಿ ಜೋಧ್‌ಪುರ ನ್ಯಾಯಾಲಯವು ನಗರದ ತನ್ನ ಆಶ್ರಮದಲ್ಲಿ 16 ವರ್ಷದ ಹುಡುಗಿಯ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ 77 ವರ್ಷದ ಅಸಾರಾಂ ಬಾಪು ಸೇರಿ ನಾಲ್ವರು ಆರೋಪಿಗಳನ್ನು ತಪ್ಪಿತಸ್ಥರೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು.

2013ರ ಆಗಸ್ಟ್ 15ರಂದು ಅಸಾರಾಂ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಛಿಂದ್ವಾರದಲ್ಲಿರುವ ಅಸಾರಾಂ ಆಶ್ರಮದಲ್ಲಿ ಕಲಿಯುತ್ತಿದ್ದ ಉತ್ತರಪ್ರದೇಶದ ಷಹಜಹಾನ್‌ಪುರದ ಬಾಲಕಿ ದೂರು ನೀಡಿದ್ದಳು. ಈ ಪ್ರಕರಣದಲ್ಲಿ ಆಸಾರಾಂ ನನ್ನು ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣ ಇನ್ನಷ್ಟೇ ಪ್ರಕಟವಾಗಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ