ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅದಾನಿ ವಿಚಾರದಲ್ಲಿ ತೀವ್ರವಾದ ಪ್ರತಿಪಕ್ಷಗಳ ಪ್ರತಿಭಟನೆ – ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ

Twitter
Facebook
LinkedIn
WhatsApp
ms 070223 killer1 1

ನವದೆಹಲಿ: ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ಮಧ್ಯಾಹ್ನ ಎರಡು ಗಂಟೆಗೆ ಮುಂದೂಡಿಕೆಯಾಗಿದೆ. ಅದಾನಿ ವಿಚಾರದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ ತೀವ್ರವಾದ ಹಿನ್ನಲೆ ಉಭಯ ಸದನಗಳ ಕಲಾಪವನ್ನು ಮುಂದೂಡಲಾಗಿದೆ.

ಸದನ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ಆರಂಭಿಸಿದ ವಿಪಕ್ಷಗಳು ಸಂಸತ್ತಿನ ಜಂಟಿ ಸಂಸದೀಯ ಸಮಿತಿ ಅಥವಾ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ನೇತೃತ್ವದಲ್ಲಿ ಅದಾನಿ ಪ್ರಕರಣ ತನಿಖೆಯಾಗಬೇಕು ಮತ್ತು ಈ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದವು. ಸದನದಲ್ಲಿ ಗದ್ದಲ ಹೆಚ್ಚುತ್ತಿದ್ದಂತೆ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭೆ ಅಧ್ಯಕ್ಷ ಜಗದೀಪ್ ಧನಕರ್ ಕಲಾಪವನ್ನು ಮುಂದೂಡಿದರು.

ಇದಕ್ಕೂ ಮುನ್ನ ಎಐಸಿಸಿ ಅಧ್ಯಕ್ಷ ರಾಜ್ಯಸಭೆ ಸಂಸದ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ವಿಪಕ್ಷಗಳು ಸಭೆ ನಡೆಸಿದವು. ಸಭೆಯಲ್ಲಿ ಸದನದಲ್ಲಿ ಚರ್ಚೆಗೆ ಅವಕಾಶ ಸಿಗುವವರೆಗೂ ಪ್ರತಿಭಟನೆ ಮುಂದುವರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಉಭಯ ಕಲಾಪಗಳು ಆರಂಭಕ್ಕೂ ಮುನ್ನ ಸಂಸತ್ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಆಗಮಿಸಿದ ನಾಯಕರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ