ಸೋಮವಾರ, ಏಪ್ರಿಲ್ 29, 2024
ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅದಾನಿ ವಿರುದ್ಧ ತನಿಖೆಗೆ ಸುಪ್ರೀಂ ಆದೇಶ

Twitter
Facebook
LinkedIn
WhatsApp
gautham adani1675398605

ನವದೆಹಲಿ: ಇತ್ತೀಚಿಗೆ ಅದಾನಿ ಗ್ರೂಪ್ ಷೇರುಗಳ ಕುಸಿತ ಸೇರಿದಂತೆ ಷೇರು ಮಾರುಕಟ್ಟೆಯ ವಿವಿಧ ನಿಯಂತ್ರಕ ಅಂಶಗಳನ್ನು ಪರಿಶೀಲಿಸಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶ ನೀಡಿದ್ದು, ಇದು ಮೋದಿ ಸರ್ಕಾರಕ್ಕೆ “ದೊಡ್ಡ ಕಪಾಳಮೋಕ್ಷ” ಎಂದು ಆಮ್ ಆದ್ಮಿ ಪಕ್ಷ ಹೇಳಿದೆ.

ಇಂದು ಮೋದಿ ಸರ್ಕಾರ ಭ್ರಷ್ಟ ಮತ್ತು ನಿಷ್ಪ್ರಯೋಜಕ ಎಂಬುದು ಸಾಬೀತಾಗಿದೆ ಎಂದು ಎಎಪಿ ರಾಷ್ಟ್ರೀಯ ವಕ್ತಾರ ಸಂಜಯ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ಅದಾನಿ ಗ್ರೂಪ್ ಹಾಗೂ ಹಿಂಡೆನ್‌ಬರ್ಗ್ ವಿವಾದದ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್, ತನ್ನ ನಿವೃತ್ತ ನ್ಯಾಯಮೂರ್ತಿ ಎ.ಎಂ. ಸಪ್ರೆ  ನೇತೃತ್ವದಲ್ಲಿ ಸಮಿತಿ ರಚಿಸಿದೆ. 

ಸುಪ್ರೀಂ ಕೋರ್ಟ್ ಆದೇಶಕ್ಕೆ ಪ್ರತಿಕ್ರಿಯಿಸಿದ ಎಎಪಿ ನಾಯಕ, “ಇದರಿಂದ ಮೋದಿ ಸರ್ಕಾರ ಕಪಾಳಮೋಕ್ಷ ಮಾಡಿದಂತಾಗಿದೆ. ಅದಾನಿಯನ್ನು ಉಳಿಸಲು ಮೋದಿ ಯಾವ ಹಂತಕ್ಕೂ ಬೇಕಾದರೂ ಹೋಗಬಹುದು ಎಂದರು.

ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ. ಆದರೆ ಮೋದಿ ಸರ್ಕಾರ ಅದನ್ನು ಸ್ಪಷ್ಟವಾಗಿ ತಿರಸ್ಕರಿಸಿದೆ. ಹೀಗಾಗಿ ದೇಶದ ಸುಪ್ರೀಂ ಕೋರ್ಟ್ ಅಂತಿಮವಾಗಿ ಮಧ್ಯಪ್ರವೇಶಿಸಬೇಕಾಯಿತು ಎಂದು ಸಿಂಗ್ ಹೇಳಿದ್ದಾರೆ.

 
 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ